ಪ್ರಧಾನಮಂತ್ರಿಗಳು ಬಡವರ ಕಲ್ಯಾಣ ಯೋಜನೆಯಡಿ ಮಹಿಳೆಯರಿಗೆ 500 ರುಪಾಯಿಗಳನ್ನು ಶುಕ್ರವಾರದಿಂದ(ಏಪ್ರಿಲ್ 3) ಜನಧನ್ ಖಾತೆಗಳಿಗೆ ನೇರ ವರ್ಗಾಯಿಸುವುದಾಗಿ ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಕುರಿತು ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಮಾಹಿತಿ ನೀಡಲಾಗಿದ್ದು, ಪ್ರಧಾನಮಂತ್ರಿಗಳ ಜನಧನ್ ಯೋಜನೆಯ ಖಾತೆ ಇರುವವರ ಮಹಿಳೆಯರಿಗೆ ಏಪ್ರಿಲ್ 2020ರ ಅವಧಿಯ 500 ರುಪಾಯಿಗಳನ್ನು ಇಂದು ಆಯಾ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ ಎಂದು ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಚಿಂದ್ರ ಮಿಶ್ರಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಣ ಪಡೆಯಲು ಎಲ್ಲಾ ಮಹಿಳೆಯರು ಒಮ್ಮೆಲೆ ಬ್ಯಾಂಕ್ಗಳಿಗೆ ಧಾವಿಸುವಂತಾಗಬಾರದು. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು. ಹೀಗಾಗಿ ಖಾತೆಯ ಸಂಖ್ಯೆಯ ಕಡೆಯ ಅಂಕಿಯ ಆಧಾರದ ಮೇಲೆ ದಿನಾಂಕವನ್ನು ನಿಗದಿ ಮಾಡಿದ್ದು ಅದರಂತೆ ಹಣ ಪಡೆದುಕೊಳ್ಳಬಹುದು.
0 ಅಥವಾ 1 ಅಂಕೆಯಿಂದ ಕೊನೆಗೊಳ್ಳುವ ಖಾತೆ ಸಂಖ್ಯೆಯುಳ್ಳವರು ಏಪ್ರಿಲ್ 3ರಂದು, 2 ಅಥವಾ 3 ಅಂಕೆಯಿಂದ ಕೊನೆಗೊಳ್ಳುವ ಸಂಖ್ಯೆಯುಳ್ಳವರು ಏಪ್ರಿಲ್ 4 ರಂದು, 4 ಅಥವಾ 5 ಸಂಖ್ಯೆಯುಳ್ಳವರು ಏಪ್ರಿಲ್ 7ರಂದು, 6 ಅಥವಾ 7 ಸಂಖ್ಯೆಯುಳ್ಳವರು ಏಪ್ರಿಲ್ 8ರಂದು ಹಾಗೂ 8 ಅಥವಾ 9 ಅಂಕೆಯುಳ್ಳ ಖಾತೆ ಸಂಖ್ಯೆಯುಳ್ಳವರು ಏಪ್ರಿಲ್ 9ರಂದು ಹಣವನ್ನು ಪಡೆದುಕೊಳ್ಳಬಹುದಾಗಿದೆ.
ಏಪ್ರಿಲ್ 9ನೇ ತಾರೀಖಿನ ನಂತರ ಯಾವುದೇ ಬ್ಯಾಂಕ್ ಅವಧಿಯಲ್ಲಿ ಶಾಖೆಗಳಿಗೆ ಭೇಟಿ ನೀಡಿ ಹಣ ಪಡೆದುಕೊಳ್ಳಬಹುದು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications