ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕವು ದಾಖಲೆಯ ಮಟ್ಟದಲ್ಲಿ ಏರಿಕೆಯಾಗುತ್ತಿದ್ದು, ಅನೇಕ ರಾಷ್ಟ್ರಗಳು ಭಾರತದ ಸಹಾಯಕ್ಕೆ ನಿಂತಿವೆ. ಇದರ ಜೊತೆಗೆ ದೇಶೀಯ ದ್ವಿಚಕ್ರ ವಾಹನ ತಯಾರಕ ಟಿವಿಎಸ್ ಮೋಟಾರ್, ಕೊರೊನಾ ವಿರುದ್ಧದ ಹೋರಾಟಕ್ಕೆ 40 ಕೋಟಿ ರೂಪಾಯಿ ನೆರವು ನೀಡಿದೆ.
ಆಮ್ಲಜನಕದ ಕಾನ್ಸನ್‌ಟ್ರೇಟರ್‌ಗಳು, ಪಿಪಿಇ ಕಿಟ್‌ಗಳು, ಔಷಧಗಳನ್ನು ನೀಡಲು ಈ ಹಣವನ್ನು ಬಳಸಿಕೊಳ್ಳಲಾಗುತ್ತದೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

ಟಿವಿಎಸ್ ಮೋಟರ್ ಕಂಪನಿಯು ಸುಂದರಂ ಕ್ಲೇಟನ್ ಮತ್ತು ತನ್ನ ಸಮೂಹದ ಇತರ ಕಂಪನಿಗಳ ಜೊತೆಯಾಗಿ ಈ ಕೋವಿಡ್-19 ಪರಿಹಾರವನ್ನು ನೀಡುವುದಾಗಿ ತಿಳಿಸಿದೆ. ಇನ್ನು ಕಂಪನಿಯು ಒಟ್ಟು ಎರಡು ಸಾವಿರ ಆಮ್ಲಜನಕದ ಕಾನ್ಸನ್‌ಟ್ರೇಟರ್‌ಗಳನ್ನು ಆಸ್ಪತ್ರೆಗಳಿಗೆ ನೀಡಲಿದೆ.
ತಮಿಳುನಾಡು, ಕರ್ನಾಟಕ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಅಗತ್ಯ ಸೇವೆಗಳ ವಲಯಗಳಲ್ಲಿ ಕೆಲಸ ಮಾಡುವವರಿಗೆ ಪ್ರತಿದಿನ 20 ಸಾವಿರಕ್ಕೂ ಹೆಚ್ಚು ಪೊಟ್ಟಣ ವಿತರಿಸಿದೆ.
ಜೊತೆಗೆ ಈ ರಾಜ್ಯಗಳ 500 ಕ್ಕೂ ಹೆಚ್ಚು ಸರ್ಕಾರಿ ಆರೋಗ್ಯ ಕೇಂದ್ರಗಳು ಮತ್ತು ಆಸ್ಪತ್ರೆಗಳಿಗೆ ಒಂದು ದಶಲಕ್ಷಕ್ಕೂ ಹೆಚ್ಚು ಫೇಸ್ ಮಾಸ್ಕ್, ಸಾವಿರಾರು ಆಕ್ಸಿಮೀಟರ್ ಮತ್ತು ಪಿಪಿಇ ಕಿಟ್, ಹ್ಯಾಂಡ್ ಸ್ಯಾನಿಟೈಸರ್ ಮತ್ತು ಅಗತ್ಯ ಔಷಧಿಗಳನ್ನು ವಿತರಿಸುವುದಾಗಿ ಕಂಪನಿಯು ತಿಳಿಸಿದೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಪ್ರಾಪ್ಶೇರ್ ಸೆಲೆಸ್ಟಿಯಾ ಐಪಿಒ: ಹೂಡಿಕೆಗೆ ಇಂದು ಕೊನೆಯ ಅವಕಾಶ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications