ಭಾರತದ ಷೇರು ಮಾರುಕಟ್ಟೆಯ ಅತ್ಯಂತ ಮೌಲ್ಯಯುತ ಹತ್ತು ಕಂಪೆನಿಗಳ ಪೈಕಿ ಕಳೆದ ವಾರ (ಜುಲೈ 03 ತನಕ) 3 ಕಂಪನಿಗಳ ಮೌಲ್ಯ ಕುಸಿತವಾಗಿದೆ, ಒಟ್ಟಾರೆ ಮಾರುಕಟ್ಟೆ ಚೇತರಿಕೆ ಕಂಡಿದೆ.
ಕಳೆದ ವಾರ ಎಲ್ಲಾ ಟಾಪ್ 10 ಕಂಪನಿಗಳ 3 ಕಂಪನಿಗಳಿಂದ ಒಟ್ಟಾರೆ 73,630 ಕೋಟಿ ರು ಮೌಲ್ಯ ಕುಸಿತವಾಗಿದೆ. ದೇಶದ ಅತಿ ಮೌಲ್ಯಯುತ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಹೆಚ್ಚು ನಷ್ಟ ಕಂಡಿದೆ.
ರಷ್ಯಾ- ಉಕ್ರೇನ್ ಯುದ್ಧದ ನಡುವೆ ಜಾಗತಿಕ ಮಾರುಕಟ್ಟೆ ಏರಿಳಿತ ಕಾಣುತ್ತಿದ್ದು, ಆರ್ ಬಿಐ ರೆಪೋ ದರ ಏರಿಕೆ, ಜಾಗತಿಕವಾಗಿ ಅನೇಕ ದೇಶಗಳಲ್ಲಿನ ಬ್ಯಾಂಕ್ ಬಡ್ಡಿದರ ಏರಿಕೆ, ಆಮದು -ರಫ್ತು ನಿರ್ಬಂಧ, ಜಿ7, ಬ್ರಿಕ್ಸ್, ಜಿ20 ಸಮ್ಮೇಳನ ನಂತರ ಜಿಎಸ್ಟಿ ಸಭೆ ಮುಂತಾದ ವಿದ್ಯಮಾನ ಎಲ್ಲದರ ಪರಿಣಾಮ ಸ್ಥಳೀಯ ಮಾರುಕಟ್ಟೆಯಲ್ಲಿ ಭಾರಿ ವ್ಯತ್ಯಾಸ ಕಂಡಿವೆ. ಕಳೆದ ಎರಡು ವಾರಗಳಿಂದ ರಿಲಯನ್ಸ್ ಸಂಸ್ಥೆ ಭಾರಿ ನಷ್ಟ ಮುಂದುವರೆದಿದೆ.
ಕಳೆದ ವಾರ, ಬೆಂಚ್‌ಮಾರ್ಕ್ 30 ಷೇರು ಬಿಎಸ್‌ಇ ಸೆನ್ಸೆಕ್ಸ್179.95 ಪಾಯಿಂಟ್‌ಗಳು ಅಥವಾ ಶೇಕಡಾ 0.34 ಏರಿಕೆ ಕಂಡಿತ್ತು. ನಿಫ್ಟಿ 52.80 ಅಂಶ ಅಥವಾ ಶೇ 0.33 ರಷ್ಟು ಏರಿಕೆ ಕಂಡಿತ್ತು. ಕಳೆದ ವಾರದಲ್ಲಿ ಹೂಡಿಕೆದಾರರು ಸುರಕ್ಷೆಯ ವಿಧಾನ ಅನುಸರಿಸಿ, ಹೆಚ್ಚಿನ ಹೂಡಿಕೆಗೆ ಮುಂದಾದರು. ಯಾವ ಕಂಪನಿ ಮೌಲ್ಯ ಎಷ್ಟಾಗಿದೆ ಎಂಬ ವಿವರ ಮುಂದೆ ಓದಿ..
ಪ್ರಮುಖ ಕಂಪನಿಗಳಿಗೆ ನಷ್ಟ
ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆ ಮೌಲ್ಯ 6,654.2 ಕೋಟಿ ರು ಏರಿಕೆ ಕಂಡು 16,29,684.50 ಕೋಟಿ ರು ತಲುಪಿದೆ. ಐಸಿಐಸಿಐ ಬ್ಯಾಂಕು 17,813.78 ಕೋಟಿ ರು ಇಳಿಕೆ ಕಂಡು 4,89,700.16 ಕೋಟಿ ರುಗೆ ಮೌಲ್ಯ ಕುಸಿದಿದೆ. ಹಿಂದೂಸ್ತಾನ್ ಯೂನಿಲಿವರ್ ಸಂಸ್ಥೆ ಮೌಲ್ಯ 4,875.41 ಕೋಟಿ ರು ಕುಸಿತ ಕಂಡು 5,36,364.69 ಕೋಟಿ ರು ತಲುಪಿದೆ.
ಇನ್ಫೋಸಿಸ್ ಸಂಸ್ಥೆ
ದೇಶದ ಎರಡನೇ ಅತಿ ದೊಡ್ಡ ಸಂಸ್ಥೆ ಇನ್ಫೋಸಿಸ್ ಸಂಸ್ಥೆ 15,172.88 ಕೋಟಿ ರು ಹೆಚ್ಚಳ ಕಂಡು 6,21,907.38 ಕೋಟಿ ರು ಮೌಲ್ಯಕ್ಕೇರಿದೆ. ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) 11,200.38 ಕೋಟಿ ರು ವ್ಯತ್ಯಾಸ ಕಂಡು 4,16,690.11 ಕೋಟಿ ರುಗೇರಿದೆ.
ಭಾರತೀಯ ಜೀವ ವಿಮಾ ನಿಗಮ
ಇದೇ ವೇಳೆ ಭಾರತೀಯ ಜೀವ ವಿಮಾ ನಿಗಮ(ಎಲ್ಐಸಿ) ದ ಮೌಲ್ಯ 9,519.12 ಕೋಟಿ ರು ಏರಿಕೆಯಾಗಿ 4,28,044.22 ಕೋಟಿ ರು ತಲುಪಿದೆ. ಅತಿ ದೊಡ್ಡ ಸಾಫ್ಟ್ ವೇರ್ ರಫ್ತು ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ 8,489 ಕೋಟಿ ರು ಏರಿಕೆ ಕಂಡು 12,13,396.32 ಕೋಟಿ ರು ಮೌಲ್ಯಕ್ಕೇರಿದೆ.
ಎಚ್ ಡಿ ಎಫ್ ಸಿ
ಖಾಸಗಿ ವಲಯದ ಪ್ರಮುಖ ಬ್ಯಾಂಕುಗಳಾದ ಎಚ್ ಡಿ ಎಫ್ ಸಿ 3,924.46 ಕೋಟಿ ರು ಏರಿಕೆ ಕಂಡು 4,01,114.96 ಕೋಟಿ ರು ತಲುಪಿದೆ. ಎಚ್ ಡಿ ಎಫ್ ಸಿ ಬ್ಯಾಂಕ್ ಮೌಲ್ಯ 91.72 ಕೋಟಿ ರು ತಗ್ಗಿ 7,51,892.03 ಕೋಟಿ ರು ಆಗಿದೆ. ಪ್ರಮುಖ ಟೆಲಿಕಾಂ ಸಂಸ್ಥೆ ಭಾರ್ತಿ ಏರ್ ಟೆಲ್ 1,043.49 ಕೋಟಿ ರು ಹೆಚ್ಚಳ ಕಂಡು 3,69,833.12 ಕೋಟಿ ರು ಆಗಿದೆ.
ಟಾಪ್ 10 ಕಂಪನಿಗಳು
ಟಾಪ್ 10 ಕಂಪನಿಗಳು: ರಿಲಯನ್ಸ್ ಇಂಡಸ್ಟ್ರೀಸ್ ಮತ್ತೊಮ್ಮೆ ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ಎಚ್ ಡಿ ಎಫ್ ಸಿ ಬ್ಯಾಂಕ್, ಇನ್ಫೋಸಿಸ್, ಹಿಂದೂಸ್ತಾನ್ ಯೂನಿಲಿವರ್, ಐಸಿಐಸಿಐ ಬ್ಯಾಂಕ್, ಎಲ್ ಐ ಸಿ, ಎಸ್ ಬಿಐ, ಎಚ್ ಡಿ ಎಫ್ ಸಿ ಹಾಗೂ ಭಾರ್ತಿ ಏರ್ ಟೆಲ್.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ



Click it and Unblock the Notifications