For Quick Alerts
ALLOW NOTIFICATIONS  
For Daily Alerts

ವಿಶ್ವ ಆರೋಗ್ಯ ಸಂಸ್ಥೆಯೊಂದಿಗಿನ ಸಂಬಂಧವನ್ನು ಕಡಿತಗೊಳಿಸಿದ ಅಮೆರಿಕಾ

|

ಕೊರೊನಾವೈರಸ್ ಸೋಂಕು ಹರಡುವುದನ್ನು ತಪ್ಪಿಸಲು ವಿಶ್ವ ಆರೋಗ್ಯ ಸಂಸ್ಥೆ ವಿಫಲವಾಗಿದೆ ಎಂದು ಟೀಕಿಸುತ್ತಲೇ ಬಂದಿದ್ದ ಅಮೆರಿಕಾ ಇದೀಗ, ಅದರೊಂದಿಗಿನ ಸಂಬಂಧವನ್ನು ಕೊನೆಗೊಳಿಸಿರುವುದಾಗಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

 

10 ದಿನಗಳ ಹಿಂದೆ ವಾಗ್ದಾಳಿ ನಡೆಸಿದ್ದ ಟ್ರಂಪ್ 'ಡಬ್ಲ್ಯೂಎಚ್‌ಒ ಚೀನಾದ ಕೈಗೊಂಬೆ' ಎಂದು ಆರೋಪಿಸಿದ್ದರು. ಅಲ್ಲದೆ ತನ್ನ ಎಲ್ಲಾ ಆರ್ಥಿಕ ನೆರವನ್ನು ನಿರ್ಬಂಧಿಸಿದ್ದರು. ಇದೀಗ ಶಾಶ್ವತ ಆರ್ಥಿಕ ನೆರವನ್ನು ಕಡಿತಗೊಳಿಸಲು ಅಮೆರಿಕಾ ನಿರ್ಧರಿಸಿದೆ.

 
ವಿಶ್ವ ಆರೋಗ್ಯ ಸಂಸ್ಥೆಯೊಂದಿಗಿನ ಸಂಬಂಧವನ್ನು ಕಡಿತಗೊಳಿಸಿದ ಅಮೆರಿಕಾ

'ಜಾಗತಿಕ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಆರೋಗ್ಯ ಸಂಸ್ಥೆ ಸರಿಯಾಗಿ ನಡೆದುಕೊಂಡಿಲ್ಲ. ವಿನಂತಿ ಮಾಡಲಾದ ಮತ್ತು ಅಗತ್ಯವಿರುವ ಸುಧಾರಣೆಗಳನ್ನು ಮಾಡಲು ವಿಶ್ವಸಂಸ್ಥೆ ವಿಫಲವಾಗಿದೆ. ಹೀಗಾಗಿ ನಾವು ಅದರೊಂದಿಗಿನ ನಮ್ಮ ಸಂಬಂಧವನ್ನು ಕೊನೆಗೊಳಿಸುತ್ತಿದ್ದೇವೆ' ಎಂದು ಟ್ರಂಪ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಚೀನಾ ದೇಶವು ಡಬ್ಲ್ಯೂಎಚ್‌ಒಗೆ 45 ಮಿಲಿಯನ್ ಡಾಲರ್ ನೀಡಿದರೆ, ಅಮೆರಿಕಾ ಅಂದಾಜು 450 ಮಿಲಿಯನ್ ಡಾಲರ್ ನೆರವು ನೀಡುತ್ತಿದೆ. ಆದರೂ ವಿಶ್ವ ಆರೋಗ್ಯ ಸಂಸ್ಥೆ ಚೀನಾದ ಹಿಡಿತದಲ್ಲಿದೆ ಎಂದು ಟ್ರಂಪ್ ಕಿಡಿಕಾರಿದ್ದಾರೆ. ಜೊತೆಗೆ ಡಬ್ಲ್ಯೂಹೆಚ್ಒಗೆ ನೀಡುವ ಹಣವನ್ನು ಜಾಗತಿಕ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಇತರೆ ಸಂಸ್ಥೆಗಳಿಗೆ ನೀಡಲಾಗುತ್ತದೆ ಎಂದು ಇದೇ ವೇಳೆ ಟ್ರಂಪ್ ಅವರು ತಿಳಿಸಿದ್ದಾರೆ.

ಬಳಿಕ ಚೀನಾ ವಿರುದ್ಧವೂ ತೀವ್ರವಾಗಿ ಕಿಡಿಕಾರಿರುವ ಅವರು, ಹಾಂಕಾಂಗ್'ಗೆ ಅಮೆರಿಕಾ ಈವರೆಗೆ ನೀಡಿಕೊಂಡು ಬಂದಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಿದೆ. ಚೀನಾ ರೀತಿಯೇ ಅದನ್ನೂ ಕಾಣಲಿದೆ. ಅಮೆರಿಕಾ ವಿವಿ ಹಾಗೂ ಕಾಲೇಜುಗಳಲ್ಲಿ ಕೆಲ ಚೀನಾ ವಿದ್ಯಾರ್ಥಿಗಳ ಪ್ರವೇಶಕ್ಕೆ ತಡೆಯೊಡ್ಡಲಾಗುತ್ತದೆ ಎಂದಿದ್ದಾರೆ.

English summary

Trump Terminates US Relationship With WHO

US President Donald Trump has announced that he is terminating the country's relationship with the World Health Organization. and Takes action against hong kong
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X