ಜುಲೈ 15 ರವರೆಗೆ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆ ಇಲ್ಲ

ನವದೆಹಲಿ, ಜೂನ್ 26: ದೇಶದಲ್ಲಿ ಕೊರೊನಾವೈರಸ್ ಹಾವಳಿ ನಿಲ್ಲುತ್ತಿಲ್ಲವಾದ್ದರಿಂದ ಜುಲೈ 15 ರವರೆಗೆ ಅಂತಾರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆ ಸ್ಥಗೀತಗೊಳಿಸುವ ನಿರ್ಧಾರವನ್ನು ನಾಗರಿಕ ವಿಮಾನಯಾನ ಸಚಿವಾಲಯ ತೆಗೆದುಕೊಂಡಿದೆ.

ಆದರೆ, ಆಯ್ದ ಮಾರ್ಗಗಳಲ್ಲಿ ಅಂತಾರಾಷ್ಟ್ರೀಯ ವಿಮಾನಯಾನಕ್ಕೆ ಅವಕಾಶ ನೀಡಲು ಸಚಿವಾಲಯ ಶುಕ್ರವಾರ ನಿರ್ಧರಿಸಿದೆ. ಕೇಸ್ ಟು ಕೇಸ್ ಆಧಾರದ ಮೇಲೆ ಸಂಬಂಧಿಸಿದ ಪ್ರಾಧಿಕಾರವು ಆಯ್ದ ಮಾರ್ಗಗಳಲ್ಲಿ ಮಾತ್ರ ಅಂತಾರಾಷ್ಟ್ರೀಯ ನಿಗದಿತ ವಿಮಾನಗಳಿಗೆ ಅನುಮತಿಸಬಹುದು ಎಂದು ನಾಗರಿಕ ವಿಮಾನಯಾನ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

COVID-19 ಸೊಂಕು ಹರಡುವುದನ್ನು ತಡೆಯಲು ಮಾರ್ಚ್ ಕೊನೆಯ ವಾರದಿಂದ ಎಲ್ಲಾ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು. ಕೆಲ ಕಠಿಣ ಕ್ರಮಗಳನ್ನು ಅನುಸರಿಸಿ ಮೇ 25 ರಂದು ದೇಶೀಯ ವಿಮಾನಗಳ ಕಾರ್ಯಾಚರಣೆ ಪುನರಾರಂಭವಾಗಿದೆ. ಅಂತಾರಾಷ್ಟ್ರೀಯ ವಿಮಾನಗಳ ಜುಲೈ 1 ರಿಂದ ಹಾರಾಟದ ನಿರೀಕ್ಷೆ ವ್ಯಕ್ತಪಡಿಸಿದ್ದವರಿಗೆ ನಿರಾಶೆಯಾಗಿದೆ.

ಜುಲೈ 15 ರವರೆಗೆ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆ ಇಲ್ಲ

ದೇಶದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿದೆ. ಇತ್ತೀಚಿನ ಅಂಕಿ ಸಂಖ್ಯೆಗಳ ಪ್ರಕಾರ 4.90 ಲಕ್ಷ ಜನರಿಗೆ ಮಾರಕ ಸೋಂಕು ತಗುಲಿದ್ದು ದೃಢಪಟ್ಟಿದೆ. 15,301 ಜನ ಮೃತಪಟ್ಟಿದ್ದಾರೆ.2.86 ಲಕ್ಷ ಜನ ಚೇತರಿಸಿಕೊಂಡಿದ್ದಾರೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+