ಅಬ್ಬಾ... ಕೊನೆಗೂ ಚಿನ್ನ ಪ್ರಿಯರಿಗೆ ಸಿಕ್ಕೇ ಬಿಡ್ತು ಗುಡ್ ನ್ಯೂಸ್. ದಿಢೀರ್ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇದೀಗ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ನಿನ್ನೆಗೆ ಹೋಲಿಸಿದ್ರೆ ಇಂದು (ಅ.30) ಭಾರತದಲ್ಲಿ ಚಿನ್ನದ ದರ ಭಾರೀ ಇಳಿಕೆಯಾಗಿದೆ. ಹಾಗಿದ್ರೆ ಇಂದು ಚಿನ್ನದ ಬೆಲೆ (Gold Rate) ಎಷ್ಟು ಕಮ್ಮಿಯಾಗಿದೆ ಗೊತ್ತಾ? ಇಲ್ಲಿದೆ ಓದಿ ಸಂಪೂರ್ಣ ಮಾಹಿತಿ.

ಭಾರತದಲ್ಲಿ 24K ಚಿನ್ನದ ಬೆಲೆ:
ದೀಪಾವಳಿ ಹಬ್ಬದ ನಂತರ ಚಿನ್ನ ಪ್ರಿಯರಿಗೆ ಸಿಹಿಸುದ್ದಿ ಸಿಗುತ್ತಲೇ ಇದೆ. ಒಂದೆರಡು ದಿನ ಚಿನ್ನದ ಬೆಲೆ ಏರಿಕೆಯಾಗಿದೆ ಬಿಟ್ಟರೆ, ಉಳಿದ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಲೇ ಇದೆ. ಇಂದು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಳಿಕೆಯಾಗಿದ್ದು, 1 ಗ್ರಾಂ ಚಿನ್ನದ ಬೆಲೆ ₹12,148 ರೂ. ಆಗಿದೆ. ನಿನ್ನೆ ₹12,240 ರೂ ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹97 ರೂ. ಇಳಿಕೆಯಾಗಿದೆ. ಅದೇ ರೀತಿ 8 ಗ್ರಾಂ ಚಿನ್ನದ ಬೆಲೆ ಇಂದು ₹97,184 ರೂ. ಆಗಿದ್ದು, ನಿನ್ನೆ ₹97,920 ಇತ್ತು. ಈ ಮೂಲಕ 8 ಗ್ರಾಂ ಚಿನ್ನದಲ್ಲಿ ಒಂದೇ ದಿನ ಬರೋಬ್ಬರಿ ₹736 ರೂ. ಭಾರೀ ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,21,480 ರೂ. ಆಗಿದ್ದು, ನಿನ್ನೆಗಿಂತ ₹920 ರೂ ಇಳಿಕೆಯಾಗಿದೆ. ಹಾಗೆಯೇ 100 ಗ್ರಾಂ ಚಿನ್ನದ ಒಟ್ಟು ಬೆಲೆ ₹12,14,800 ರೂ. ಆಗಿದೆ. ಒಂದೇ ದಿನದಲ್ಲಿ 9,200 ರೂ.ನಷ್ಟು ಏರಿಕೆಯಾಗಿದೆ.
ಭಾರತದಲ್ಲಿ 22K ಚಿನ್ನದ ಬೆಲೆ:
ಇಂದು 22K ಚಿನ್ನದ 1 ಗ್ರಾಂ ಬೆಲೆ 11,135 ರೂ. ಆಗಿದ್ದು, ನಿನ್ನೆ ₹11,220 ರೂ. ಇತ್ತು. ಈ ಮೂಲಕ ಒಂದೇ ದಿನ ₹85 ರೂ. ದಿಢೀರ್ ಇಳಿಕೆಯಾಗಿದೆ. ಅದೇ ರೀತಿ 8 ಗ್ರಾಂ ಚಿನ್ನದ ಬೆಲೆ ಇಂದು 89,080 ರೂ. ಆಗಿದ್ದು, ನಿನ್ನೆಗೆ ಹೋಲಿಸಿದ್ರೆ, ಇಂದು ₹680 ರೂ. ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,11,350 ರೂ ಆಗಿದ್ದು, ನಿನ್ನೆ ₹1,12,200 ರೂ ಇತ್ತು. ನಿನ್ನೆಗಿಂತ ಇಂದು ₹850 ರೂ ಇಳಿಕೆಯಾಗಿದೆ. ಹಾಗೆಯೇ 100 ಗ್ರಾಂ ಚಿನ್ನದ ಬೆಲೆ ಇಂದು 11,13,500 ರೂ. ಆಗಿದ್ದು, ನಿನ್ನೆ ₹11,22,000 ರೂ. ಇತ್ತು. ಒಂದೇ ದಿನದಲ್ಲಿ 8,500 ರೂ. ಇಳಿಕೆಯಾಗಿದೆ.
ಭಾರತದಲ್ಲಿ 18K ಚಿನ್ನದ ಬೆಲೆ:
18K ಚಿನ್ನದ 1 ಗ್ರಾಂ ಬೆಲೆ ಇಂದು ₹9,111 ರೂ. ಆಗಿದ್ದು, ನಿನ್ನೆ 9,180 ರೂ. ಇತ್ತು. ಒಂದೇ ದಿನದಲ್ಲಿ 69 ರೂ. ಇಳಿಕೆಯಾಗಿದೆ. ಅದೇ ರೀತಿ 8 ಗ್ರಾಂ ಚಿನ್ನದ ಬೆಲೆ ಇಂದು ₹72,888 ರೂ. ಆಗಿದ್ದು, ನಿನ್ನೆ 73,440 ರೂ ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು 552 ರೂ. ಇಳಿಕೆ ಕಂಡಿದೆ. ಇನ್ನು 10 ಗ್ರಾಂ ಚಿನ್ನದ ಬೆಲೆ ಇಂದು 91,110 ರೂ. ಆಗಿದ್ದು, ನಿನ್ನೆಗಿಂತ ಇಂದು 690 ರೂ. ಇಳಿಕೆಯಾಗಿದೆ.
ಭಾರತದ ವಿವಿಧ ನಗರಗಳ ಚಿನ್ನದ ಬೆಲೆ:
ಚೆನ್ನೈ: 24K ರೂ. 12,328, 22K ರೂ. 11,300, 18K ರೂ. 9,420
ಮುಂಬೈ: 24K ರೂ. 12,148, 22K ರೂ. 11,135, 18K ರೂ. 9,111
ದೆಹಲಿ: 24K ರೂ. 12,163, 22K ರೂ. 11,150, 18K ರೂ. 9,126
ಕೋಲ್ಕತ್ತಾ: 24K ರೂ. 12,148, 22K ರೂ. 11,135, 18K ರೂ. 9,111
ಬೆಂಗಳೂರು: 24K ರೂ. 12,148, 22K ರೂ. 11,135, 18K ರೂ. 9,111
ಹೈದರಾಬಾದ್: 24K ರೂ. 12,148, 22K ರೂ. 11,135, 18K ರೂ. 9,111
ಕೇರಳ: 24K ರೂ. 12,148, 22K ರೂ. 11,135, 18K ರೂ. 9,111
ಪುಣೆ: 24K ರೂ. 12,148, 22K ರೂ. 11,135, 18K ರೂ. 9,111
ವಡೋದರಾ: 24K ರೂ. 12,153, 22K ರೂ. 11,140, 18K ರೂ. 9,116
ಅಹಮದಾಬಾದ್: 24K ರೂ. 12,153, 22K ರೂ. 11,140, 18K ರೂ. 9,116
ಸ್ಪಾಟ್ ಗೋಲ್ಡ್ ವಿವರ:
ಅಕ್ಟೋಬರ್ 30ರ ರಾಯಿಟರ್ಸ್ ವರದಿ ಪ್ರಕಾರ, ಡಾಲರ್ ಮೌಲ್ಯದಲ್ಲಿ ಸ್ವಲ್ಪ ಹಿನ್ನಡೆಯಾಗಿದ್ದರಿಂದ, ಗುರುವಾರ ಚಿನ್ನದ ಬೆಲೆ ಏರಿಕೆ ಕಂಡಿತು, ಆದರೆ ಹೂಡಿಕೆದಾರರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ವ್ಯಾಪಾರ ಒಪ್ಪಂದ ಏನಾಗುತ್ತೆ ಎಂದು ಕಾತುರದಿಂದ ಕಾದು ನಿಂತಿದ್ದಾರೆ. ಇನ್ನು 0235 GMT ವೇಳೆಗೆ ಸ್ಪಾಟ್ ಚಿನ್ನವು ಪ್ರತಿ ಔನ್ಸ್‌ಗೆ 0.2% ಏರಿಕೆಯಾಗಿ $3,937.88 ಕ್ಕೆ ತಲುಪಿದೆ.
ಇಂದಿನ ಬೆಳ್ಳಿ ಬೆಲೆ:
ಬೆಳ್ಳಿ ಬೆಲೆಯಲ್ಲೂ ಇಂದು ಪ್ರತೀ ಗ್ರಾಂಗೆ 1 ರೂಪಾಯಿಯಂತೆ ಇಳಿಕೆಯಾಗಿದೆ. ಅದರಂತೆ 1 ಗ್ರಾಂ ಬೆಳ್ಳಿ ಬೆಲೆ ಇಂದು 151 ರೂಪಾಯಿ ಆಗಿದ್ದು, ನಿನ್ನೆ ₹152 ರೂ. ಇತ್ತು. ಈ ಮೂಲಕ ನಿನ್ನೆಗಿಂತ ಇಂದು 1 ರೂ. ಇಳಿಕೆಯಾಗಿದೆ. ಅದೇ ರೀತಿ 10 ಗ್ರಾಂ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಇಂದು ಹತ್ತು ಗ್ರಾಂ ಬೆಳ್ಳಿ ದರ 15,100 ರೂ. ಆಗಿದೆ. ಒಂದೇ ದಿನದಲ್ಲಿ 100 ರೂ. ಇಳಿಕೆಯಾಗಿದೆ. ಹಾಗೆಯೇ ಒಂದು ಕಿಲೋ ಬೆಳ್ಳಿ ಬೆಲೆ ಇಂದು 1000 ರೂ. ಇಳಿಕೆಯಾಗಿದ್ದು, ಒಟ್ಟು ಬೆಲೆ 1,51,000 ರೂ. ಆಗಿದೆ.
ಚಿನ್ನ, ಬೆಳ್ಳಿ ಮೇಲೆ ಹೂಡಿಕೆ ಮಾಡುವ ಮುನ್ನ ಮಾರುಕಟ್ಟೆ ಬೆಳವಣಿಗೆಗಳನ್ನು ಗಮನಿಸುವುದು ಮುಖ್ಯ. ಆದ್ದರಿಂದ ಚಿನ್ನದ ಬೆಲೆ ಇಂದು ಇಳಿಕೆಯಾಗಿದ್ದು, ಬೆಳ್ಳಿ ದರದಲ್ಲೂ ಕುಸಿತ ಕಂಡಿದೆ. ಆದ್ರೆ ಏರಿಕೆ ಪ್ರಮಾಣಕ್ಕೆ ಹೋಲಿಸಿದ್ರೆ ಇತ್ತೀಚೆಗೆ ಇಳಿಕೆ ಪ್ರಮಾಣದಲ್ಲಿ ಭಾರೀ ಕಡಿಮೆಯಾಗುತ್ತಿದೆ. ಆದ್ದರಿಂದ ಮಾರುಕಟ್ಟೆ ಬೆಳವಣಿಗಳನ್ನು ನೋಡಿಕೊಂಡು ಹೂಡಿಕೆ ಮಾಡಿದ್ರೆ ಉತ್ತಮ.
More From GoodReturns

Gold Rate India: ಯುದ್ಧದ ನಂತರ ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ! ದಿಢೀರ್ 4,900 ರೂ. ಕುಸಿತ

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Down: ಚಿನ್ನ ಪ್ರಿಯರಿಗೆ ಜಾಕ್ಪಾಟ್! ದಿಢೀರ್ 3,110 ರೂ. ಇಳಿಕೆ

Bengaluru Gold Rate: ಸತತ ಮೂರನೇ ದಿನವೂ ಏರಿಕೆ ನೋಡಿದ ಚಿನ್ನದ ಬೆಲೆ..ಬೆಂಗಳೂರಲ್ಲಿ ಇಂದಿನ ರೇಟ್ ಎಷ್ಟು?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Gold Price India: ದಿಢೀರ್ ಏರಿಕೆ ಹಾದಿಯನ್ನೇ ಅನುಸರಿಸಿದ ಚಿನ್ನದ ಬೆಲೆ…25,100 ರೂ. ಏರಿಕೆ!

Gold Rate: ಚಿನ್ನ ಕೊಳ್ಳುವವರಿಗೆ ‘ಗುರುದೆಸೆ’…ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ 9,800 ರೂ. ಕುಸಿತ!



Click it and Unblock the Notifications