ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಅನ್ನು ಶುಕ್ರವಾರ ಸದನದಲ್ಲಿ ಮಂಡಿಸಿದ್ದು, 4,09,549 ಲಕ್ಷ ಕೋಟಿ ರೂ. ಗಾತ್ರದ ಈ ಆಯವ್ಯಯದಲ್ಲಿ ಹಲವು ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ಈ ಪೈಕಿ ರಾಜ್ಯ ಮಟ್ಟದಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ ಸ್ಥಾಪನೆಯೂ ಒಂದು. ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ ಸ್ಥಾಪಿಸಲಾಗುವುದು. ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳನ್ನು ಈ ಸೊಸೈಟಿ ಅಡಿಗೆ ತರಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಅಕ್ಕ ಕೋ ಅಪರೇಟಿವ್ ಸೊಸೈಟಿ ಏನಿದು?
ಗೃಹಲಕ್ಷ್ಮಿ ಯೋಜನೆಯ ಮೂಲಕ ರಾಜ್ಯದ ಮಹಿಳೆಯರ ಸಬಲೀಕರಣದತ್ತ ಹೆಜ್ಜೆ ಇಟ್ಟಿದ್ದ ರಾಜ್ಯ ಸರ್ಕಾರ ಇದೀಗ ಗೃಹಲಕ್ಷ್ಮಿ ಯೋಜನೆ ಗೃಹಿಣಿಯರು, ಯಜಮಾನಿಯರನ್ನು ಸ್ವಸಹಾಯ ಗುಂಪುಗಳ ಸದಸ್ಯರನ್ನಾಗಿ ಸಹಕಾರ ಸಂಘದ ವ್ಯಾಪ್ತಿಗೆ ತರಲಿದೆ. ಮಹಿಳೆಯರಿಗೆ ಜೀವನೋಪಾಯ ಚಟುವಟಿಕೆಗಳನ್ನು ನಡೆಸಲು ತ್ವರಿತ ಸಾಲ ಸೌಲಭ್ಯ ಒದಗಿಸುಲು ಅಕ್ಕ ಕೋ ಅಪರೇಟಿವ್ ಸೊಸೈಟಿ ಸ್ಥಾಪಿಸುವುದು ಸರ್ಕಾರದ ಯೋಜನೆಯಾಗಿದೆ.
ಮಹಿಳಾ ದಿನಾಚರಣೆಗೆ ಬಜೆಟ್ ನಲ್ಲಿ ಗಿಫ್ಟ್ ಕೊಟ್ಟ ಸಿಎಂ ಸಿದ್ದರಾಮಯ್ಯ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಅಕ್ಕ ಸಹಕಾರಿ ಸಂಘಗಳ ಅಡಿ ತರಲು ಯೋಜನೆ ಹಾಕಿಕೊಳ್ಳಲಾಗಿದೆ. ಮಹಿಳೆಯರ ಆರ್ಥಿಕ ಅಗತ್ಯೆತೆಗಳನ್ನು ಪೂರೈಸುವುದು, ಅದರೊಂದಿಗೆ ಆರ್ಥಿಕ ಭದ್ರತೆ ಒದಗಿಸುವುದು, ಉಳಿತಾಯ ಹಾಗೂ ಉದ್ಯಮಶೀಲತೆಯನ್ನು ಹೆಚ್ಚಿಸುವ ಉದ್ದೇಶವನ್ನು ಈ ಅಕ್ಕ ಸಹಕಾರಿ ಸಂಘ ಹೊಂದಿರಲಿದೆ ಎಂದು ಬಜೆಟ್ ನಲ್ಲಿ ಘೋಷಣೆಯಾಗಿದೆ. ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಮಾತ್ರ ಈ ಅಕ್ಕಾ ಕೋ ಅಪರೇಟಿವ್ ಸೊಸೈಟಿ ಯೋಜನೆಯು ಅನ್ವಯಿಸಲಿವೆ ಎಂದು ತಿಳಿಸಿದೆ.
ಇದರೊಂದಿಗೆ ಇಂದಿರಾ ಕ್ಯಾಂಟೀನ್ ಗಳ ನಿರ್ವಹಣೆಯನ್ನು ಸ್ವ ಸಹಾಯ ಸಂಘಗಳ ಮಹಿಳೆಯರಿಗೆ ಪ್ರಯೋಗಿಕವಾಗಿ ನೀಡುವುದಾಗಿ ಘೋಷಿಸಿದೆ. ಅಲ್ಲದೇ ಗ್ರಾಮ ಪಂಚಾಯಿತಿ ಸ್ವಸಹಾಯ ಸಹಾಯ ಸಂಘಗಳ ಸಹಭಾಗಿತ್ವದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಕಚ್ಚೇರಿ ಆವರಣದಲ್ಲಿ ಅಕ್ಕ ಕೆಫೆ ಮತ್ತು ಕ್ಯಾಂಟೀನ್ ಸ್ಥಾಪಿಸುವುದು, ಪ್ರತಿ ತಾಲ್ಯ್ಕಿನಲ್ಲಿ ಸಮಗ್ರ ಕೃಷಿ ಕ್ಲಸ್ಟರ್ ಅಭಿವೃದ್ದಿಪಡಿಸುವುದು, ಅಂಗನವಾಡಿ ಶಾಲೆ ಹಾಗೂ ವಸತಿ ನಿಲಯಗಳಿಗೆ ಮೊಟ್ಟೆ ಮತ್ತು ತರಕಾರಿ ಪೂರೈಸಲು ಸ್ವ ಸಹಾಯಕ ಸಂಘಗಳ ಕಿರು ಉದ್ಯಮಗಳನ್ನು ಪ್ರೋತ್ಸಾಹಿಸುವುದು, ಪ್ರತಿ ಜಿಲ್ಲೆಯಲ್ಲಿ ಒಂದು ಸಮುದಾಯ ಪ್ರವಾಸಿ ಯೋಜನೆಯನ್ನು ಅನುಷ್ಟಾನ ಮಾಡುವುದಾಗಿ ಘೋಷಣೆ ಮಾಡಿದೆ.ಮಹಿಳಾ ಸ್ವಸಹಾಯ ಸಂಘಗಳಿಂದ ಆಯ್ದ 50 ಸ್ಥಳಗಳಲ್ಲಿ ಶಿಶು ಪಾಲನೆಗೆ 'ವಾತ್ಸಲ್ಯ ಕೇಂದ್ರ' ಸ್ಥಾಪಿಸಲಾಗುವ ಬಗ್ಗೆಯೂ ಬಜೆಟ್ ನಲ್ಲಿ ಸಿಎಂ ಹೇಳಿದ್ದಾರೆ.
ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ.
2023-24ನೇ ಸಾಲಿನಲ್ಲಿ ಜಾರಿಯಾಗಿರುವ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ.ಮೀಸಲಿರಿಸಲಾಗಿದೆ. 2024-25ನೇ ಸಾಲಿನಲ್ಲಿ1.22 ಕೋಟಿ ಧನಸಹಾಯ ಒದಗಿಸಲಾಗಿತ್ತು. ಈಗ 28,608 ಕೋಟಿ ರೂ.
ಸಲಿಟ್ಟು ಧನಸಹಾಯ ಖಾತರಿಪಡಿಸಲು ನಿರ್ಧರಿಸಲಾಗಿದೆ. ಇನ್ನು ಮಹಿಳಾ ಉದ್ದೇಶಿತ ಕಾಠ್ಯಕ್ರಮಗಳಿಗಾಗಿ 2025-26 ನೇ ಸಾಲಿನಲ್ಲಿ ಒಟ್ಟಾರೆ 94,084 ಕೋಟಿ ರೂ. ಹಾಗೂ ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 62,033 ಕೋಟಿ ರೂ. ಮೀಸಲಿಟ್ಟಿದ್ದಾಗಿಯೂ ಘೋಷಿಸಿದೆ.
ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಮಹಿಳೆಯರಿಗಾಗಿಯೇ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿದ್ದರೂ, ಗೃಹಲಕ್ಷ್ಮಿ ಯೋಜನೆಯ ಹಣ ಸಮಯಕ್ಕೆ ಸರಿಯಾಗಿ ಬಿಡುಗಡೆ ಆಗದಿರುವುದು ಮಹಿಳೆಯರಿಗೆ ಅಸಮಧಾನ ತಂದಿರುವುದು ನಿಜ. ಒಟ್ಟು ನಾಲ್ಕು ತಿಂಗಳ ತಲಾ 8 ಸಾವಿರ ಹಣ ಬರಬೇಕಿದೆ. ಇನ್ನೊಂದೆಡೆ ಗೃಹಲಕ್ಷ್ಮಿ ಯೋಜನೆಯ ನವೆಂಬರ್, ಡಿಸೆಂಬರ್ ತಿಂಗಳ ಬಿಲ್ ಆಗಿದ್ದು, ಎಲ್ಲಾ ಫಲಾನುಭವಿಗಳಿಗೂ ಶೀಘ್ರ ಹಣ ಸಂದಾಯವಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಳೆದೊಂದು ತಿಂಗಳಿಂದ ಹೇಳುತ್ತಲೇ ಬರುತ್ತಿದ್ದಾರೆ.


Click it and Unblock the Notifications