ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್‌ನಲ್ಲಿ (Union Budget 2026) ಶಿಕ್ಷಣ (Education), ಎಐ, ಪ್ರವಾಸೋದ್ಯಮ, ರೈಲ್ವೇ ಇಲಾಖೆ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. ಇದೀಗ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman), ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಇದರಲ್ಲಿ ಮುಖ್ಯವಾಗಿ 5 ವಿಶ್ವವಿದ್ಯಾಲಯ ಟೌನ್‌ಶಿಪ್‌ಗಳ ಸ್ಥಾಪನೆ (University Township) ಮತ್ತು ಪ್ರತೀ ಜಿಲ್ಲೆಯಲ್ಲಿ ಒಂದು ಬಾಲಕಿಯರ ಹಾಸ್ಟೆಲ್ (Girls Hotel) ನಿರ್ಮಾಣದ ಬಗ್ಗೆ ಘೋಷಣೆ ಮಾಡಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳಿಗೆ, ಬಾಲಕಿಯರಿಗೆ (Girls) ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಈ ನಿರ್ಧಾರ ಭಾರತದಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವುದಲ್ಲದೇ, ಕೌಶಲ್ಯ ಅಭಿವೃದ್ಧಿಗೆ ಒತ್ತು ನೀಡಲಿದೆ.

ಕೇಂದ್ರ ಬಜೆಟ್‌ನಲ್ಲಿ ಶಿಕ್ಷಣಕ್ಕೆ ಒತ್ತು!
5 ವಿಶ್ವವಿದ್ಯಾಲಯ ಟೌನ್‌ಶಿಪ್ ಸ್ಥಾಪನೆ: ಉದ್ಯಮ ಕಾರಿಡಾರ್‌ಗಳ ಹತ್ತಿರದಲ್ಲೇ 5 ವಿಶ್ವ ವಿದ್ಯಾಲಯ ಟೌನ್‌ಶಿಪ್‌ಗಳನ್ನು ಸ್ಥಾಪಿಸುವ ಯೋಜನೆಯನ್ನು ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಈ ಟೌನ್‌ಶಿಪ್‌ಗಳು ಉದ್ಯಮಗಳ ಸಹಯೋಗದೊಂದಿಗೆ ಜೊತೆಗೂಡಿ, ವಿದ್ಯಾರ್ಥಿಗಳಿಗೆ ಪ್ರಾಕ್ಟಿಕಲ್ ಕ್ಲಾಸ್ ಮತ್ತು ಉದ್ಯೋಗವಕಾಶಗಳನ್ನು ಒದಗಿಸುವಲ್ಲಿ ಮಹತ್ತರ ಪಾತ್ರವಹಿಸಲಿದೆ,
ಪ್ರತೀ ಜಿಲ್ಲೆಯಲ್ಲಿ ಬಾಲಕಿಯರ ಹಾಸ್ಟೆಲ್: ದೇಶದ ಪ್ರತೀ ಜಿಲ್ಲೆಯಲ್ಲಿ ಒಂದು ಬಾಲಕಿಯರ ಹಾಸ್ಟೆಲ್ ನಿರ್ಮಿಸುವ ಬಗ್ಗೆ ಮಹತ್ವದ ಘೋಷಣೆ ಮಾಡಲಾಗಿದೆ, ಇದರ ಮೂಲಕ ಬಾಲಕಿಯ ಶಿಕ್ಷಣಕ್ಕೆ ಉತ್ತೇಜನ ಸಿಗಲಿದೆ. ಅಲ್ಲದೇ ಸುರಕ್ಷತೆ ಮತ್ತು ಉತ್ತಮ ಸೌಲಭ್ಯ ನೀಡುವ ಗುರಿಯನ್ನೂ ಇದು ಹೊಂದಿದೆ.
ಕಂಟೆಂಟ್ ಕ್ರಿಯೇಟರ್ ಲ್ಯಾಬ್‌ಗಳು: ದೇಶದಾದ್ಯಂತ 15,000 ಶಾಲೆಗಳಲ್ಲಿ "ಕಂಟೆಂಟ್ ಕ್ರಿಯೇಟರ್ ಲ್ಯಾಬ್‌ಗಳನ್ನು" ಸ್ಥಾಪಿಸುವ ಯೋಜನೆಯನ್ನು ಕೇಂದ್ರ ಬಜೆಟ್ 2026 ರಲ್ಲಿ ಘೋಷಿಸಲಾಗಿದೆ. ಇದು ವಿದ್ಯಾರ್ಥಿಗಳಲ್ಲಿ ಡಿಜಿಟಲ್ ಕೌಶಲ್ಯ, ಕ್ರಿಯೇಟಿವಿಟಿ ಬಗ್ಗೆ ಅರಿವು ಮೂಡಿಸಲಿದೆ.


Click it and Unblock the Notifications