ಕೇಂದ್ರ ಬಜೆಟ್ (union budget) ಮಂಡನೆಗೆ ಕ್ಷಣಗಣನೆ ಆರಂಭ. ಕೇಂದ್ರ ಹಣಕಾಸು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ತಮ್ಮ ಎಂಟನೇ ದಾಖಲೆಯ ಬಜೆಟ್ ಅನ್ನು (budget 2025) ಸಂಸತ್ತಿನಲ್ಲಿ ನಾಳೆ ಮಂಡಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 3.0 ಅಧಿಕಾರಕ್ಕೆ ಬಂದ ನಂತರ ಇದು ಎರಡನೇ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಆಗಿದೆ. ಬಹುದಿನಗಳ ಕಾಯುವಿಕೆಗೆ ನಾಳೆ ವಿದ್ಯುಕ್ತವಾಗಿ ತೆರೆ ಬೀಳಲಿದೆ.
ಹೌದು, ಪ್ರಸಕ್ತ ಬಜೆಟ್ ಅಧಿವೇಶನವು ಇಂದಿನಿಂದ (ಜನವರಿ 31) ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನಡೆಯಲಿದೆ. ನೂತನ ಸಂಸತ್ ಭವನದ ಲೋಕಸಭೆಯ ಸಭಾಂಗಣದಲ್ಲಿ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ (ನಾಳೆ) ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಫೆಬ್ರವರಿ 3, 4ರಂದು ಹಾಗೂ ರಾಜ್ಯಸಭೆಗೆ 3 ದಿನಗಳ ಅವಕಾಶ ನೀಡಲಾಗಿದೆ. ಪ್ರಧಾನಿ ಮೋದಿ ಫೆಬ್ರವರಿ 6ರಂದು ಚರ್ಚೆಗೆ ಉತ್ತರಿಸುವ ಸಾಧ್ಯತೆಯಿದೆ.

2 ಹಂತಗಳಲ್ಲಿ ಬಜೆಟ್ ಅಧಿವೇಶ
ಸಂಸತ್ತಿನ ಬಜೆಟ್ ಅಧಿವೇಶನವು ಎರಡು ಹಂತಗಳಲ್ಲಿ ನಡೆಯಲಿದೆ. ಜನವರಿ 31 ರಂದು ರಾಷ್ಟ್ರಪತಿ ದೌಪದಿ ಮುರ್ಮು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಲೋಕಸಭೆಯಲ್ಲಿ ಬಜೆಟ್ ಮಂಡಿಸಲಿದ್ದಾರೆ. ಅಧಿವೇಶನದ ಮೊದಲ ಭಾಗವು ಜನವರಿ 31 ರಿಂದ ಫೆಬ್ರವರಿ 13 ರವರೆಗೆ ನಡೆಯಲಿದೆ. ಅಧಿವೇಶನದ ಎರಡನೇ ಭಾಗವು ಮಾರ್ಚ್ 10 ರಂದು ಪ್ರಾರಂಭವಾಗಿ ಏಪ್ರಿಲ್ 4 ರವರೆಗೆ ಮುಂದುವರಿಯುತ್ತದೆ. ಹೀಗಾಗಿ ಜ. 31ರಿಂದ ಏ. 4ರವರೆಗೆ ಒಟ್ಟು 27 ದಿನಗಳ ಕಾಲ ಚರ್ಚೆ ನಡೆಯಲಿದೆ.
ಕೇಂದ್ರ ಬಜೆಟ್ ಎಂದರೇನು?
ಕೇಂದ್ರ ಬಜೆಟ್ ಎಂದರೆ ದೇಶ ಆಯವ್ಯಯದ ಲೆಕ್ಕಾಚಾರವಾಗಿದೆ. ದಿನಾಂಕ, ಸಮಯ ಯಾವಾಗ? ಬಜೆಟ್‌ನ್ನು ಹಣಕಾಸು ಸಚಿವೆ ಸೀತಾರಾಮನ್ ಅವರು ಫೆಬ್ರವರಿ 1, 2025 ರಂದು ಸಂಸತ್ತಿನಲ್ಲಿ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಭಾಷಣವು ಲೋಕಸಭೆಯಲ್ಲಿ ಬೆಳಿಗ್ಗೆ 11.00 ಗಂಟೆಗೆ ಶುರುವಾಗುತ್ತದೆ.
ಕೇಂದ್ರ ಬಜೆಟ್ ನೇರಪ್ರಸಾರ ವೀಕ್ಷಿಸುವುದು ಹೇಗೆ?
2025ರ ಕೇಂದ್ರ ಬಜೆಟ್ ಅನ್ನು ಸಂಸತ್ತಿನ ಅಧಿಕೃತ ಚಾನೆಲ್‌ಗಳು, ದೂರದರ್ಶನ ಮತ್ತು ಸಂಸದ್ ಟಿವಿಯಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಇದನ್ನು ಸರ್ಕಾರದ ಅಧಿಕೃತ YouTube ಚಾನೆಲ್‌ಗಳಲ್ಲಿ ಸ್ಟ್ರೀಮ್ ಮಾಡಲಾಗುತ್ತದೆ ಇದನ್ನು ಸಹ ನೀವು ವೀಕ್ಷಣೆ ಮಾಡಬಹುದು.
ನಿಮಗೆ ಬಜೆಟ್ ಪ್ರತಿ ಎಲ್ಲಿ ಸಿಗುತ್ತದೆ?
ಬಜೆಟ್ ಪ್ರತಿ ಕೇಂದ್ರ ಸರ್ಕಾರದ ಅಧಿಕೃತ ವೆಬ್ ಪೋರ್ಟಲ್ www.indiabudget.gov.in ನಲ್ಲೂ ಬಜೆಟ್ ಪ್ರತಿಗಳು ಸಿಗುತ್ತವೆ. ಈ ದಾಖಲೆಗಳು ಹಿಂದಿ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ನಿಮಗೆ ಸಿಗುತ್ತದೆ.
ನಾಳೆ ನಿರ್ಮಲಾ ಸೀತಾರಾಮನ್ ಸತತ 8ನೇ ಬಜೆಟ್
ನಾಳೆಯೇ ಕೇಂದ್ರ ಬಜೆಟ್. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1ರಂದು ಪ್ರಧಾನಿ ಮೋದಿ ಸರ್ಕಾರದ 3ನೇ ಅವಧಿಯ 2ನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ಸೀತಾರಾಮನ್ ಸತತ 8ನೇ (7 ಪೂರ್ಣಾವಧಿ, 2024ರ ಫೆಬ್ರವರಿ 1 ರಂದು ಮಧ್ಯಂತರ ಬಜೆಟ್) ಬಾರಿ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸಲಿದ್ದಾರೆ. ಇನ್ನೂ 3 ಬಜೆಟ್ ಮಂಡಿಸಿದರೆ ಒಟ್ಟು 11 ಬಜೆಟ್ ಮಂಡಿಸಿದ ಸಾರ್ವಕಾಲಿಕ ದಾಖಲೆಯನ್ನು ಅವರು ಸೃಷ್ಟಿಸಲಿದ್ದಾರೆ. ಮಾಜಿ ಪ್ರಧಾನಿ ದಿವಂಗತ ಮೊರಾರ್ಜಿ ದೇಸಾಯಿ 10 ಬಾರಿ ಬಜೆಟ್ ಮಂಡಿಸಿದ್ದರು.
ಬಜೆಟ್ ಅಧಿವೇಶನಕ್ಕೂ ಮುನ್ನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆದಿದೆ. ಈ ಸಭೆಯಲ್ಲಿ 36 ಪಕ್ಷಗಳ 52 ಸದಸ್ಯರು ಭಾಗವಹಿಸಿದ್ದರು. ಬಜೆಟ್ ಅಧಿವೇಶನದಲ್ಲಿ ಒಟ್ಟು 16 ಮಸೂದೆಗಳನ್ನು ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. ಇದು ವಕ್ಫ್ ತಿದ್ದುಪಡಿ ಮಸೂದೆ, ವಲಸೆ ಮತ್ತು ವಿದೇಶಿಯರ ಮಸೂದೆ ಸೇರಿದಂತೆ ಕೆಲವು ಹಣಕಾಸು ಮಸೂದೆಗಳನ್ನು ಸಹ ಒಳಗೊಂಡಿದೆ ಎಂದು ಹೇಳಲಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications