ದೇಶದ ಆಟೋಮೋಟಿವ್ ಉದ್ಯಮದ ದಿಗ್ಗಜರಲ್ಲಿ ಒಬ್ಬರಾದ, ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಉಪಾಧ್ಯಕ್ಷ ವಿಕ್ರಮ್ ಎಸ್ ಕಿರ್ಲೋಸ್ಕರ್ (64) ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮನೆಯಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬೆಂಗಳೂರಿನ ವಿಮಾನ ನಿಲ್ದಾಣ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಉಪಾಧ್ಯಕ್ಷ ವಿಕ್ರಮ್ ಎಸ್ ಕಿರ್ಲೋಸ್ಕರ್ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ವಿಧಿವಶರಾಗಿದ್ದಾರೆ.
ಈ ಬಗ್ಗೆ ಟೊಯೊಟಾ ಇಂಡಿಯಾ ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದೆ. "ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಉಪಾಧ್ಯಕ್ಷ ವಿಕ್ರಮ್ ಎಸ್ ಕಿರ್ಲೋಸ್ಕರ್ 2022ರ ನವೆಂಬರ್ 29ರಂದು ನಿಧನರಾಗಿದ್ದಾರೆ ಎಂದು ತಿಳಿಸಲು ನಾವು ವಿಷಾಧಿಸುತ್ತೇವೆ. ಈ ದುಖಃದ ಸಂದರ್ಭದಲ್ಲಿ ಅವರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಎಲ್ಲರೂ ಪ್ರಾರ್ಥಿಸೋಣ," ಎಂದು ಟ್ವೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

"ವಿಕ್ರಮ್ ಎಸ್ ಕಿರ್ಲೋಸ್ಕರ್ ಅವರ ಕುಟುಂಬ ಸದಸ್ಯರಿಗೆ ಹಾಗೂ ಸ್ನೇಹಿತರಿಗೆ ನಾವು ಸಂತಾಪ ಸೂಚಿಸುತ್ತೇವೆ. ಬೆಂಗಳೂರಿನಲ್ಲಿ 2022ರ ನವೆಂಬರ್ 30ರಂದು ಅಂತಿಮ ಸಂಸ್ಕಾರ ನಡೆಯಲಿದೆ," ಎಂದು ಇನ್ನೊಂದು ಟ್ವೀಟ್‌ನಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಕೂಡಾ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. "ದೇಶದ ಆಟೋಮೋಟಿವ್ ಉದ್ಯಮದ ದಿಗ್ಗಜರಲ್ಲಿ ಒಬ್ಬರಾದ, ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಉಪಾಧ್ಯಕ್ಷ ವಿಕ್ರಮ್ ಎಸ್ ಕಿರ್ಲೋಸ್ಕರ್ ಅವರ ಆತ್ಮಕ್ಕೆ ಶಾಂತಿ ಲಭಿಸಲಿ. ಈ ನಷ್ಟವನ್ನು ಭರಿಸುವಂತಹ ಸಾಮರ್ಥ್ಯವನ್ನು ಕುಟುಂಬಕ್ಕೆ, ಸ್ನೇಹಿತರಿಗೆ ಭಗವಂತ ನೀಡಲಿ," ಎಂದು ಟ್ವೀಟ್ ಮಾಡಿದ್ದಾರೆ.


Click it and Unblock the Notifications