ಮುಂದಿನ ಕೆಲವು ದಿನಗಳ ಕಾಲ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮಾಹಿತಿ ನೀಡಿದೆ. ಕೇರಳದ ಇಡುಕ್ಕಿ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ ಮತ್ತು ಎರ್ನಾಕುಲಂಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಅರಬ್ಬಿ ಸಮುದ್ರದ ಮೇಲೆ ಕಡಿಮೆ ಒತ್ತಡದ ಹವಾಮಾನ ಅಸ್ತಿತ್ವದಲ್ಲಿದೆ. ಇದರ ಪ್ರಭಾವದಿಂದ ಮುಂದಿನ ನಾಲ್ಕು ದಿನಗಳ ಕಾಲ ಕೇರಳದಲ್ಲಿ ಭಾರೀ ಮಳೆ ಸುರಿಯಲಿದೆ. ಕೇರಳ ಹಾಗೂ ಲಕ್ಷದ್ವೀಪದಲ್ಲಿ ಕರಾವಳಿಗೆ ತೆರಳದಂತೆ ಜನರಿಗೆ ಐಎಂಡಿ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಸಮುದ್ರದ ಪ್ರಕ್ಷುಬ್ಧತೆಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ತಿರುವನಂತಪುರಂ, ಕೊಲ್ಲಂ ಮತ್ತು ಪತ್ತನಂತಿಟ್ಟ ನಗರಗಳಿಗೆ ಶನಿವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಹಂಗಾಮಿಗೆ ಹೋಲಿಸಿದರೆ ಜನವರಿಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮುಂದಿನ 24 ಗಂಟೆಗಳ ಅವಧಿಯಲ್ಲಿ 115.6 ಎಂಎಂನಿಂದ 204.4 ಎಂಎಂ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಕೇರಳದ ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಅನ್ನು ಘೋಷಿಸಲಾಗಿದೆ. ಯೆಲ್ಲೋ ಅಲರ್ಟ್ ನೀಡಲಾದ ಪ್ರದೇಶಗಳಲ್ಲಿ 24 ಗಂಟೆಗಳ ಅವಧಿಯಲ್ಲಿ 64.5 ಎಂಎಂನಿಂದ 115.5 ಎಂಎಂವರೆಗೆ ಮಳೆಯನ್ನು ನಿರೀಕ್ಷಿಸಬಹುದು.

ಶುಕ್ರವಾರ ಬೆಳಿಗ್ಗೆ ಇಡುಕ್ಕಿ ಮತ್ತು ಪಾಲಕ್ಕಾಡ್‌ಗೆ ಅಲರ್ಟ್ ಅನ್ನು ಘೋಷಣೆ ಮಾಡಲಾಗಿತ್ತು. ಮಧ್ಯಾಹ್ನದ ವೇಳೆಗೆ ಪಾಲಕ್ಕಾಡ್‌ನಲ್ಲಿ ಯೆಲ್ಲೋ ಅಲರ್ಟ್ ಅನ್ನು ಹಿಂಪಡೆಯಲಾಗಿದೆ. ಆದರೆ ಇಡುಕ್ಕಿಯಲ್ಲಿ ಆರೆಂಜ್ ಅಲರ್ಟ್ ಅನ್ನು ಮುಂದುವರಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹೊಸ ವರ್ಷದ ಮೊದಲ ಐದು ದಿನಗಳಲ್ಲಿ ಕೇರಳದಲ್ಲಿ ಶೇ.1705ರಷ್ಟು ಅಧಿಕ ಮಳೆಯಾಗಿದೆ. ಈ ಸಮಯದಲ್ಲಿ ಕೇವಲ 1.9 ಮಿಮೀ ಮಳೆಯ ನಿರೀಕ್ಷೆ ಇತ್ತು. ಆದರೆ, ಕೇರಳದಲ್ಲಿ 34.3 ಮಿ.ಮೀ ಮಳೆಯಾಗಿದೆ. ಕೇರಳದಲ್ಲಿ ನೈಋತ್ಯ ಮಾನ್ಸೂನ್ ಅವಧಿಯಲ್ಲಿ ಮಳೆ ಕೊರತೆಯಿದ್ದರೂ, ಇತ್ತೀಚೆಗೆ ಕೊನೆಗೊಂಡ ಈಶಾನ್ಯ ಮಾನ್ಸೂನ್ ಅವಧಿಯಲ್ಲಿ ಅಧಿಕ ಮಳೆಯಾಗಿದೆ.

ತಮಿಳುನಾಡಿನಲ್ಲಿ ಆರೇಂಜ್ ಅಲರ್ಟ್
ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ (ಆರ್‌ಎಂಸಿ) ವಿಲ್ಲುಪುರಂ ಮತ್ತು ಕಡಲೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಜನವರಿ 7, ಭಾನುವಾರದಂದು ತಿರುವಳ್ಳೂರು, ಚೆನ್ನೈ, ಚೆಂಗಲ್‌ಪಟ್ಟು, ಕಾಂಚೀಪುರಂ, ತಿರುವಣ್ಣಾಮಲೈ, ರಾಣಿಪೇಟ್, ಕಲ್ಲಕುರಿಚಿ ಮತ್ತು ಮೈಲಾಡುತುರೈ ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ.
ಒಂದು ದಿನದಲ್ಲಿ 115.6 ರಿಂದ 204.4 ಮಿಮೀ ವರೆಗಿನ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಇಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದು ರೈಲು, ರಸ್ತೆ ಮತ್ತು ವಾಯು ಸೇರಿದಂತೆ ಸಾರಿಗೆ ಸೌಲಭ್ಯಗಳ ಮೇಲೆ ಪರಿಣಾಮ ಬೀರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹವಾಮಾನ ಇಲಾಖೆ ಹಂಚಿಕೊಂಡ ಮಾಹಿತಿ ಪ್ರಕಾರ, ಜನವರಿ 5 ರಿಂದ ಜನವರಿ 10 ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ನ ಅನೇಕ ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಜನವರಿ 6 ರಂದು ಕನ್ಯಾಕುಮಾರಿ, ತಿರುನಲ್ವೇಲಿ, ತೆಂಕಶಿ, ವಿರುಧುನಗರ, ಪುದುಕೊಟ್ಟೈ, ತಂಜಾವೂರು, ತಿರುವರೂರು, ನಾಗಪಟ್ಟಣಂ ಮತ್ತು ಮೈಲಾಡುತುರೈ ಜಿಲ್ಲೆಗಳು ಮತ್ತು ಕಾರೈಕಲ್ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿಕೆ ನೀಡಿದೆ.
ಅದೇ ರೀತಿ, ನೀಲಗಿರಿ, ಕೊಯಮತ್ತೂರು, ತಿರುಪುರ್, ಥೇಣಿ ಮತ್ತು ದಿಂಡಿಗಲ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡಿನ ಕೆಲವೆಡೆ ಮುಂಜಾನೆ ಲಘು ಮಂಜಿನ ಅನುಭವವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮಳೆ
ಭಾರತ ಹವಾಮಾನ ಇಲಾಖೆ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು, ಹಾಸನ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
More From GoodReturns

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

iPhone EMI: ಐಫೋನ್ EMIನಲ್ಲಿ ತಗೊಳೋದು ಎಷ್ಟು ಸೇಫ್? ಮಾಸಿಕ ಪಾವತಿ ಸುಲಭ, ಆದರೆ ನಿಮ್ಮ ಹಣಕಾಸು ಸುರಕ್ಷಿತವೇ?

ಶೀಘ್ರ ನಿವೃತ್ತಿ ಮತ್ತು ಆರ್ಥಿಕ ಸ್ವಾತಂತ್ರ್ಯ...ಭಾರತೀಯ ಯುವಕರಿಗಾಗಿ FIRE ಚಳುವಳಿ ರಹಸ್ಯಗಳು!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ



Click it and Unblock the Notifications