ಬೆಂಗಳೂರು ಸೇರಿ ಕರ್ನಾಟಕದ (Karnataka) ಹಲವು ಭಾಗಗಳಲ್ಲಿ ಈಗಾಗಲೇ ತಾಪಮಾನ ಹೆಚ್ಚಾಗುತ್ತಿದೆ. ದಿನ ಹೋದಂತೆ ಬೇಸಿಗೆಯ ಬಿಸಿ ವಿಪರೀತವಾಗುತ್ತಿದೆ. ಕಳೆದ ತಿಂಗಳಷ್ಟೇ ಚಳಿಯಿಂದ ನಡುಗುತ್ತಿದ್ದ ಜನ ಇದೀಗ ಸೆಖೆ ಸೆಖೆ ಅನ್ನುವಂತಾಗಿದೆ. ಅದೇ ರೀತಿ ಇಂದೂ ಕೂಡಾ ಕರ್ನಾಟಕದಲ್ಲಿ ಒಣ ಹವೆ ಮತ್ತು ಬಿಸಿಲು ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಹಿಂದಿನ ದಿನಗಳಿಗೆ ಹೋಲಿಸಿದ್ರೆ ಇತ್ತೀಚೆಗೆ ತಾಪಮಾನ ಭಾರೀ ಹೆಚ್ಚಾಗುತ್ತಿದೆ. ಈ ವರ್ಷದ ಫೆಬ್ರವರಿಯಲ್ಲೇ ಬೇಸಿಗೆ ಎಂಬ ಭಾವನೆ ಜನರಲ್ಲಿ ಮೂಡುತ್ತಿದ್ದು, ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್ ಹೆಚ್ಚು ತಾಪಮಾನ ಇರಲಿದೆ ಎಂದು ಹೇಳಲಾಗಿದೆ.

ಹಾಗಿದ್ರೆ ಇಂದು ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಕರ್ನಾಟಕದ ಹವಾಮಾನ ವರದಿ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ?
ಬೆಂಗಳೂರಿನಲ್ಲಿ ಇಂದು ಭಾಗಶಃ ಮೋಡ ಕವಿದ ವಾತಾವರಣ ಅಥವಾ ಬಿಸಿಲು ಇರಲಿದೆ. ಕನಿಷ್ಠ ತಾಪಮಾನ 19-20 ಡಿಗ್ರಿ ಮತ್ತು ಗರಿಷ್ಠ ತಾಪಮಾನ 31-33 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನು ಮಧ್ಯಾಹ್ನದ ವೇಳೆ ಬಿಸಿಲು ತೀವ್ರವಾಗಿರಲಿದೆ. ಆದ್ರೆ ಸಂಜೆಯ ವೇಳೆ ಸ್ವಲ್ಪ ತಂಪು ಗಾಳಿ ಬೀಸುವ ನಿರೀಕ್ಷೆಯಿದೆ.
ಹಾಗೆಯೇ ದಕ್ಷಿಣ ಒಳನಾಡು ಜಿಲ್ಲೆಗಳಾದ ಚಿತ್ರದುರ್ಗ, ಮಂಡ್ಯ, ತುಮಕೂರು, ಹಾಸನ, ಕೋಲಾರ, ಮೈಸೂರು ಮುಂತಾದ ಜಿಲ್ಲೆಗಳಲ್ಲೂ ಬಿಸಿಲು ಹೆಚ್ಚಾಗಿದ್ದು, ಮೋಡ ಕವಿತ ವಾತಾವರಣ ಇರಲಿದೆ ಎಂದು ಹೇಳಲಾಗಿದೆ.
ಉತ್ತರ ಒಳನಾಡು
ಇನ್ನು ಉತ್ತರ ಒಳನಾಡು ಜಿಲ್ಲೆಗಳಾದ ಕಲಬುರಗಿ, ಬಳ್ಳಾರಿ, ರಾಯಚೂರು, ಬಾಗಲಕೋಟೆ, ವಿಜಯಪುರ, ಬೀದರ್ ಮತ್ತು ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 34-36 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೇ ಕನಿಷ್ಠ ತಾಪಮಾನ 18-22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕೆಲವು ಜಿಲ್ಲೆಗಳಲ್ಲಿ ಬಾಗಲಕೋಟೆ, ಗದಗ, ಬೆಳಗಾವಿ, ರಾಯಚೂರು, ಕೊಪ್ಪಳ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳ ಹವಾಮಾನ:
ಕರಾವಳಿ ಜಿಲ್ಲೆಗಳಾದ ಮಂಗಳೂರು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಹೇಳಲಾಗಿದೆ. ಆದ್ರೆ ತಾಪಮಾನವಂತೂ ಭಾರೀ ಏರಿಕೆಯಲ್ಲಿರಲಿದೆ. ಗರಿಷ್ಠ ತಾಪಮಾನ 30-33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21-24 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ.
ರಾಜ್ಯದಾದ್ಯಂತ ಬಿಸಿಲಿನ ಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ತಾಪಮಾನವೂ ಏರಿಕೆ ಕಾಣುತ್ತಿದೆ. ಮುಂದಿನ 4-5 ದಿನಗಳಲ್ಲಿ ಕೆಲವು ಕಡೆಗಳಲ್ಲಿ ಮಳೆಯ ಬರುವ ಸಾಧ್ಯತೆಯೂ ಇದೆ. ಆದ್ರೆ ಕೆಲವು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗಲಿದೆ ಎಂದು ಹೇಳಲಾಗಿದೆ. ಆದ್ದರಿಂದ ಜನರೂ ಕೂಡಾ ಹೊರ ಹೋಗುವಾಗ ಎಚ್ಚರದಿಂದ ಇರಬೇಕು.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications