ಮೇ 9, ಭಾರತದಲ್ಲಿ ಇಂದಿನ ಚಿನ್ನದ ಬೆಲೆ: ಚಿನ್ನಪ್ರಿಯರು ಇಂದು ನಿಜಕ್ಕೂ ಖುಷಿ ಪಡಬಹುದು. ಶುಕ್ರವಾರದ ದಿನವೇ ಖುಷಿಸುದ್ದಿ ಇದೆ. ಅದೇನೆಂದರೆ ಈ ವಾರಾರಂಭದಿಂದಲೂ ಚಿಂತೆಗೀಡು ಮಾಡಿದ್ದ ಚಿನ್ನದ ಬೆಲೆ ಇಳಿಕೆಯಾಗಿದೆ. ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಕುಸಿತ ಕಂಡಿದೆ. ಹೂಡಿಕೆದಾರರು ಚಿನ್ನದ ಮೇಲೆ ನಿರಾಳವಾಗಿ ಹೂಡಿಕೆ ಮಾಡಬಹುದು. ಭಾರತ-ಪಾಕಿಸ್ತಾನದ ನಡುವೆ ಚಿನ್ನದ ಬೆಲೆ ಇಳಿಕೆಯಾಗಿರುವುದು ನಿಜಕ್ಕೂ ದೊಡ್ಡ ಸಂಗತಿ. ಸಂಘರ್ಷದ ಕಾರಣದಿಂದ ಈಗಾಗಲೇ ಷೇರು ಮಾರುಕಟ್ಟೆಯಲ್ಲಿ ಹಲವು ಬದಲಾವಣೆಗಳಾಗುತ್ತಿವೆ. ಅಲ್ಲದೇ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಷೇರು ಮೌಲ್ಯ ಕುಸಿಯುತ್ತಿದೆ. ರಕ್ಷಣಾ ಷೇರುಗಳ ಮೌಲ್ಯ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದರ ನಡುವೆಯೇ ಚಿನ್ನದ ಬೆಲೆ ಇಳಿಕೆಯಾಗಿದೆ.

ಇನ್ನು ಭಾರತದಲ್ಲಿ ಚಿನ್ನದ ಲೋಹಕ್ಕೆ ಮಹತ್ವವಾದ ಸ್ಥಾನವಿದೆ. ಚಿನ್ನವನ್ನು ಒಂದು ಆರ್ಥಿಕ ನಿಧಿ. ಹೂಡಿಕೆಯ ಸಾಧನ, ಹಾಗೂ ಪ್ರತಿಷ್ಠೆಯ ಸಂಕೇತ ಎಂದು ಪರಿಗಣಿಸಲಾಗಿದೆ. ದೊಡ್ಡ ಮಟ್ಟದ ಹೂಡಿಕೆ ಸಾಧನವಾಗಿರುವ ಚಿನ್ನ, ಭಾರತದಲ್ಲಿ ಪ್ರತಿಷ್ಠೆಯ ಸಂಕೇತವೂ ಹೌದು. ಇನ್ನು ಮಹಿಳೆಯರಿಗಂತೂ ಚಿನ್ನದ ಮೇಲಿರುವ ಪ್ರೀತಿ ಅಷ್ಟಿಷ್ಟಲ್ಲ. ಚಿನ್ನ ಎಂದರೆ ಪ್ರಾಣ ಬಿಡುತ್ತಾರೆ. ಸಭೆ ಸಮಾರಂಭಗಳಲ್ಲಿ ಪ್ರತಿಷ್ಠೆ ತಂದುಕೊಡುವುದೇ ಚಿನ್ನ. ಅತ್ಯಂತ ಆಕರ್ಷಣೀಯವಾಗಿರುವ ಚಿನ್ನಕ್ಕೆ, ಈಗ ಎಲ್ಲಿಲ್ಲದ ಬೇಡಿಕೆ. ಅದರಲ್ಲೂ ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ. ಆಭರಣದ ರೂಪದಲ್ಲಿ ಮಹಿಳೆಯರಿಗೆ ಆಕರ್ಷಣೆ ನೀಡುವ ಈ ಚಿನ್ನಕ್ಕೆ ಭಾರತದಲ್ಲಿ ದಿನೇ ದಿನೆ ಡಿಮ್ಯಾಂಡ್ ಹೆಚ್ಚುತ್ತಲೇ ಇದೆ..ಹಾಗಾದರೆ ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎಂದು ತಿಳಿಯಿರಿ. ಮೊದಲು ಚಿನ್ನದ ಬೆಲೆಯಲ್ಲಿನ ಬದಲಾವಣೆ ಬಗ್ಗೆ ತಿಳಿದು, ನಂತರ ಈ ಏರಿಳಿತಗಳಿಗೆ ಕಾರಣ ಏನೆಂದು ಓದಿರಿ.
ಭಾರತದಲ್ಲಿ ಇಂದಿನ ಚಿನ್ನದ ಬೆಲೆ:
22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,015 ಆಗಿದೆ. ನಿನ್ನೆ ಇದರ ಬೆಲೆ ₹9,130 ಆಗಿದ್ದು ನಿನ್ನೆಗಿಂತ ಇಂದು, ₹115 ಕುಸಿತ ಕಂಡಿದೆ. ಹಾಗೆಯೇ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹90,150 ಆಗಿದೆ. ನಿನ್ನೆಯ ಬೆಲೆ ₹91,300 ಆಗಿದ್ದು ನಿನ್ನೆಗಿಂತ ಇಂದಿಗೆ ₹1,150 ಕಡಿಮೆಯಾಗಿದೆ. ಇನ್ನು 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹9,01,500 ರೂ. ಆಗಿದೆ. ನಿನ್ನೆಯ ಬೆಲೆ ₹9,13,000 ಆಗಿದ್ದು ನಿನ್ನೆಗಿಂತ ಇಂದು ₹11,500 ಇಳಿಕೆಯಾಗಿದೆ.
24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,835 ಆಗಿದೆ. ನಿನ್ನೆ ಇದರ ಬೆಲೆ ₹9,960 ಆಗಿದ್ದು ನಿನ್ನೆಗಿಂತ ಇಂದು, ₹125 ಕುಸಿತ ಕಂಡಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹98,350 ಆಗಿದೆ. ನಿನ್ನೆಯ ಬೆಲೆ ₹99,600 ಆಗಿದ್ದು ನಿನ್ನೆಗಿಂತ ಇಂದಿಗೆ ₹1,250 ಕಡಿಮೆಯಾಗಿದೆ. ಇನ್ನು 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹9,83,500 ಆಗಿದೆ. ನಿನ್ನೆಯ ಬೆಲೆ ₹9,96,000 ಆಗಿದ್ದು ನಿನ್ನೆಗಿಂತ ಇಂದು ₹12,500 ಇಳಿಕೆಯಾಗಿದೆ.
18 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹7,376 ಆಗಿದೆ. ನಿನ್ನೆ ಇದರ ಬೆಲೆ ₹7,470 ಆಗಿದ್ದು ನಿನ್ನೆಗಿಂತ ಇಂದು, 94 ರೂ. ಕುಸಿತ ಕಂಡಿದೆ. ಹಾಗೆಯೇ 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹73,760 ಆಗಿದೆ. ನಿನ್ನೆಯ ಬೆಲೆ ₹74,700 ಆಗಿದ್ದು ನಿನ್ನೆಗಿಂತ ಇಂದಿಗೆ 940 ರೂ. ಕಡಿಮೆಯಾಗಿದೆ. ಇನ್ನು 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹7,37,600 ರೂ. ಆಗಿದೆ. ನಿನ್ನೆಯ ಬೆಲೆ ₹7,47,000 ಆಗಿದ್ದು ನಿನ್ನೆಗಿಂತ ಇಂದು 9,400 ರೂ. ಇಳಿಕೆಯಾಗಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,015 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,835 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,435 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,015 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,835 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,376 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,030 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,850 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,389 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,015 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,835 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,376 ಆಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,975 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,791 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,344 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,015 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,835 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,376 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,015 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,835 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,376 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,015 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,835 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,376 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,020 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,840 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,380 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹9,020 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,840 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,380 ಆಗಿದೆ.
ಭಾರತದಲ್ಲಿ ಇಂದಿನ ಬೆಳ್ಳಿ ಬೆಲೆ:
ಚಿನ್ನದ ಬೆಲೆಯಲ್ಲಿ ಏರಿಕೆಯಾದರೂ ಬೆಳ್ಳಿ ಬೆಲೆಯಲ್ಲಿ ಮಾತ್ರ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ಬೆಲೆಯಲ್ಲಿ ನಿನ್ನೆ ಎಷ್ಟಿದೆಯೋ ಅಷ್ಟೇ ಇದೆ. ನಿನ್ನೆ ಒಂದು ಗ್ರಾಂ ಬೆಳ್ಳಿ ಬೆಲೆಯಲ್ಲಿ ₹99 ಇತ್ತು. 10 ಗ್ರಾಂ ಬೆಳ್ಳಿ ಬೆಲೆಯಲ್ಲಿ ₹990 ಇತ್ತು. 100 ಗ್ರಾಂ ಬೆಳ್ಳಿ ಬೆಲೆಯಲ್ಲಿ ₹9,900 ಇತ್ತು. 1 ಕೆ.ಜಿ ಬೆಳ್ಳಿ ಬೆಲೆಯಲ್ಲಿ ₹99,000 ಇತ್ತು. ಈ ಬೆಲೆ ನೆನ್ನೆಯಂತೆಯೇ ಇಂದೂ ಇದೆ.
ಸ್ಪಾಟ್ ಗೋಲ್ಡ್ ವಿವರ:
ಮೇ 9, 2025ರಂದು ರಾಯಿಟರ್ಸ್ ನೀಡಿರುವ ವರದಿಯ ಅನುಸಾರ, ಸ್ಪಾಟ್ ಚಿನ್ನದ ಬೆಲೆಯು ಇಳಿಕೆಯಾಗಿದೆ. ಬೆಳಿಗ್ಗೆ 02:17 ವೇಳೆಗೆ 0.8% ಇಳಿಕೆಯಾಗಿ, ಪ್ರತಿ ಔನ್ಸ್‌ಗೆ $3,277.67ರಷ್ಟು ವಹಿವಾಟು ನಡೆಸಿದೆ. ಹಾಗೆಯೇ ಇಂದು ಯುಎಸ್ ಗೋಲ್ಡ್ ಫ್ಯೂಚರ್ ಕೂಡ 0.7% ಇಳಿಕೆ ನೋಡಿದ್ದು, ಪ್ರತಿ ಔನ್ಸ್‌ಗೆ $3,282.80 ವಹಿವಾಟು ನಡೆಸಿದೆ.
ಚಿನ್ನದ ಬೆಲೆ ಏರಿಕೆ-ಇಳಿಕೆಗೆ ಕಾರಣವೇನು?
ಚಿನ್ನದ ಬೆಲೆಯ ಏರಿಕೆ ಹಾಗೂ ಇಳಿಕೆಗೆ ನಾನಾ ಕಾರಣಗಳಿರುತ್ತವೆ. ಚಿನ್ನದ ಬೆಲೆಯಲ್ಲಿ ಏರಿಕೆ ವಿವಿಧ ಆರ್ಥಿಕ, ರಾಜಕೀಯ ಮತ್ತು ಜಾಗತಿಕ ಅಂಶಗಳಿಂದ ಪ್ರೇರಿತವಾಗಿರುತ್ತದೆ. ನಾಣ್ಯ ಮೌಲ್ಯ ಕುಸಿದಾಗ ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸುತ್ತಾರೆ. ಇದರ ಫಲಿತಾಂಶವಾಗಿ ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ಏರುತ್ತದೆ. ಯುದ್ಧಗಳು, ವ್ಯಾಪಾರ ತಕರಾರುಗಳು, ಜಾಗತಿಕ ರಾಜಕೀಯ ಸಮಸ್ಯೆಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರುತ್ತವೆ. ಹೂಡಿಕೆದಾರರು ಭದ್ರತೆಯ ಹೂಡಿಕೆ ಎಂದು ಚಿನ್ನವನ್ನು ಖರೀದಿಸುತ್ತಾರೆ, ಇದರಿಂದ ಬೇಡಿಕೆ ಹೆಚ್ಚಾಗಿ ಬೆಲೆ ಏರಿಕೆಯಾಗುತ್ತದೆ.
ಅಮೆರಿಕದ ಫೆಡೆರಲ್ ರಿಸರ್ವ್ ಅಥವಾ ಭಾರತದ RBI ಬಡ್ಡಿದರಗಳನ್ನು ಇಳಿಸಿದರೆ, ಹೂಡಿಕೆದಾರರು ಚಿನ್ನದತ್ತ ಮುಖ ಮಾಡುತ್ತಾರೆ. ಇದು ಚಿನ್ನದ ಬೆಲೆಯನ್ನು ಹೆಚ್ಚಿಸುತ್ತದೆ. ಚಿನ್ನದ ಉತ್ಪಾದನೆ ಕಡಿಮೆಯಾದರೆ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಾದರೆ, ಬೆಲೆ ತಾನಾಗಿಯೇ ಏರಿಕೆಯಾಗುತ್ತದೆ. ಚಿನ್ನದ ಬೆಲೆಯ ಏರಿಕೆ ಬಹುಪಾಲು ಆರ್ಥಿಕ ಅಸ್ಥಿರತೆ, ಇನ್‌ಫ್ಲೇಶನ್, ರಾಜಕೀಯ ಅಶಾಂತಿ, ಮಾರುಕಟ್ಟೆ ತಾಣಮೌಲ್ಯಗಳು, ಹಾಗೂ ಹೂಡಿಕೆದಾರರ ಮನೋಭಾವ ಇತ್ಯಾದಿ ಅಂಶಗಳಿಂದ ನಿರ್ಧಾರವಾಗುತ್ತದೆ. ಚಿನ್ನದ ಬೆಲೆಯ ಈ ಬದಲಾವಣೆಗಳಿಗೆ ಆಂತರಾಷ್ಟ್ರೀಯ ಮಾರುಕಟ್ಟೆಯ ಪ್ರಭಾವ, ಕರೆನ್ಸಿ ವಿನಿಮಯ ದರಗಳು, ದೇಶೀಯ ಬೇಡಿಕೆ, ಹೂಡಿಕೆದಾರರ ನಂಬಿಕೆ ಮತ್ತು ಆರ್ಥಿಕ ಪರಿಸ್ಥಿತಿಗಳು ಪ್ರಮುಖವಾಗಿರಬಹುದು. ಹೀಗೆ ನಾನಾ ಕಾರಣಗಳಿಂದ ಚಿನ್ನದ ಬೆಲೆ ಏರಿಳಿತ ನೋಡುತ್ತಿವೆ.


Click it and Unblock the Notifications