ನವದೆಹಲಿ, ಫೆಬ್ರವರಿ 1: ಆದಾಯ ತೆರಿಗೆ ಪಾವತಿಸುವ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ನೆಮ್ಮದಿಯ ಸುದ್ದಿ ನೀಡಿದೆ. ಇನ್ನು ಮುಂದೆ 75 ವರ್ಷ ದಾಟಿದ ಹಿರಿಯ ನಾಗರಿಕರು ಹಾಗೂ ಕೇವಲ ಪಿಂಚಣಿ ಮತ್ತು ಬಡ್ಡಿ ಮೂಲಕ ಆದಾಯ ಪಡೆದುಕೊಳ್ಳುವ ವ್ಯಕ್ತಿಗಳು ಇನ್ನು ಮುಂದೆ ಆದಾಯ ತೆರಿಗೆ ರಿಟರ್ನ್ಸ್ ಪಾವತಿ ಮಾಡುವ ಅಗತ್ಯವಿಲ್ಲ ಎಂದು ಸೋಮವಾರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದರಿಂದ ಹಿರಿಯ ನಾಗರಿಕರಿಗೆ ವಿನಾಯಿತಿ ನೀಡಲಾಗಿದೆ. ಆದರೆ ಅವರ ಬದಲು ಇನ್ನು ಮುಂದೆ ಸಂಬಂಧಿತ ಬ್ಯಾಂಕ್‌ಗಳು ಐಟಿಆರ್ ಸಲ್ಲಿಕೆ ಮಾಡಲಿವೆ.
ಹಾಗೆನೇ ಅನಿವಾಸಿ ಭಾರತೀಯರಿಗೆ ಬಜೆಟ್‌ನಲ್ಲಿ ಮತ್ತಷ್ಟು ಉತ್ತೇಜನ ನೀಡಲಾಗಿದೆ. ಅನಿವಾಸಿ ಭಾರತೀಯರ ವಿದೇಶಿ ನಿವೃತ್ತಿ ಫಂಡ್‌ನಲ್ಲಿನ ದುಪ್ಪಟ್ಟು ತೆರಿಗೆಯನ್ನು ತೆಗೆದುಹಾಕಲು ಸರ್ಕಾರ ಅಧಿಸೂಚನೆ ಹೊರಡಿಸಲಿದೆ ಎಂದು ನಿರ್ಮಲಾ ತಿಳಿಸಿದ್ದಾರೆ.

ಟ್ಯಾಕ್ಸ್ ರಿಟರ್ನ್ಸ್ ಅನ್ನು ಮರು ತೆರೆಯಲು ಇದ್ದ ಸಮಯದ ಮಿತಿಯನ್ನು ಮೂರು ವರ್ಷಗಳಿಗೆ ಇಳಿಸಲಾಗಿದೆ. ಪ್ರಸ್ತುತ ಅದು ಆರು ವರ್ಷಗಳವರೆಗೆ ಇತ್ತು. ಗಂಭೀರ ವಂಚನೆಗಳಲ್ಲಿಯೂ 50 ಲಕ್ಷಕ್ಕೂ ಅಧಿಕ ಮೊತ್ತದ ತೆರಿಗೆಯ ಸಾಧ್ಯತೆ ಇದ್ದರೆ ಮಾತ್ರ ಈ ಮಿತಿಯನ್ನು ಹೆಚ್ಚುವರಿಯಾಗಿ ನೀಡಬಹುದು.
ಆದಾರ ತೆರಿಗೆ ರಿಟರ್ನ್ಸ್ ಸಲ್ಲಿಸುವವರ ಸಂಖ್ಯೆ 2014ರಲ್ಲಿ 3.31 ಕೋಟಿ ಇದ್ದರೆ, ಅದು 2020ರ ವೇಳೆಗೆ 6.48 ಕೋಟಿಗೆ ಏರಿಕೆಯಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು. ನಮ್ಮ ತೆರಿಗೆ ವ್ಯವಸ್ಥೆಯು ಪಾರದರ್ಶಕವಾಗಬೇಕು. ನೇರ ತೆರಿಗೆ ವ್ಯವಸ್ಥೆಯಲ್ಲಿ ಸರ್ಕಾರವು ಸರಣಿ ಸುಧಾರಣೆಗಳನ್ನು ಆರಂಭಿಸಿದೆ. ತೆರಿಗೆ ದಕ್ಷತೆಯನ್ನು ಸುಧಾರಿಸಲು ನೇರ ತೆರಿಗೆ ಆಡಳಿತದಲ್ಲಿ ಮುಖರಹಿತ ಮೌಲ್ಯನಿರ್ಣಯ ಪದ್ಧತಿಯನ್ನು ಜಾರಿಗೊಳಿಸಲಾಗಿದೆ. ಸಣ್ಣ ತೆರಿಗೆದಾರರಿಗಾಗಿ ಖುದ್ದು ಹಾಜರಾಗುವ ಅಗತ್ಯವಿಲ್ಲದ ವಾಜ್ಯ ಪರಿಹಾರ ಪದ್ಧತಿ ಜಾರಿಗೆ ತರಲಾಗುತ್ತದೆ.
ಮಧ್ಯಮ ಮತ್ತು ಸಣ್ಣ ಉದ್ಯಮಗಳಲ್ಲಿನ ತೆರಿಗೆ ಲೆಕ್ಕಪರಿಶೋಧನೆ ಮಿತಿಯನ್ನು 5 ಕೋಟಿ ರೂಪಾಯಿಯಿಂದ 10 ಕೋಟಿ ರೂಗೆ ಹೆಚ್ಚಿಸಲಾಗಿದೆ.
More From GoodReturns

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Price Today: ಭಾನುವಾರ ನಿಂತಲ್ಲೇ ನಿಂತ ಬೆಳ್ಳಿ ದರ! ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ

Silver Rate: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Silver Rate Kannada: ಬೆಳ್ಳಿ ದರದಲ್ಲಿ ಇಂದು ಭರ್ಜರಿ ಇಳಿಕೆ! ಒಂದೇ ದಿನ 20,000 ರೂ. ಕುಸಿತ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?



Click it and Unblock the Notifications