Today Silver Rate: ದಿನೇ ದಿನೇ ಏರಿಕೆಯಾಗುತ್ತಿದೆ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಇಂದಿನ ಬೆಲೆ

ಬೆಳ್ಳಿ ದರ (Silver Rate) ಇತ್ತೀಚೆಗೆ ದಾಖಲೆ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ. ಊಹೆಯೂ ಮಾಡದಷ್ಟು ಬೆಲೆ ಏರಿಕೆ ಕಾಣಬಹುದು ಎಂದು ಹಲವು ವರದಿಗಳು ಹೇಳಿವೆ. ಇದೀಗ ದಿನ ಹೋದಂತೆ ಭಾರತದಲ್ಲಿ ಬೆಳ್ಳಿ ದರ ಏರಿಕೆಯಾಗುತ್ತಲೇ ಇದೆ ಹೊರತು, ಕಮ್ಮಿಯಾಗುವುದಂತೂ ಕಾಣುತ್ತಿಲ್ಲ. ಇದೀಗ ಇಂದೂ (ಜ.13) ಕೂಡಾ ಬೆಳ್ಳಿ ದರ ಏರಿಕೆಯಾಗಿದ್ದು, ಎಷ್ಟಾಗಿದೆ ಗೊತ್ತಾ?

Silver Rate: ದಿನೇ ದಿನೇ ಏರಿಕೆಯಾಗುತ್ತಿದೆ ಬೆಳ್ಳಿ ದರ! ಎಷ್ಟಿದೆ?

ಜನವರಿ 13, 2026ರ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ನಿನ್ನೆಯ ವಹಿವಾಟಿಗಿಂತ ಇಂದು ಸ್ವಲ್ಪ ಇಳಿಕೆಯಾಗಿದೆ. ಭಾರತೀಯ ಸಮಯ 12:43 ರ ಹೊತ್ತಿಗೆ ಪ್ರತೀ ಕೆಜಿಗೆ ಇಂದು 2,67,126 ಲಕ್ಷ ರೂ. ತಲುಪಿದೆ. ಆದರೆ ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಈಗ 0.59% ರಷ್ಟು ಇಳಿಕೆಯಾಗಿದೆ. ಹಾಗಿದ್ರೆ ಇತರ ರಾಜ್ಯಗಳ ಬೆಳ್ಳಿ ದರದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತದಲ್ಲಿ ಬೆಳ್ಳಿ ದರ:
ಭಾರತದಲ್ಲಿ ಇಂದು ಬೆಳ್ಳಿ ಬೆಲೆ ನಿನ್ನೆಗಿಂತಲೂ ಹೆಚ್ಚು ಏರಿಕೆ ಕಂಡಿದೆ. 1 ಗ್ರಾಂ ಬೆಳ್ಳಿ ದರ ಇಂದು ₹275 ರೂ. ಆಗಿದ್ದು, ನಿನ್ನೆ ₹270 ರೂ. ಇತ್ತು. ಅಂದರೆ ಪ್ರತೀ ಗ್ರಾಂ ಬೆಳ್ಳಿಯಲ್ಲಿ ಒಟ್ಟು ₹5 ರೂ. ಏರಿಕೆಯಾಗಿದೆ. ಇನ್ನು 8 ಗ್ರಾಂ ಬೆಳ್ಳಿ ಬೆಲೆ ಇಂದು ₹2,200 ರೂ. ಆಗಿದ್ದು, ನಿನ್ನೆ ₹2,160 ರೂ. ಇತ್ತು. ಅಂದರೆ ಒಟ್ಟು ₹40 ರೂ. ಹೆಚ್ಚಳ ಕಂಡಿದೆ. ಅದೇ ರೀತಿ 10 ಗ್ರಾಂ ಬೆಳ್ಳಿ ಬೆಲೆ ಇಂದು ₹2,750 ರೂ. ಆಗಿದ್ದು, ನಿನ್ನೆ ₹2,700 ರೂ. ಇತ್ತು. ನಿನ್ನೆಗಿಂತ ಇಂದು ₹50 ರೂ. ಹೆಚ್ಚಳವಾಗಿದೆ. 100 ಗ್ರಾಂ ಬೆಳ್ಳಿ ದರ ಇಂದು ₹27,500 ರೂ. ಆಗಿದ್ದು, ನಿನ್ನೆ ₹27,000 ರೂ. ಇತ್ತು. ಒಂದೇ ದಿನದಲ್ಲಿ ₹500 ರೂ. ಏರಿಕೆಯಾಗಿದೆ. ಅದೇ ರೀತಿ 1000 ಗ್ರಾಂ ಬೆಳ್ಳಿ ದರ ₹2,75,000 ರೂ. ಆಗಿದ್ದು, ನಿನ್ನೆ ₹2,70,000 ರೂ. ಇತ್ತು. ಇಂದು ಒಂದೇ ದಿನ 5,000 ರೂ. ಏರಿಕೆಯಾಗಿದೆ.

ಭಾರತದಲ್ಲಿ ಚಿನ್ನದ ಬೆಲೆ:
ಭಾರತದಲ್ಲಿ ಇಂದು ಚಿನ್ನದ ಬೆಲೆ ಕೂಡಾ ಭಾರೀ ಏರಿಕೆ ಕಂಡಿದೆ. 24 ಕ್ಯಾರಟ್‌ ಚಿನ್ನದ ಬೆಲೆ ಇಂದು 14,253 ರೂ. ಆಗಿದೆ. ಹಾಗೆತೇ 22K ಚಿನ್ನದ ಬೆಲೆ 13,065 ರೂ. ಮತ್ತು 18K ಚಿನ್ನದ ಬೆಲೆ 10,690 ರೂ. ಏರಿಕೆಯಾಗಿದೆ.

ಬೆಂಗಳೂರಿನ ಬೆಳ್ಳಿ ದರ:
ಬೆಂಗಳೂರಿನಲ್ಲೂ ನಿನ್ನೆಗಿಂತ ಇಂದು ಬೆಳ್ಳಿ ದರದಲ್ಲಿ ಏರಿಕೆ ಕಂಡಿದೆ. ಇಂದು 10 ಗ್ರಾಂ ಬೆಳ್ಳಿ ಬೆಲೆ ₹2,750 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹27,500 ರೂ., 1 ಕೆಜಿ ಬೆಳ್ಳಿ ದರ ₹2,75,000 ರೂ. ಆಗಿದೆ. ಈ ಮೂಲಕ ನಿನ್ನೆಗಿಂತ ಇಂದು ಒಂದೇ ದಿನ ಪ್ರತೀ ಗ್ರಾಂನಲ್ಲಿ 5 ರೂ. ಹೆಚ್ಚಳ ಕಂಡಿದೆ.

ಚೆನ್ನೈ ಬೆಳ್ಳಿ ದರ ಎಷ್ಟಿದೆ?
ಚೆನ್ನೈನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ ಇಂದು 2,920 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 29,200 ರೂ. ಇದೆ. ಅದೇ ರೀತಿ 1 ಕೆಜಿ ಬೆಳ್ಳಿ ದರ ಇಂದು 2,92,000 ರೂ. ಆಗಿದೆ.

ಮುಂಬೈನಲ್ಲಿ ಬೆಳ್ಳಿ ದರ ಎಷ್ಟಿದೆ?
ಮುಂಬೈನಲ್ಲಿ ಇಂದು 10 ಗ್ರಾಂ ಬೆಳ್ಳಿ ದರ 2,750 ರೂ. ತಲುಪಿದೆ. 100 ಗ್ರಾಂ ಬೆಳ್ಳಿ ಬೆಲೆ 27,500 ರೂ. ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ಬೆಲೆ 2,75,000 ರೂ. ಆಗಿದೆ.

ಹೈದರಾಬಾದ್‌ ಬೆಳ್ಳಿ ಬೆಲೆ:
ಹೈದರಾಬಾದ್‌ನಲ್ಲಿ ಇಂದು 10 ಗ್ರಾಂ ಬೆಳ್ಳಿ ಬೆಲೆ ಇಂದು 2,920 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ದರ 29,200 ರೂ. ಆಗಿದೆ. ಅಲ್ಲದೇ 1 ಕೆಜಿ ಬೆಳ್ಳಿ ಬೆಲೆ ಇಂದು 2,92,000 ರೂ. ಆಗಿದೆ.

ದೆಹಲಿ ಬೆಳ್ಳಿ ದರ:
ರಾಜಧಾನಿ ದೆಹಲಿಯಲ್ಲಿ ದಿನೇ ದಿನೇ ಬೆಳ್ಳಿ ಬೆಲೆ ದಾಖಲೆಯಲ್ಲಿ ಏರಿಕೆ ಕಾಣುತ್ತಿದೆ. ಇಂದು 10 ಗ್ರಾಂ ಬೆಳ್ಳಿ ದರ ದೆಹಲಿಯಲ್ಲಿ ₹2,750 ರೂ. ಆಗಿದ್ದು, 100 ಗ್ರಾಂ ಬೆಳ್ಳಿ ಬೆಲೆ ₹27,500 ರೂ. ಆಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ದರ ₹2,75,000 ರೂ. ಆಗಿದೆ.

MCX ಬೆಳ್ಳಿ ದರ:
ಜನವರಿ 13, 2026ರ ವರದಿ ಪ್ರಕಾರ, ಮಲ್ಟಿ-ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (MCX) ಬೆಳ್ಳಿ ದರ ನಿನ್ನೆಯ ವಹಿವಾಟಿಗಿಂತ ಇಂದು ಸ್ವಲ್ಪ ಇಳಿಕೆಯಾಗಿದೆ. ಭಾರತೀಯ ಸಮಯ 12:43 ರ ಹೊತ್ತಿಗೆ ಪ್ರತೀ ಕೆಜಿಗೆ ಇಂದು 2,67,126 ಲಕ್ಷ ರೂ. ತಲುಪಿದೆ. ಆದರೆ ಹಿಂದಿನ ವಹಿವಾಟಿಗೆ ಹೋಲಿಸಿದ್ರೆ ಈಗ 0.59% ರಷ್ಟು ಇಳಿಕೆಯಾಗಿದೆ.

ಸ್ಪಾಟ್‌ ಬೆಳ್ಳಿ ದರ:
ಜನವರಿ 13ರ GOLDPROCE.org ವರದಿ ಪ್ರಕಾರ, 12:52 PM ಸಮಯದಲ್ಲಿ ಬೆಳ್ಳಿ ದರ ಪ್ರತೀ ಔನ್ಸ್‌ಗೆ $84.83 ಆಗಿದೆ. ಹಿಂದಿನ ವಹಿವಾಟಿಗಿಂತ ಇಳಿಕೆ ಕಂಡು, 0.39% ನಲ್ಲಿ ವಹಿವಾಟು ನಡೆಸುತ್ತಿದೆ.

(ಈ ವಿಶ್ಲೇಷಣೆ ಮತ್ತು ಮಾಹಿತಿ ಕೇವಲ ವೈಯಕ್ತಿಕ ವಿಶ್ಲೇಷಕರು ಅಥವಾ ಸಂಸ್ಥೆಗಳ ಅಭಿಪ್ರಾಯವಾಗಿದೆ ಮತ್ತು Goodreturns.in ಅಥವಾ Greynium Information Technologies Private Limited ನ ಅಭಿಪ್ರಾಯವನ್ನು ಹೇಳಲಾಗುವುದಿಲ್ಲ. ನಾವು ಯಾವುದೇ ಮಾಹಿತಿಯ ನಿಖರತೆ, ಪೂರ್ಣತೆ ಅಥವಾ ವಿಶ್ವಾಸಾರ್ಹತೆ ಬಗ್ಗೆ ಗ್ಯಾರಂಟಿ ನೀಡುವುದಿಲ್ಲ, ಒಪ್ಪಿಕೊಳ್ಳುವುದಿಲ್ಲ ಅಥವಾ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ. ನಾವು ಯಾವುದೇ ಹೂಡಿಕೆ ಸಲಹೆ ನೀಡುವುದಿಲ್ಲ ಅಥವಾ ಷೇರುಗಳ ಖರೀದಿ ಅಥವಾ ಮಾರಾಟ ಮಾಡುವ ಬಗ್ಗೆ ಒತ್ತಾಯಿಸುವುದಿಲ್ಲ. ಎಲ್ಲಾ ಮಾಹಿತಿಯನ್ನು ಕೇವಲ ಶಿಕ್ಷಣ ಮತ್ತು ಮಾಹಿತಿ ಉದ್ದೇಶಕ್ಕಾಗಿ ಮಾತ್ರ ಒದಗಿಸಲಾಗಿದೆ. ಯಾವುದೇ ಹೂಡಿಕೆ ನಿರ್ಧಾರ ತೆಗೆದುಕೊಳ್ಳುವ ಮೊದಲು, ಒಬ್ಬ ಅರ್ಹ ಹಣಕಾಸು ಸಲಹೆಗಾರರಿಂದ ಸಲಹೆ ಪಡೆದರೆ ಉತ್ತಮ).

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+