ತ್ರಿವಳಿ ತಲಾಖ್ ಸಂತ್ರಸ್ತೆಯರಿಗೆ ವರ್ಷಕ್ಕೆ 6,000 ರುಪಾಯಿ ಪಿಂಚಣಿ
ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರವು ತ್ರಿವಳಿ ತಲಾಖ್ ಸಂತ್ರಸ್ತೆಯರಿಗೆ ವಾರ್ಷಿಕ 6,000 ರುಪಾಯಿ ಪಿಂಚಣಿ ನೀಡಲಿದೆ. ಸರ್ಕಾರದ ಈ ತೀರ್ಮಾನವನ್ನು ಶಿಯಾ ಧಾರ್ಮಿಕ ಗುರು ಮೌಲಾನಾ ಸೈಫ್ ಅಬ್ಬಾಸ್ ಸ್ವಾಗತಿಸಿ ಮಾತನಾಡಿ, ಈ ತೀರ್ಮಾನಕ್ಕಿಂತ ಸರ್ಕಾರವು ಮಕ್ಕಳ ಶಿಕ್ಷಣ, ಮನೆಯ ಸಮಸ್ಯೆಗಳನ್ನು ಪರಿಹರಿಸಲು ಯೋಚಿಸಬೇಕು. ತಿಂಗಳಿಗೆ 500 ರುಪಾಯಿಯಂತೆ ನೀಡುವುದಕ್ಕಿಂತ ಅದು ಮುಖ್ಯ ಎಂದಿದ್ದಾರೆ.
ಇನ್ನು ಸುನ್ನಿ ಧರ್ಮ ಗುರು ಮೌಲಾನಾ ಸೂಫಿಯಾನ ಮಾತನಾಡಿ, ಈ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ. ತಿಂಗಳಿಗೆ ಐನೂರು ರುಪಾಯಿ ಪಿಂಚಣಿ ನೀಡುವ ತೀರ್ಮಾನದ ಮೂಲಕ ಸರ್ಕಾರವು ಎಂಥ ನ್ಯಾಯವನ್ನು ಒದಗಿಸಿದಂತಾಗುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ನ್ಯಾಯ ಮಂಡಳಿ ಅಧ್ಯಕ್ಷ ಶಾಹಿಸ್ತಾ ಅಂಬರ್ ಮಾತನಾಡಿ, ಸರ್ಕಾರದ ಈ ನಿರ್ಣಯ ಉತ್ತಮವಾದದ್ದು. ಆದರೆ ಈ ಮೊತ್ತ ಬಹಳ ಕಡಿಮೆ. ವರ್ಷಕ್ಕೆ ಆರು ಸಾವಿರ ಪಿಂಚಣಿಯು ಮೂಲ ಅಗತ್ಯಗಳಿಗೂ ಸಾಲುವುದಿಲ್ಲ ಎಂದು ಅವರು ಹೇಳಿದ್ದಾರೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ



Click it and Unblock the Notifications