ಕರ್ನಾಟಕದಲ್ಲಿ ಬಹಳ ವರ್ಷಗಳಿಂದ ಅತಿಥಿ ಉಪನ್ಯಾಸಕರ ಸಂಪ್ರದಾಯ ರೂಢಿಯಲ್ಲಿದೆ. ಪ್ರಾಥಮಿಕ ತರಗತಿಗಳಿಂದ ಕಾಲೇಜು ಶಿಕ್ಷಣದವರೆಗೂ ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡುತ್ತದೆ. ಇನ್ನು ಕರ್ನಾಟಕದಲ್ಲಿ ಸರ್ಕಾರಿ ಪ್ರಥಮ ದರ್ಜೆ (ಪದವಿ) ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಿಸುವುದಕ್ಕೆ ಸರ್ಕಾರವೇ ಅನುಮತಿ ಕೊಟ್ಟಿತ್ತು. ಆದ್ರೆ ಇದೀಗ ಅತಿಥಿ ಉಪನ್ಯಾಕರಾಗಿ ಕಳೆದ ಎರಡು ದಶಕಗಳಿಂದ ಕೆಲಸ ಮಾಡುತ್ತಾ ಬಂದಿರುವ ಸಾವಿರಾರು ಮಂದಿ ಅತಿಥಿ ಉಪನ್ಯಾಸಕರು, ಇಂದು ದೊಡ್ಡ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಯುಜಿಸಿ ಜಾರಿಗೆ ತಂದಿರುವ ಹೊಸ ನಿಯಮ (UGC New Rule), ಹೈಕೋರ್ಟ್ ಆದೇಶ, ಇವೆಲ್ಲವೂ ಪ್ರಸ್ತುತ ಅತಿಥಿ ಉಪನ್ಯಾಸಕರಿಗೆ ಉದ್ಯೋಗವೇ ಇಲ್ಲದಂತೆ ಮಾಡುತ್ತಿದೆ. ಈ ಪರಿಣಾಮ ಸುಮಾರು 6,000 ಕ್ಕೂ ಅಧಿಕ ಅತಿಥಿ ಉಪನ್ಯಾಸಕರು (Guest lecturers) ಕೆಲಸ ಇಲ್ಲದೆ ನಿರುದ್ಯೋಗಿಗಳಾಗಲಿದ್ದಾರೆ ಎಂದು ವರದಿಯಾಗಿದೆ.

ಹೌದು, ಕರ್ನಾಟಕದಲ್ಲಿ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ದುಡಿಯುತ್ತಿದ್ದವರಿಗೆ, ಯುಜಿಸಿ ಬಿಗ್ ಶಾಕ್ ಕೊಟ್ಟಿದೆ. ವಿಶ್ವವಿದ್ಯಾಲಯ ಅನುದಾನ ಆಯೋಗದ (UGC) ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಕರ್ನಾಟಕ ಹೈಕೋರ್ಟ್ ನೀಡಿದ ಆದೇಶದ ಹಿನ್ನೆಲೆಯಲ್ಲಿ ಇದೀಗ ಸುಮಾರು 6,000 ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ.
ಏನಿದು ಹೊಸ ನಿಯಮ?
ಯುಜಿಸಿ ತನ್ನ ವಿಶ್ವವಿದ್ಯಾಲಯಗಳು ಮತ್ತು ಪದವಿ ಕಾಲೇಜುಗಳಲ್ಲಿ ಶಿಕ್ಷಕರ ನೇಮಕಾತಿ ಮತ್ತು ಪದೋನ್ನತಿಗಾಗಿ ಕನಿಷ್ಠ ಅರ್ಹತೆಗಳನ್ನು ನಿಗದಿಪಡಿಸಿತ್ತು. ಇದೇ ಪರಿಣಾಮ ಕರ್ನಾಟಕದಲ್ಲೂ ಉದ್ಭವಿಸಿತು. ಅಂದರೆ ಕರ್ನಾಟಕದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೂ ಇದೇ ನಿಯಮಗಳು ಅನ್ವಯವಾಗುವಂತೆ ಸೂಚನೆ ಹೊರಡಿಸಲಾಯಿತು. ಪ್ರಸ್ತುತ ಸೇವೆ ಸಲ್ಲಿಸುತ್ತಿದ್ದ ಅತಿಥಿ ಉಪನ್ಯಾಸಕರು ದಶಕಗಳಿಂದ ಅತ್ಯಂತ ಕಡಿಮೆ ಸಂಬಳದಲ್ಲಿ, ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಾ ಬರುತ್ತಿದ್ದರು. ಆದ್ರೆ ಯುಜಿಸಿ ಹೊಸ ನಿಯಮಗಳ ಪ್ರಕಾರ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಹತೆ ಪಡೆಯಬೇಕೆಂದರೆ, ಕನಿಷ್ಠ NET/KSET ಅಥವಾ PhD ಅಗತ್ಯವಿದೆ. ಈ ಅರ್ಹತೆ ಇಲ್ಲದ ಅನೇಕ ಹಿರಿಯ ಅತಿಥಿ ಉಪನ್ಯಾಸಕರು ಇದೀಗ ನಿರುದ್ಯೋಗಿಗಳಾಗಿದ್ದಾರೆ.
ಈಗಾಗಲೇ ಹೈಕೋರ್ಟ್ ಆದೇಶದಂತೆ, ರಾಜ್ಯ ಕಾಲೇಜು ಶಿಕ್ಷಣ ಇಲಾಖೆ 2025-26ನೇ ಸಾಲಿನ 2, 4, 6ನೇ ಸೆಮಿಸ್ಟರ್‌ಗಳಿಗೆ ಹೊಸ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಇದು ಸಂಪೂರ್ಣವಾಗಿ ಯುಜಿಸಿ ನಿಯಮಗಳಡಿಯಲ್ಲಿ, ಸ್ನಾತಕ್ಕೋತ್ತರ ಪದವಿ, ಎನ್‌ಇಟಿ, ಕೆ-ಸೆಟ್ ಅಥವಾ ಪಿಎಚ್‌ಡಿ ಆಧಾರದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ.
ಸಮಸ್ಯೆ ಉಂಟಾಗಿದ್ದು ಹೇಗೆ?
ಯುಜಿಸಿ ನಿಯಮಗಳ ಪ್ರಕಾರ ಅತಿಥಿ ಉಪನ್ಯಾಸಕರ ನೇಮಕಾತಿ ಪೂರ್ಣಕಾಲಿಕ ಶಿಕ್ಷಕರಂತೆಯೇ ಇರಬೇಕು ಎಂದು ರೂಪಿಸಲಾಗಿತ್ತು. ಅಲ್ಲದೇ ಈ ಕುರಿತು ಯುಜಿಸಿ ಅರ್ಹತೆ ಪಡೆದ ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಇ, ಅರ್ಹತೆ ಇಲ್ಲದವರನ್ನು ತೆಗೆದುಹಾಕಬೇಕೆಂದು ಅರ್ಜಿ ಸಲ್ಲಿಸಿದ್ದರು. ಕಳೆದ ನವೆಂಬರ್ - ಡಿಸೆಂಬರ್‌ನಲ್ಲಿ ಈ ಆದೇಶ ಬಂದ ನಂತರ, ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿದ್ದ, ಉಪನ್ಯಾಸಕರನ್ನು ತೆಗೆದುಹಾಕಲಾಯಿತು. ಈ ಪರಿಣಾಮ ಸುಮಾರು 6,000 ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ನಿರುದ್ಯೋಗಿಗಳಾಗಿದ್ದಾರೆ ಎನ್ನಲಾಗಿದೆ.
ಅತಿಥಿ ಉಪನ್ಯಾಸಕರ ಪ್ರತಿಭಟನೆ
ಯುಜಿಸಿ ನಿಯಮದ ವಿರುದ್ಧ ಬಾಧಿತ ಅತಿಥಿ ಉಪನ್ಯಾಸಕರು ಕೂಡಾ ಈಗಾಗಲೇ ಹಲವು ಬಾರಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು, ಶಿವಮೊಗ್ಗ, ಮಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಅಲ್ಲದೇ ಸಿಎಂ ಸಿದ್ದರಾಮಯ್ಯ ಕೂಡಾ, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರಿಗೆ ಮುಂದುವರೆಸುವಂತೆ ಮನವಿ ಮಾಡಿದ್ದರು. ಆದರೆ ಸಚಿವ ಎಂ.ಸಿ. ಸುಧಾರಕರ್ ಅವರು ಯುಜಿಸಿ ನಿಯಮ ಬದಲಾಯಿಸಿದರೆ ಸಮಸ್ಯೆಗೆ ಪರಿಹಾರ ಸಿಗುತ್ತೆ ಎಂದು ಹೇಳಿದ್ದಾರೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications