ಬ್ಯಾಂಕ್‌ಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಬಿಟ್ಟು ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಡುವೆ ಮಾತಿನ ಸಮರ ಆರಂಭವಾಗಿದೆ. ಸದ್ಯ ಲೋಕಸಭೆಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಈ ವೇಳೆ ಅಧಿವೇಶನದಲ್ಲಿ ಹೇಳಿಕೆ ನೀಡಿದ್ದ ನಿರ್ಮಲಾ, ಆರ್ಥಿಕ ಅಪರಾಧ ಎಸಗಿದ ಯಾರನ್ನೂ ಸರ್ಕಾರ ಬಿಡುವುದಿಲ್ಲ. ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ ₹14,131.6 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ಯಶಸ್ವಿಯಾಗಿ ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ಮರಳಿ ನೀಡಲಾಗಿದೆ ಎಂದು ತಿಳಿಸಿದ್ದರು. ಅದರೆ ನಿರ್ಮಲಾ ಅವರ ಈ ಹೇಳಿಕೆಗೆ ವಿಜಯ್ ಮಲ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾನೂನು ಜಾರಿ ಸಂಸ್ಥೆಗಳು ನಾನು ಮಾಡಿದ ಸಾಲ ಹಾಗೂ ಅದರ ಬಡ್ಡಿಗಿಂತ ಎರಡು ಪಟ್ಟು ಹೆಚ್ಚಿನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಯತ್ನ ಮಾಡುತ್ತಿರುವುದೇಕೆ ಅನ್ನೋದನ್ನು ಕಾನೂನುಬದ್ಧವಾಗಿ ಸಮರ್ಥಿಸಿಕೊಳ್ಳಬೇಕು. ಹಾಗಾಗಿ ಪರಿಹಾರಕ್ಕೆ ನಾನು ಅರ್ಹನಾಗಿದ್ದೇನೆ ಎಂದು ತಿಳಿಸಿದ್ದಾರೆ. ಸಾಲ ವಸೂಲಾತಿ ನ್ಯಾಯಮಂಡಳಿ ತನ್ನ ಸಾಲವನ್ನು 6203 ಕೋಟಿ ರೂ. ಎಂದು ತಿಳಿಸಿದೆ. ಸರಿಹೊಂದಿಸಿದೆ. ಅದೂ ಅಲ್ಲದೆ ಇದರಲ್ಲಿ 1,200 ಕೋಟಿ ರೂ. ಬಡ್ಡಿಯೂ ಸೇರಿದೆ. ಆದರೆ ಅವರ ಹೇಳಿಕೆಯ ಪ್ರಕಾರ ಜಾರಿ ನಿರ್ದೇಶನಾಲಯ ಮತ್ತು ಬ್ಯಾಂಕುಗಳು ಸಾಲಕ್ಕಿಂತ ಎರಡು ಪಟ್ಟು ಹೆಚ್ಚು ವಸೂಲಿ ಮಾಡಿವೆ ಎಂದು ಮಲ್ಯ ತಿಳಿಸಿದ್ದಾರೆ.
ನಿರ್ಮಲಾ ಸೀತಾರಾಮನ್ ಹೇಳಿಕೆ ಏನು?
ಆರ್ಥಿಕ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದ ಸುಮಾರು 22,280 ಕೋಟಿ ರೂ. ಮೌಲ್ಯದ ವ್ಯಕ್ತಿಗಳು ಮತ್ತು ಕಂಪೆನಿಗಳ ಆಸ್ತಿಯನ್ನು ಕೇಂದ್ರ ಜಾರಿ ಸಂಸ್ಥೆ ಯಶಸ್ವಿಯಾಗಿ ಮರುವಶಕ್ಕೆ ಪಡೆದುಕೊಂಡಿದೆ ಎಂದು ಸೀತಾರಾಮನ್ ಅವರು ಲೋಕಸಭೆಗೆ ತಿಳಿಸಿದ್ದರು. ಇನ್ನು ವಶಕ್ಕೆ ಪಡೆಯಲಾದ ಆಸ್ತಿಯಲ್ಲಿ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ 14,131.6 ಕೋಟಿ ರೂ. ಮೌಲ್ಯದ ಸಂಪೂರ್ಣ ಜಪ್ತಿ ಮಾಡಿದ ಆಸ್ತಿಯನ್ನು ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ ವರ್ಗಾಯಿಸಲಾಗಿದೆ ಎಂದು ಸಚಿವರು ಲೋಕಸಭೆಯಲ್ಲಿ ತಿಳಿಸಿದ್ದಾರೆ. ಆರ್ಥಿಕ ಅಪರಾಧಗಳಲ್ಲಿ ನಾವು ಯಾರನ್ನೂ ಬಿಟ್ಟಿಲ್ಲ ಎಂಬುದನ್ನು ಎಲ್ಲರೂ ಮನಗಾಣಬೇಕಿದೆ. ಬ್ಯಾಂಕ್‌ಗಳಿಗೆ ಹೋಗಬೇಕಾದ ಅರ್ಹ ಹಣವನ್ನು ಹಿಂತಿರುಗಿಸುವಂತೆ ಮಾಡುತ್ತೇವೆ ಎಂದು ಅವರು ಸಂಸತ್ತಿನಲ್ಲಿ ತನ್ನ ಒಂದು ಗಂಟೆಯ ಸುದೀರ್ಘ ಹೇಳಿಕೆಯಲ್ಲಿ ತಿಳಿಸಿದ್ದರು.

ವಿಜಯ್ ಮಲ್ಯ ಅವರ ವಾದವೇನು?
ಇನ್ನು ಸಂಸತ್ತಿನಲ್ಲಿ ವಿಜಯ್ ಮಲ್ಯ ಅವರ ಆಸ್ತಿ ವಶಕ್ಕೆ ಸಂಬಂಧಿಸಿದಂತೆ ನಿರ್ಮಲಾ ಸೀತಾರಾಮ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಇದೀಗ ವಿಜಯ್ ಮಲ್ಯ ಅವರು ಎಕ್ಸ್ ಮೂಲಕ ಪ್ರತ್ಯುತ್ತರ ನೀಡಿದ್ದಾರೆ. ಅಲ್ಲದೆ ತನ್ನನ್ನು ಆರ್ಥಿಕ ಅಪರಾಧಿ ಎಂಬುದಾಗಿ ಕರೆಯುತ್ತಿರುವುದನ್ನು ಕೂಡ ಅವರು ಪ್ರಶ್ನಿಸಿದ್ದಾರೆ. ಅಲ್ಲದೆ ತನಗೆ ಪರಿಹಾರ ನೀಡಬೇಕೆಂದು ಕೂಡ ಆಗ್ರಹಿಸಿದ್ದಾರೆ. ಸಾಲ ವಸೂಲಾತಿ ನ್ಯಾಯಮಂಡಳಿಯು ಕೆಎಫ್‌ಎ ಸಾಲವನ್ನು 1200 ಕೋಟಿ ರೂ. ಸೇರಿದಂತೆ 6203 ಕೋಟಿ ರೂ. ಎಂದು ನಿರ್ಣಯಿಸಿದೆ. ಅದೂ ಅಲ್ಲದೆ 6203 ಕೋಟಿಗಳ ಸಾಲದ ವಿರುದ್ಧ ಇಡಿ ಮೂಲಕ ಬ್ಯಾಂಕ್‌ಗಳು 14,131.60 ಕೋಟಿ ರೂ.ಗಳನ್ನು ನನ್ನಿಂದ ವಸೂಲಿ ಮಾಡಿವೆ. ಆದರೂ ನಿರ್ಮಲಾ ಅವರು ನನ್ನನ್ನು ಆರ್ಥಿಕ ಅಪರಾಧಿ ಎಂದು ಸಂಸತ್ತಿನಲ್ಲಿ ಘೋಷಿಸಿದ್ದಾರೆ. ಇಡಿ ಮತ್ತು ಬ್ಯಾಂಕ್‌ಗಳು ಎರಡು ಪಟ್ಟು ಹೆಚ್ಚು ಸಾಲವನ್ನು ಹೇಗೆ ತೆಗೆದುಕೊಂಡಿವೆ ಎಂಬುದನ್ನು ಕಾನೂನುಬದ್ಧವಾಗಿ ಸಮರ್ಥಿಸದಿದ್ದರೆ, ನಾನು ಪರಿಹಾರಕ್ಕೆ ಅರ್ಹನಾಗಿರುತ್ತೇನೆ, ಅದನ್ನು ನಾನು ಮುಂದುವರಿಸುತ್ತೇನೆ ಎಂದು ಮಲ್ಯ ಅವರು ಆಕ್ರೋಶಿತರಾಗಿ ತಿಳಿಸಿದ್ದಾರೆ. ಒಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ಉದ್ಯಮಿ ವಿಜಯ್ ಮಲ್ಯ ಅವರ ನಡುವಿನ ಉತ್ತರ ಪ್ರತ್ಯುತ್ತರ ಸದ್ಯ ಗಮನ ಸೆಳೆದಿದೆ.
ಏನಿದು ಪ್ರಕರಣ?
2016 ರಲ್ಲಿ ಭಾರತದಿಂದ ಪಲಾಯನ ಮಾಡಿ, ಇಂಗ್ಲೆಂಡ್‌ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಅವರನ್ನು 2019 ರಲ್ಲಿ ಪ್ಯುಗಿಟಿವ್ ಎಕನಾಮಿಕ್ ಅಪರಾಧಿಗಳ ಕಾಯಿದೆಯಡಿ ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಲಾಯಿತು. ಮಲ್ಯ ಹಸ್ತಾಂತರ ಪ್ರಕರಣವು UK ನ್ಯಾಯಾಲಯಗಳಲ್ಲಿ ಸದ್ಯ ಈಗಲೂ ನಡೆಯುತ್ತಿದೆ, ಭಾರತದಲ್ಲಿನ ಅವರ ಕಾನೂನು ಮತ್ತು ಆರ್ಥಿಕ ಸ್ಥಿತಿಯನ್ನು ಸುತ್ತುವರಿದ ಸಾಕಷ್ಟು ಕಾನೂನಾತ್ಮಕ ಸವಾಲುಗಳನ್ನು ಅವರು ಎದುರಿಸುತ್ತಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications