ದೇಶ ಬಿಟ್ಟು ಪರಾರಿ ಆಗಿರುವ ಉದ್ಯಮಿ ವಿಜಯ್ ಮಲ್ಯಗೆ ಸೇರಿದ ಫ್ರಾನ್ಸ್ ನಲ್ಲಿನ 16 ಲಕ್ಷ ಯುರೋ ಮೌಲ್ಯದ (ಭಾರತದ ರುಪಾಯಿ ಲೆಕ್ಕದಲ್ಲಿ 14.35 ಕೋಟಿ) ಆಸ್ತಿಯನ್ನು ಜಾರಿ ನಿರ್ದೇಶನಾಲಯದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ತನಿಖಾ ಸಂಸ್ಥೆಯು ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ.
"ಜಾರಿ ನಿರ್ದೇಶನಾಲಯದ (ಇ.ಡಿ.) ಮನವಿ ಮೇರೆಗೆ ಫ್ರಾನ್ಸ್ ನ 32 ಅವೆನ್ಯೂದಲ್ಲಿ ಇರುವ ಆಸ್ತಿಯನ್ನು ಫ್ರೆಂಚ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಆಸ್ತಿಯ ಮೌಲ್ಯ 1.6 ಮಿಲಿಯನ್ ಯುರೋ (14 ಕೋಟಿ ರುಪಾಯಿ). ಕಿಂಗ್ ಫಿಷರ್ ಏರ್ ಲೈನ್ಸ್ ಲಿಮಿಟೆಡ್ ಬ್ಯಾಂಕ್ ಖಾತೆಯಿಂದ ವಿದೇಶಕ್ಕೆ ದೊಡ್ಡ ಮೊತ್ತ ವರ್ಗಾವಣೆ ಮಾಡಿರುವುದು ತನಿಖೆಯಿಂದ ಬಯಲಾಗಿದೆ," ಎಂದು ಇ.ಡಿ. ಹೇಳಿಕೆಯಲ್ಲಿ ತಿಳಿಸಲಾಗಿದೆ.
ಈ ತನಕ ಇ.ಡಿ.ಯಿಂದ 11,231 ಕೋಟಿ ರುಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ. ಸದ್ಯಕ್ಕೆ ಕಾರ್ಯ ನಿರ್ವಹಣೆ ಮಾಡದ ಕಿಂಗ್ ಫಿಷರ್ ನ ಸ್ಥಾಪಕರಾದ ವಿಜಯ್ ಮಲ್ಯ 9000 ಕೋಟಿ ರುಪಾಯಿ ಸಾಲ ಪಾವತಿಸಬೇಕಾಗಿದೆ. ಮಾರ್ಚ್ 2016ರಲ್ಲಿ ಭಾರತ ಬಿಟ್ಟ ವಿಜಯ್ ಮಲ್ಯ ಯು.ಕೆ.ಗೆ ಪರಾರಿ ಆಗಿದ್ದಾರೆ.

ತಮ್ಮ ವಿರುದ್ಧದ ಆರೋಪವನ್ನು ವಿಜಯ್ ಮಲ್ಯ ನಿರಾಕರಿಸುತ್ತಾ ಬಂದಿದ್ದಾರೆ. ಭಾರತದ ಬ್ಯಾಂಕ್ ಗಳು ನೀಡಿದ ಅಸಲು ಮೊತ್ತ ಶೇಕಡಾ ನೂರರಷ್ಟನ್ನು ಪಾವತಿಸಲು ಸಿದ್ಧ ಎಂದಿದ್ದಾರೆ. ಆದರೆ ಭಾರತದಲ್ಲಿ ಮಲ್ಯರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಿಸಲಾಗಿದೆ. ಯು.ಕೆ.ಯಿಂದ ಭಾರತಕ್ಕೆ ವಿಜಯ್ ಮಲ್ಯ ಹಸ್ತಾಂತರಕ್ಕೆ ಪ್ರಯತ್ನ ಮುಂದುವರಿದಿದೆ.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?



Click it and Unblock the Notifications