ರಾಜ್ಯದಲ್ಲಿ ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಂಗಳೂರಿನಲ್ಲಿ ಇಂದು ಮಳೆ ಮುನ್ಸೂಚನೆ ಇದ್ದು, ನಗರದ ಕೆಲ ಭಾಗಗಳಲ್ಲಿ ತುಂತುರು ಮಳೆ ಆಗಿದೆ. ಅಲ್ಲದೆ ಸಂಕ್ರಾಂತಿಯಂದೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆ ಬರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ದಕ್ಷಿಣ ಭಾಗದಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಂದರೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 6 ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಹಾಗೆ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತವರಣ ಇರಲಿದೆ. ಇದರ ಜೊತೆಗೆ ಸಹಜವಾಗಿ ಚಳಿ ಪ್ರಮಾಣ ಕೂಡ ಹಾಗೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತವರಣ
ಬೆಂಗಳೂರಿನಲ್ಲಿ ಜನರು ಮಕರ ಸಂಕ್ರಾಂತಿಯ ಸಂಭ್ರಮದಲ್ಲಿದ್ದಾರೆ. ಹಾಗೆ ಬೆಂಗಳೂರಿನಲ್ಲಿ ಇಂದು (ಜನವರಿ 14) ಮೋಡ ಕವಿದ ವಾತವರಣವಿದೆ. ಹಾಗೆ ಬೆಂಗಳೂರಿನ ಕೆಲ ನಗರಗಳಲ್ಲಿ ಇಂದು ತುಂತುರು ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವ ಹೆಚ್ಚಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆ ವಾತವಾರಣ ಉಂಟುಂಗಾಗಿದೆ. ಇನ್ನು ಬೆಂಗಳೂರಿನಲ್ಲಿ ಜನವರಿ ಆರಂಭಕ್ಕೆ ಹೋಲಿಕೆ ಮಾಡಿದರೆ ಈ ಸಮಯದಲ್ಲಿ ಕನಿಷ್ಠ ತಾಪಮಾನ ಮತ್ತೆ ಏರಿಕೆಯಾಗಿದೆ. ಆದ್ರೂ ಕೂಡ ಬೆಂಗಳೂರಿನಲ್ಲಿ ಮುಂಜಾನೆಯ ಚಳಿ ಪ್ರಮಾಣದಲ್ಲಿ ಮಾತ್ರ ಯಾವುದೇ ವ್ಯತ್ಯಾಸವಿಲ್ಲ. ಚಳಿ ಪ್ರಮಾಣ ಮಾತ್ರ ಮೊದಲಿನಂತೆಯೇ ಇದೆ. ಶೀತಗಾಳಿ ಹೆಚ್ಚು ಬೀಸುವುದರಿಂದ ಬೆಳಗ್ಗೆ ಜನರು ಹೊರಹೋಗುವುದಕ್ಕೂ ಕಷ್ಟವಾಗ್ತಿದೆ.
ಸಾಮಾನ್ಯವಾಗಿ ಮಕರ ಸಂಕ್ರಾಂತಿಯ ವೇಳೆ ಬೆಂಗಳೂರಿನಲ್ಲಿ ತಾಪಮಾಣ ಹೆಚ್ಚಿರುತ್ತದೆ. ಹಾಗೆ ಬೆಚ್ಚಗಿನ ವಾತವರಣ ಇರುತ್ತದೆ. ಬೆಂಗಳೂರರಿನ ಕೆಲ ನಗರಗಳಲ್ಲಿ ತಾಪಮಾನ ಏರಿಕೆಯಾಗಿದೆ. ಹಾಗೆ ಒಂದೇ ದಿನ ಕನಿಷ್ಠ ತಾಪಮಾನ 17.6 ಡಿಗ್ರಿ ಸೆಲ್ಸಿಯಸ್ ಇದೆ. ಇದರ ಜೊತೆಗೆ ಬೆಂಗಳೂರಿನ ಕೆಲ ನಗರಗಳಲ್ಲಿ ತುಂತುರು ಮಳೆಯಾಗಿದೆ. ಜೊತೆಗೆ ಕರ್ನಾಟಕದ ದಕ್ಷಿನ ಭಾಗಗಳಲ್ಲೂ ಕೂಡ ಲಘು ಮಳೆಯಾಗಿದೆ. ಇಂದು ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತವರಣ ಇರಲಿದೆ.
ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಮದ ಚಳಿ ಪ್ರಮಾಣ ಹೆಚ್ಚಿತ್ತು. ಹಾಗೆ ತಪಮಾನ ಕೂಡ ಬಾರಿ ಕುಸಿತವನ್ನ ಕಂಡಿತ್ತು. ಆದ್ರೆ ಇಮದು ತಾಪಮಾನ ಜನವರಿ ಆರಂಭಕ್ಕೆ ಹೋಲಿಸಿದರೆ ಸ್ವಲ್ಪ ಎರಿಕೆಯಾಗಿದೆ. ಕನಿಷ್ಠ ತಾಪಮಾನ 15.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇನ್ನು ಈ ವರ್ಷ ಕನಿfಠ ತಾಪಮಾನ ಏರಿಕೆಯಾಗಿದೆ. ಜನವರಿಯಲ್ಲಿ ಸರಾಸರಿ ಇರುತ್ತಿದ್ದ ತಾಪಮಾನ ಈ ಬಾರಿ ಏರಿಕೆಯಾಗಿದೆ. ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ.
ರಾಜ್ಯದ ಹಲವೆಡೆ ಮಳೆ ಮುನ್ಸುಚನೆ
ಕರ್ನಾಟಕ ರಾಜ್ಯದ ಹಲವೆಡೆ ಇಂದು ಮಳೆ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ಮಂಡ್ಯ, ರಾಮನಗರ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇತ್ತ ಕರ್ನಾಟಕದ ಬಲುಸೀಮೆ ಪ್ರದೇಶಗಲಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆಯಲ್ಲಿ ಚಳಿ ಕಡಿಮೆಯಾಗಿ ಒಣಹವೆ ಮುಂದುವರೆಯಲಿದೆ ಎಮದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇಂದು ಮಕರ ಸಂಕ್ರಾಂತಿಯಂದು ಮಲೆನಾಡು ಭಾಗದಲ್ಲಿ ತುಂತುರು ಮಳೆಯಾಗಲಿದೆ. ನೈರುತ್ಯ ಬಂಗಾಳಕೊಲ್ಲಿಯಲಲಲ್ಲಿ ಚಂಡಮಾರುತ ಕಂಡುಬಂದಿದ್ದು, ಈ ಹಿನ್ನೆಲೆ ಕರ್ನಾಟಕದ ದಕ್ಷಿಣ ಭಾಗದಲ್ಲಿ ಮೋಡ ಕವಿದ ವಾತವರಣ ಇರಲಿದೆ. ಹಾಗೆ ಕನಿಷ್ಠ ತಾಪಮಾನ ಸಹಜವಾಗಿ ಹೆಚ್ಚಿರಲಿದೆ. ಎಮದು ಬೆಂಗಳೂರು ಪ್ರದೇಶಿಕ ಹವಾಮಾನ ಇಲಾಖೆ ತಿಳಿಸಿದೆ.
ವಿಜಯಪುರದಲ್ಲಿ 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ಇದೆ. ಸಧ್ಯಕ್ಕೆ ಚಳಿ ಪ್ರಮಾಣ ಇಳಿಕೆಯಾಗಿದೆ. ಹಾಗೆ ವಿಜಯಪುರದಲ್ಲಿ ಗರಿಷ್ಠ ತಾಪಮಾನ 30.5 ಡಿಗ್ರಿ ಸೆಲ್ಸಿಯಸ್ ಇದೆ. ಬೀದರ್‌ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಇದ್ದರೆ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ಇದೆ. ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 31.1 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ತಾಪಮಾನ 17.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಧಾರವಾಡದಲ್ಲಿ ಗರಿಷ್ಠ ತಾಪಮಾನ 30.2 ಡಿಗ್ರಿ ಸೆಲ್ಸಿಯಸ್ ಇದೆ, ಜೊತೆಗೆ ಕನಿಷ್ಠ ತಾಪಮಾನ 16.2 ಡಿಗ್ರಿ ಸೆಲ್ಸಿಯಸ್ ಇದೆ. ಗದಗದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಇದ್ದರೆ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ಇದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 31.6 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18.6 ಡಿಗ್ರಿ ಸೆಲ್ಸಿಯಸ್ ಇದೆ. ಗರಿಷ್ಠ ತಾಪಮಾನ ಹಾವೇರಿಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಇದೆ. ಇತ್ತ ಕನಿಷ್ಠ ತಾಪಮಾನ 18.2 ಡಿಗ್ರಿ ಸೆಲ್ಸಿಯಸ್ ಇದೆ. ಕೊಪ್ಪಳದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.


Click it and Unblock the Notifications