For Quick Alerts
ALLOW NOTIFICATIONS  
For Daily Alerts

ಕೇಂದ್ರ ಬಜೆಟ್‌ನಲ್ಲಿ ರಸಗೊಬ್ಬರ ಸಬ್ಸಿಡಿಗೆ 'ಬಂಪರ್' ನಿರೀಕ್ಷೆ

|

ನವದೆಹಲಿ, ಜನವರಿ 17: ರೈತರಿಗೆ ಕಡಿಮೆ ಬೆಲೆಯಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜವನ್ನು ಒದಗಿಸುವ ನಿಟ್ಟಿನಲ್ಲಿ ಕಂಪನಿಗಳು ಮತ್ತು ವ್ಯಾಪಾರಿಗಳ ಅನುಕೂಲಕ್ಕಾಗಿ 2022ರ ಕೇಂದ್ರ ಬಜೆಟ್‌ನಲ್ಲಿ ವಿಶೇಷ ಮೀಸಲಾತಿ ನೀಡುವ ಸಾಧ್ಯತೆಗಳಿವೆ.

ದೇಶದಲ್ಲಿ ರಸಗೊಬ್ಬರ ಕಂಪನಿಗಳು ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಯ ಬೆಲೆಗಿಂತ ಕಡಿಮೆ ದರದಲ್ಲಿ ರೈತರಿಗೆ ಮಾರಾಟ ಮಾಡುತ್ತವೆ. ಈ ಹಿನ್ನೆಲೆ ಕೇಂದ್ರ ಸರ್ಕಾರದಿಂದ ಅಂಥ ಕಂಪನಿಗಳು ಮತ್ತು ವ್ಯಾಪಾರಿಗಳಿಗೆ ಪರಿಹಾರವನ್ನು ನೀಡುತ್ತದೆ. ಈ ಬಾರಿ ಅದಕ್ಕಾಗಿ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಸುಮಾರು 1.3 ಲಕ್ಷ ಕೋಟಿ ರೂಪಾಯಿ ಮೀಸಲಿಡುವ ಸಾಧ್ಯತೆಯಿದೆ.

2022ರಲ್ಲಿ ಹಣ ಗಳಿಸಬೇಕೆ?, ಹೂಡಿಕೆ ಈ ರೀತಿ ಮಾಡಿ2022ರಲ್ಲಿ ಹಣ ಗಳಿಸಬೇಕೆ?, ಹೂಡಿಕೆ ಈ ರೀತಿ ಮಾಡಿ

ದೇಶದಲ್ಲಿ ಕಚ್ಚಾವಸ್ತುಗಳ ಬೆಲೆ ಏರಿಕೆ ಆಗಿರುವ ಹಿನ್ನೆಲೆ ಮಾರ್ಚ್ 31ರಂದು ಅಂತ್ಯವಾಗಲಿರುವ ಆರ್ಥಿಕ ವರ್ಷದಲ್ಲಿ ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು 1.30 ಲಕ್ಷ ಕೋಟಿಯಿಂದ 1.40 ಲಕ್ಷ ಕೋಟಿಗೆ ಹೆಚ್ಚಿಸುವ ಬಗ್ಗೆ ಗುರುತಿಸಿಕೊಳ್ಳಲಾಗುತ್ತಿದೆ. ಕೇಂದ್ರ ಹಣಕಾಸು ಸಚಿವಾಲಯವು ಫೆಬ್ರವರಿ 1ರ ಬಜೆಟ್‌ನಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಇದರ ಮಧ್ಯೆ ರಸಗೊಬ್ಬರಕ್ಕೆ ಹೆಚ್ಚುವರಿ ಸಬ್ಸಿಡಿ ನೀಡುವುದಕ್ಕೆ ಸಂಬಂಧಿಸಿದಂತೆ ಇನ್ನೂ ಚರ್ಚೆ ನಡೆಯುತ್ತಿದೆಯೇ ವಿನಃ ಯಾವುದೇ ರೀತಿ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ತಿಳಿದು ಬಂದಿದೆ.

ಕೇಂದ್ರ ಬಜೆಟ್‌ನಲ್ಲಿ ರಸಗೊಬ್ಬರ ಸಬ್ಸಿಡಿಗೆ 'ಬಂಪರ್' ನಿರೀಕ್ಷೆ

ರೈತರ ಮನಸ್ಸು ಗೆಲ್ಲುವ ಪ್ರಯತ್ನ:

ಕೇಂದ್ರ ಸರ್ಕಾರವು ವಿವಾದಿತ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುವುದರ ಮೂಲಕ ರೈತರ ಕೆಂಗಣ್ಣಿಗೆ ಗುರಿಯಾಗಿದ್ದು, ತದನಂತರದಲ್ಲಿ ಆ ಕಾಯ್ದೆಗಳನ್ನು ವಾಪಸ್ ಪಡೆದುಕೊಂಡಿದೆ. ಇದೀಗ ಐದು ರಾಜ್ಯಗಳಲ್ಲಿ ಎದುರಾಗಿರುವ ವಿಧಾನಸಭೆ ಚುನಾವಣೆ ಹಿನ್ನೆಲೆ ರೈತರ ಮನಸ್ಸನ್ನು ಗೆಲ್ಲುವ ನಿಟ್ಟಿನಲ್ಲಿ ಬಜೆಟ್ ಮಂಡಿಸುವುದಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಏಕೆಂದರೆ ದೇಶದ ಒಟ್ಟು ಜನಸಂಖ್ಯೆಯ ಶೇ.60ರಷ್ಟು ಮಂದಿ ನೇರವಾಗಿ ಅಥವಾ ಪರೋಕ್ಷವಾಗಿ ರೈತರನ್ನು ಅವಲಂಬಿಸಿಕೊಂಡು ಇಂದಿಗೂ ಬದುಕು ನಡೆಸುತ್ತಿದ್ದಾರೆ. ಈ ವರ್ಗವನ್ನು ಸೆಳೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವು ಈ ಬಾರಿ ಬಜೆಟ್ ಮಂಡಿಸುತ್ತದೆ ಎಂಬ ನಿರೀಕ್ಷೆಗಳು ಹೆಚ್ಚಾಗಿವೆ.

ಫೆಬ್ರವರಿ 2021 ರಲ್ಲಿ ಮಂಡನೆ ಆಗಲಿರುವ ಬಜೆಟ್‌ನಲ್ಲಿ ಸುಮಾರು 80,000 ಕೋಟಿ ರೂ.ಗಳನ್ನು ಮೀಸಲಿಟ್ಟ ನಂತರ ಪ್ರತಿಭಟನೆಯ ನಡುವೆ ಸರ್ಕಾರವು ಪ್ರಸಕ್ತ ವರ್ಷದಲ್ಲಿ ರಸಗೊಬ್ಬರ ಸಬ್ಸಿಡಿಯನ್ನು ಗಣನೀಯವಾಗಿ ಹೆಚ್ಚಿಸಿದೆ.

English summary

Union Budget FY23: Government plans 19 billion dollar fertilizer subsidy

Fertilizer subsidy 2022-23 : Government plans $19 billion fertilizer subsidy in Union Budget FY23: Sources.
Story first published: Monday, January 17, 2022, 19:18 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X