ತುಮಕೂರಿಗರಿಗೆ ಸಿಹಿಸುದ್ದಿ: ದೊಡ್ಡ ಅಪ್ಡೇಟ್.. ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನ.. 41 ಎಕರೆ ಭೂಮಿ ಹಸ್ತಾಂತರ!

ತುಮಕೂರಿನ ಜನತೆಗೆ ಸಿಹಿಸುದ್ದಿ...ತುಮಕೂರಿನಲ್ಲಿ ವಿಮಾನ ನಿಲ್ದಾಣದ ಜೊತೆಗೆ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣ ಮಾಡಲು ಸಿದ್ದತೆಗಳು ನಡೆಯುತ್ತಿದ್ದು, ಇದೀಗ ತುಮಕೂರು ಕ್ರಿಕೆಟ್ ಸ್ಟೇಡಿಯಂ ಯೋಜನೆಯಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ.

ಹೌದು, ಬೆಂಗಳೂರಿನ ಸಮೀಪದಲ್ಲಿ ಇರುವ ತುಮಕೂರು ಜಿಲ್ಲೆ ಬೆಂಗಳೂರಿನಂತೆ ಅಭಿವೃದ್ದಿಯಾಗುತ್ತಿರುವ ನಗರ ಈಗಾಗಲೇ ಹಲವು ಅಭಿವೃದ್ಧಿ ಯೋಜನೆಗಳನ್ನು ತುಮಕೂರಿನಲ್ಲಿ ಅಭಿವೃದ್ದಿಪಡಿಸಲು ಹಲವಾರು ಯೋಜನೆಗೆಗಳಿಗೆ ಶಂಕು ಸ್ಥಾಪನೆಯನ್ನು ಮಾಡಿದೆ. ಇದೀಗ ಕ್ರಿಕೆಟ್ ಸ್ಟೇಡಿಯಂ ಯೋಜನೆ ವೇಗವಾಗಿ ಸಾಗುತ್ತಿದ್ದು, ಕ್ರೀಡಾಂಗಣ ನಿರ್ಮಿಸಲು 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ಹಸ್ತಾಂತರವನ್ನು ಮಾಡಿದೆ.

ತುಮಕೂರಿಗರಿಗೆ ಸಿಹಿಸುದ್ದಿ: ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನ ನಿರ್ಮಾಣ

ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಕೆಐಎಡಿಬಿ ಮೂಲಕ ಒದಗಿಸುವ 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (KSCA) ನೀಡಲಾಗಿದೆ.ಸಂಸ್ಥೆಯ ಪದಾಧಿಕಾರಿಗಳು, ಈಗ ಕೊಟ್ಟಿರುವ ಜಾಗದ ಪಕ್ಕದಲ್ಲೇ ಇರುವ 6.5 ಎಕರೆ ಖರಾಬು ಜಮೀನನ್ನು KSCAಗೆ ಒದಗಿಸಬೇಕು ಎಂದು ಮನವಿಯನ್ನು ಸಲ್ಲಿಕೆ ಮಾಡಿದ್ದಾರೆ.

ಇದಕ್ಕಾಗಿ ಸ್ಪಂದಿಸಿದ ಸಚಿವ ಎಂ.ಬಿ. ಪಾಟೀಲ, ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಚರ್ಚಿ ಮಾಡಿ. ನಿರ್ಧಾರವನ್ನು
ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.ತುಮಕೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣಗಳು ಬರಬೇಕಾದ ಅಗತ್ಯವಿದೆ ಎಂದು ಸಚಿವರು ಹೇಳಿದ್ದಾರೆ.

ಸ್ಥಳೀಯ ಪ್ರತಿಭೆಗಳಿಗೆ ಉಜ್ವಲ ಅವಕಾಶ

ಬೆಂಗಳೂರಿಗೆ ತೀರ ಹತ್ತಿರದಲ್ಲಿ ಇರುವ ತುಮಕೂರು ಜಿಲ್ಲೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಇಲ್ಲಿ ಒಂದು ಕ್ರಿಕೆಟ್ ಕ್ರೀಡಾಂಗಣ ಅಗತ್ಯವಿದೆ ಎಂದು ಗೃಹ ಸಚಿವ ಪರಮೇಶ್ವರ ಕೂಡ ಹೇಳಿಕೆಯನ್ನು ನೀಡಿದ್ಧಾರೆ. ತುಮಕೂರಿನಲ್ಲೂ ಒಂದು ಕ್ರೀಡಾಂಗಣ ಬಂದರೆ ಅಲ್ಲಿನ ಪ್ರತಿಭೆಗಳಿಗೆ ಉಜ್ವಲ ಅವಕಾಶಗಳು ಸಿಗುತ್ತವೆ ಎಂದು ಹೇಳಿಕೆ ನೀಡಿದ್ದಾರೆ.

'ವಿಜಯಪುರದಲ್ಲೂ ಇಂಥದ್ದೊಂದು ಕ್ರೀಡಾಂಗಣ ಬರಬೇಕು ಎನ್ನುವುದು ತಮ್ಮ ಕನಸಾಗಿದೆ. ಇಂತಹ ಮೈದಾನದಲ್ಲಿ ಪಂಚತಾರಾ ಹೋಟೆಲ್ ಸೇರಿ ಅನೇಕ ಅನುಕೂಲಗಳು ಬರಲಿವೆ. ಕ್ರೀಡೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೆಐಎಡಿಬಿ ಮೂಲಕ 41 ಎಕರೆ ಜಾಗವನ್ನು ರಿಯಾಯಿತಿ ದರದಲ್ಲಿ ಅಂದರೆ ಎಕರೆಗೆ ₹15 ಲಕ್ಷದಂತೆ ನೀಡಲಾಗಿದೆ.

ವಿಜಯಪುರದಲ್ಲೂ ಕ್ರಿಕೆಟ್ ಕ್ರೀಡಾಂಗಣ ಬರಬೇಕು

ವಿಜಯಪುರ ಜಿಲ್ಲೆಯಲ್ಲೂ ಸಹ ಕ್ರಿಕೆಟ್ ಕ್ರೀಡಾಂಗಣ ಬರಬೇಕು. ಇದು ಕನಸ್ಸಿನ ಕೂಸು, ಇಲ್ಲಿ ಕ್ರೀಡಾಂಗಣ ನಿರ್ಮಾಣವಾದರೆ ಅನೇಕ ಅನುಕೂಲಗಳು ಸಿಗುತ್ತೆ. ಇದರ ಜೊತೆಗೆ ಸುತ್ತಮುತ್ತಲಿನ ಪ್ರದೇಶಗಳು ಸಹ ಅಭಿವೃದ್ಧಿ ಕಾಣಲಿವೆ ಎಂದು ಸಚಿವ ಎಂ.ಬಿ ಪಾಟೀಲ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕ್ರೀಡೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ತುಮಕೂರು ವ್ಯಾಪ್ತಿಯ ಈ 41 ಎಕರೆ ಜಾಗವನ್ನು ರಿಯಾಯಿತಿ ದರದಲ್ಲಿ ಅಂದರೆ ಎಕರೆಗೆ 15 ಲಕ್ಷದಂತೆ ಸ್ವಾಧೀನ ಮಾಡಿಕೊಂಡು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (KSCA) ನೀಡಲಾಗಿದೆ ಎಂದು ಸಚಿವ ಪಾಟೀಲರು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024 ರ ಡಿಸೆಂಬರ್ 2 ರಂದು, ತುಮಕೂರಿನ ಸೋರೆಕುಂಟೆ ಗ್ರಾಮದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಮೊದಲು ಕ್ರೀಡಾಂಗಣ ನಿರ್ಮಾಣಕ್ಕೆ 41 ಎಕರೆ ಭೂಮಿಯನ್ನು KIADB ಮೂಲಕ KSCA ಗೆ ಹಸ್ತಾಂತರಿಸಲಾಗಿತ್ತು. ಆದರೆ, ತದ ನಂತರ 50 ಎಕರೆ ಭೂಮಿಯನ್ನು ಒದಗಿಸಲಾಗಿದ್ದು, ಇದು ಕ್ರೀಡಾಂಗಣದ ವಿಸ್ತಾರ ಮತ್ತು ಸೌಲಭ್ಯಗಳನ್ನು ಹೆಚ್ಚಿಸಲು ಹೆಚ್ಚಿನ ಅನುಕೂಲವಾಗಲಿದೆ.

ತುಮಕೂರಿನಲ್ಲಿ ಕ್ರಿಕೆಟ್ ಕ್ರೀಡಾಂಗಣವು ತುಮಕೂರು ಜಿಲ್ಲೆಯ ಆರ್ಥಿಕ ಮತ್ತು ಕ್ರೀಡಾ ಅಭಿವೃದ್ಧಿಗೆ ಹೆಚ್ಚಿನ ಕೊಡುಗೆ ಸಿಗಲಿದೆ. ಸ್ಥಳೀಯ ಕ್ರಿಡಾಪಟುಗಳಿಗೆ ಇದು ಹೆಚ್ಚು ಅನುಕೂಲವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+