ಭಾರತದ ಎರಡನೇ ಅತಿದೊಡ್ಡ ಸ್ಕೂಟರ್ ತಯಾರಕ ಕಂಪನಿ ಟಿವಿಎಸ್ ಮೋಟಾರ್ ಕಂಪನಿಯು ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ 'ಐಕ್ಯೂಬ್' ಅನ್ನು ಶನಿವಾರ ಬಿಡುಗಡೆ ಮಾಡಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಮತ್ತು ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಾಹನವನ್ನು ಅನಾವರಣಗೊಳಿಸಿದ್ದಾರೆ.
ಬಜಾಜ್ ಆಟೋ ಲಿಮಿಟೆಡ್ ತನ್ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ 'ಚೇತಕ್' ಅನ್ನು ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದ ಬೆನ್ನಲ್ಲೇ, ಟಿವಿಎಸ್ 1.5 ಲಕ್ಷ ಬೆಲೆಯನ್ನು ಹೊಂದಿರುವ 'ಐಕ್ಯೂಬ್' ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದೆ. ಚೇತಕ್ ದೇಶೀಯ ಮಾರುಕಟ್ಟೆಯಲ್ಲಿ 1 ಲಕ್ಷ ಮತ್ತು 1.5 ಲಕ್ಷ ದರದಲ್ಲಿ ಬಿಡುಗಡೆ ಮಾಡಿದೆ.

ಕಚ್ಚಾ ತೈಲದ ಮಾಲಿನ್ಯ ಮತ್ತು ಆಮದನ್ನು ಕಡಿಮೆ ಮಾಡಲು ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿ ಮತ್ತು ಉತ್ಪಾದನೆಯಲ್ಲಿ ತಮ್ಮ ಹೂಡಿಕೆಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರ ವಾಹನ ತಯಾರಕರಿಗೆ ಒತ್ತಾಯಿಸುತ್ತಿದೆ. ವೇಣು ಶ್ರೀನಿವಾಸನ್ ನೇತೃತ್ವದ ಕಂಪನಿಯು ಜನವರಿ 27 ರಿಂದ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟವನ್ನು ಪ್ರಾರಂಭಿಸಲಿದ್ದು, ಆರಂಭಿಕ ಉತ್ಪಾದನಾ ಸಾಮರ್ಥ್ಯ ತಿಂಗಳಿಗೆ 1,000 ಯುನಿಟ್ಗಳಷ್ಟಿದೆ.
ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಗಂಟೆಗೆ 78 ಕಿಲೋಮೀಟರ್ ವೇಗವನ್ನು ಹೊಂದಿರುತ್ತದೆ ಮತ್ತು 75 ಕಿಲೋಮೀಟರ್ ಪೂರ್ಣ ಚಾರ್ಜ್ನಲ್ಲಿ ಚಲಿಸಲು ಸಾಧ್ಯವಾಗುತ್ತದೆ.
More From GoodReturns

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Vande Bharat: ಸುಂದರ ನೋಟ, ವೇಗದ ಸೇವೆ; ವಂದೇ ಭಾರತ್ ರೈಲಿನ ವಿಶೇಷ ಮಾರ್ಗಗಳಿವು!

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications