ಕರ್ನಾಟಕದಲ್ಲಿ (Karnataka) ಇತ್ತೀಚೆಗೆ ಚಳಿಯೂ ಇಲ್ಲ, ಮಳೆಯೂ ಇಲ್ಲ, ಆದರೆ ಬೇಸಿಗೆ ಬಿಸಿ ವಿಪರೀತವಾಗಿಬಿಟ್ಟಿದೆ. ದಿನವಿಡೀ ಚಳಿಯಲ್ಲಿ ನಡುಗುತ್ತಿದ್ದ ಬೆಂಗಳೂರು, ಕರಾವಳಿ ಜಿಲ್ಲೆಗಳ ಜನರು ಇದೀಗ ಬಿಸಿಲ ಬೇಗೆ ತಡೆಯಲಾಗದೆ ಸೆಖೆ ಸೆಖೆ ಎಂದು ಹೇಳುತ್ತಿದ್ದಾರೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲಿ ತಾಪಮಾನ ದಿನ ಹೋದಂತೆ ಏರಿಕೆಯಾಗುತ್ತಲೇ ಇದೆ. ಅಲ್ಲದೇ ಹವಾಮಾನ ಇಲಾಖೆ ಕೂಡಾ ರಾಜ್ಯದಲ್ಲಿ ತಾಪಮಾನ ಏರಿಕೆ ಕಾಣಬಹುದು ಎಂದು ಎಚ್ಚರಿಕೆ ಕೊಟ್ಟಿದೆ. ಆದ್ದರಿಂದ ಕೆಲವು ದಿನಗಳವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಈ ಜಿಲ್ಲೆಗಳಲ್ಲಿ ಒಣ ಹವೆ?
ಬೆಂಗಳೂರು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೇ ಉತ್ತರ ಒಳನಾಡು ಜಿಲ್ಲೆಗಳಾದ ಬೀದರ್, ಬಾಗಲಕೋಟೆ, ಗದಗ, ಕಲಬುರಗಿ, ಬಳ್ಳಾರಿ, ಯಾದಗಿರಿ, ಬೆಳಗಾವಿ, ವಿಜಯಪುರ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಇಂದಿನಿಂದ ರಾಜ್ಯದಲ್ಲಿ ಬಿಸಿಲಿನ ತಾಪ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ ಅದರಲ್ಲೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ, ಚಿತ್ರದುರ್ಗ, ಕೋಲಾರ, ರಾಮನಗರ, ಶಿವಮೊಗ್ಗ, ಕೊಡಗು, ಮೈಸೂರು, ವಿಜಯನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಮಂಡ್ಯ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ?
ಪ್ರಸ್ತುತ ಬೆಂಗಳೂರಿನಲ್ಲಿ ತಾಪಮಾನ ಸ್ವಲ್ಪ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸುಮಾರು 32-34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20-22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ. ಇನ್ನು ದಕ್ಷಿಣ ಕನ್ನಡ, ಹುಬ್ಬಳ್ಳಿ, ಮೈಸೂರಿನಂತಹ ಜಿಲ್ಲೆಗಳಲ್ಲಿ ಒಣ ಮತ್ತು ಬಿಸಿಲಿನ ಹವಾಮಾನ ಹೆಚ್ಚಾಗಲಿದೆ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಪ್ರಸ್ತುತ ಸ್ಥಿತಿ ಒಣ ಹವೆ ಮತ್ತು ಬಿಸಿಲಿನ ವಾತಾವರಣವೇ ಇರಲಿದ್ದು, ತಾಪಮಾನದಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮಾರ್ಚ್ ಅಂತ್ಯದ ವೇಳೆ ಬಿಸಿಲಿನ ಅಬ್ಬರ ಶುರು!
ಹೌದು, ಮೊದಲೇ ಹವಾಮಾನ ಇಲಾಖೆ ಸೂಚನೆ ನೀಡಿದಂತೆ ಮಾರ್ಚ್ 2 ನೇ ವಾರದ ನಂತರ ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ. ಆದ್ದರಿಂದ ಜನರೂ ಕೂಡಾ ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಜನರಿಗೆ ಸಲಹೆ:
ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದಂತೆ ಆರೋಗ್ಯ ಇಲಾಖೆಯೂ ಅಲರ್ಟ್ ಆಗಿದೆ. ಸಾಧ್ಯವಾದಷ್ಟು ಬೆಳಗ್ಗಿನ ಅವಧಿಯಲ್ಲಿ ಹೊರಾಂಗಣ ಕೆಲಸಗಳನ್ನು ಮುಗಿಸಿಕೊಳ್ಳಿ, ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅನಗತ್ಯವಾಗಿ ಹೊರ ಹೋಗುವುದನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ.


Click it and Unblock the Notifications