ರಾಜ್ಯದಲ್ಲಿ ಕಳೆದೊಂದು ವಾರದಿಂದ ತಾಪಮಾನ ಭಾರೀ ಏರಿಕೆಯಲ್ಲಿದೆ. ಅತ್ತ ಚಳಿ ಮುಗಿಯುತ್ತಿದ್ದಂತೆ, ಇತ್ತ ಬಿಸಿಲಿನ ರೌದ್ರವತಾರಕ್ಕೆ ಜನ ಬೆಚ್ಚಿ ಬಿದ್ದಿದ್ದಾರೆ. ಹವಾಮಾನ ಇಲಾಖೆಯಿಂದ ಮಳೆ ವರದಿ ಇದ್ದರೂ, ಎಲ್ಲೂ ಮಳೆಯಾಗೋದು ಕಾಣುತ್ತಿಲ್ಲ. ಕೇವಲ ಮೋಡ ಕವಿದ ವಾತವಾರಣ ಇದ್ದು, ಮಧ್ಯಾಹ್ನ ಆಗುತ್ತಿದ್ದಂತೆ ಬಿಸಿಲಿನ ಉರಿ ಹೆಚ್ಚಾಗುತ್ತದೆ. ಇದೀಗ ಇಂದೂ ಕೂಡಾ ರಾಜ್ಯದ ಹಲವು ಕಡೆಗಳಲ್ಲಿ ತಾಪಮಾನ ಏರಿಕೆಯಾಗಲಿದ್ದು, ಎಲ್ಲೆಲ್ಲಿ ಹವಾಮಾನ ಹೇಗಿದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಇಂದು ತಾಪಮಾನದಲ್ಲಿ ಏರಿಕೆಯಿರಲಿದೆ. ಸದ್ಯಕ್ಕೆ ಯಾವುದೇ ಮಳೆ ಸೂಚನೆ ನೀಡಲಾಗಿಲ್ಲ.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ?
ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎನ್ನಲಾಗಿದೆ. ಬೆಳಿಗ್ಗೆ, ಸಂಜೆ ವೇಳೆಗೆ ತಂಪಾದ ಗಾಳಿ ಬೀಸಲಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಯಾವುದೇ ಮಳೆ ಸೂಚನೆ ನೀಡಲಾಗಿಲ್ಲ. ಆದ್ರೆ ಮಧ್ಯಾಹ್ನದ ವೇಳೆ ಬಿಸಿಲು ಹೆಚ್ಚಾಗುವ ನಿರೀಕ್ಷೆಯಿದೆ.
ಕರಾವಳಿ ಜಿಲ್ಲೆಗಳಲ್ಲಿ ಹವಾಮಾನ:
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಬಿಸಿಲು ಹೆಚ್ಚಿರಲಿದೆ ಎಂದು ಹೇಳಲಾಗಿದೆ. ಇನ್ನು ಗರಿಷ್ಠ ತಾಪಮಾನ 31-33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 22-24 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ. ಆದ್ರೆ ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇನ್ನು ಉತ್ತರ ಒಳನಾಡು ಜಿಲ್ಲೆಗಳಾದ ರಾಯಚೂರು, ವಿಜಯಪುರ, ಗದಗ, ಕಲಬುರಗಿ, ಬಳ್ಳಾರಿ, ಬಾಗಲಕೋಟೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಒಣ ಹವೆ ಮುಂದುವರೆಯಲಿದೆ. ಈ ಹಿನ್ನೆಲೆ ಗರಿಷ್ಠ ತಾಪಮಾನ 32-34 ಡಿಗ್ರಿ ಸೆಲ್ಸಿಯಸ್ ಇರಬಹುದು ಎನ್ನಲಾಗಿದೆ. ಕೆಲವು ಜಿಲ್ಲೆಗಳಲ್ಲಿ ನಿರೀಕ್ಷೆಗಿಂತಲೂ ಹೆಚ್ಚಿನ ತಾಪಮಾನ ಕಂಡುಬಂದಿರುವುದರಿಂದ, ಬಿಸಿಲು ಕೂಡಾ ಹೆಚ್ಚಾಗಬಹುದು ಎಂದು ಹೇಳಲಾಗಿದೆ. ಅಲ್ಲದೇ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಒಣ ಹವಾಮಾನ ಇರಲಿದೆ.
ಈ ತಿಂಗಳು ಅಂತ್ಯದವರೆಗೂ ಇದೇ ರೀತಿಯ ಹವಾಮಾನ ಪರಿಸ್ಥಿತಿ ಇರಲಿದೆ ಎಂದು ಹೇಳಲಾಗಿದೆ. ಬೇಸಿಗೆಗೂ ಮುನ್ನವೇ ಬಿಸಿಲಿನ ಪ್ರಮಾಣ ಏರಿಕೆಯಲ್ಲಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ರೆ ಎಲ್ಲೂ ಮಳೆ ಬರುವ ಮುನ್ಸೂಚನೆ ನೀಡಲಾಗಿಲ್ಲ. ಬಿಸಿಲು ಹೆಚ್ಚಾದಂತೆ ಆದಷ್ಟು ನೀರು ಕುಡಿಯಿರಿ, ಮಧ್ಯಾಹ್ನದ ವೇಳೆ ಹೊರಹೋಗುವುದನ್ನು ತಪ್ಪಿಸಿ ಎಂದು ಸಲಹೆ ನೀಡಿದೆ. ಫೆಬ್ರವರಿ ತಿಂಗಳ ಅಂತ್ಯದವರೆಗೆ ಇದೇ ರೀತಿಯ ಹವಾಮಾನ ಮುಂದುವರೆಯುವ ಸಾಧ್ಯತೆ ಇದೆ.


Click it and Unblock the Notifications