ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಇಸ್ರೇಲ್ ಮಧ್ಯೆ ಭಾನುವಾರದಿಂದ ಟೆಲಿಫೋನ್ ಸಂಪರ್ಕ ಆರಂಭವಾಗಿದೆ. ಕಳೆದ ವಾರ ಎರಡೂ ದೇಶಗಳ ಮಧ್ಯೆ ರಾಜತಾಂತ್ರಿಕ ಸಂಬಂಧ ಸಹಜ ಸ್ಥಿತಿಗೆ ಬಂದ ನಂತರ ಈ ಬೆಳವಣಿಗೆ ನಡೆದಿದೆ. ಯುಎಇ ಮತ್ತು ಇಸ್ರೇಲ್ ಮಧ್ಯೆ ಇದ್ದ ಟೆಲಿಫೋನ್ ಕರೆ ನಿರ್ಬಂಧವನ್ನು ನಿರ್ದಿಷ್ಟವಾಗಿ ಯಾವಾಗ ಮಾಡಲಾಗಿತ್ತು ಎಂಬ ಬಗ್ಗೆ ಮಾಹಿತಿ ಇಲ್ಲ. ಆದರೆ ಈ ಹಿಂದೆ ಕರೆ ಮಾಡಲು ಸಾಧ್ಯವಿರಲಿಲ್ಲ.
ಯುಎಇ ದೂರಸಂಪರ್ಕ ನಿಯಂತ್ರಕ ಪ್ರಾಧಿಕಾರದಿಂದ ಈ ಬಗ್ಗೆ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇಸ್ರೇಲಿನ ಬಹುತೇಕ ನ್ಯೂಸ್ ವೆಬ್ ಸೈಟ್ ಗಳನ್ನು ಈ ಹಿಂದೆ ಯುಎಇಯಲ್ಲಿ ನಿರ್ಬಂಧಿಸಲಾಗಿತ್ತು. ಅದನ್ನು ಕೂಡ ಭಾನುವಾರದಿಂದ ಯುಎಇ ಇಂಟರ್ ನೆಟ್ ಸಂಪರ್ಕದೊಂದಿಗೆ ವೀಕ್ಷಿಸಬಹುದು.
ಯುಎಇ ಮತ್ತು ಇಸ್ರೇಲ್ ಮಧ್ಯೆ ರಾಜತಾಂತ್ರಿಕ ಸಂಬಂಧವನ್ನು ಸಹಜವಾಗಿ ನಡೆಸಿಕೊಂಡು ಹೋಗುವ ಬಗ್ಗೆ ಕಳೆದ ವಾರ ಎರಡೂ ದೇಶಗಳು ಘೋಷಣೆ ಮಾಡಿದವು. ಎರಡೂ ದೇಶಗಳ ಮಧ್ಯದ ಈ ಹಿಂದಿನ ಕರೆ ನಿರ್ಬಂಧವು ಯುಎಇ ಕಡೆಯಿಂದ ಆಗಿದ್ದು ಎಂದು ಇಸ್ರೇಲಿ ಅಧಿಕಾರಿಯೊಬ್ಬರು ಹೇಳಿದ್ದಾರೆ. "ಈಗ ಕರೆಗಳು ಸಾಧ್ಯ ಎಂಬ ಬಗ್ಗೆ ನನಗೆ ಗೊತ್ತಿದೆ" ಎಂದು ಅವರು ಮಾಧ್ಯಮ ಸಂಸ್ಥೆಯೊಂದರ ಜತೆ ಮಾಹಿತಿ ಹಂಚಿಕೊಂಡಿದ್ದಾರೆ.

ಯುಎಇಯ ಎರಡು ಮುಖ್ಯ ಟೆಲಿಕಾಂ ಸಂಸ್ಥೆಗಳಾದ ಡು ಮತ್ತು ಎತಿಸಲಾತ್ ಈಗಿನ ಬೆಳವಣಿಗೆ ಕುರಿತು ಯಾವ ಪ್ರತಿಕ್ರಿಯೆ ಕೊಟ್ಟಿಲ್ಲ. ಇಪ್ಪತ್ತೈದು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಅರಬ್ ದೇಶವೊಂದರೊಂದಿಗೆ ಇಸ್ರೇಲ್ ಶಾಂತಿ ಒಪ್ಪಂದವನ್ನು ಮಾಡಿಕೊಂಡಿದೆ.
More From GoodReturns

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications