ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾದರೆ, ಇನ್ನೂ ಕೆಲವು ಭಾಗಗಳಲ್ಲಿ ವಿಪರೀತ ಚಳಿಯಾಗುತ್ತಿದೆ (Cold). ಅತ್ತ ಹವಾಮಾನ ಇಲಾಖೆ ಕೂಡಾ ನಿರಂತರ ಮಳೆ, ಚಳಿ ಮುನ್ಸೂಚನೆ ನೀಡುತ್ತಲೇ ಬರುತ್ತಿದೆ. ಇದೀಗ ಹವಾಮಾನ ಇಲಾಖೆ ಮುಂದಿನ 7 ದಿನಗಳ ಹವಾಮಾನ ಮುನ್ಸೂಚನೆ ನೀಡಿದೆ. ಆ ಪ್ರಕಾರ ಕೆಲವೆಡೆ ಭಾರೀ ಚಳಿ ಇರಲಿದೆ.

ಹೌದು, ಭಾರತೀಯ ಹವಾಮಾನ ಇಲಾಖೆ ಇದೀಗ ಮುಂದಿನ ಒಂದು ವಾರದ ಹವಾಮಾನ ಮುನ್ಸೂಚನೆ ನೀಡಿದೆ. ಆ ಪ್ರಕಾರ, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡುಗಳಲ್ಲಿ ಯಾವುದೇ ಮಳೆ ಮುನ್ಸೂಚನೆ ನೀಡಲಾಗಿಲ್ಲ. ಆದ್ರೆ ಚಳಿ ಜೊತೆಗೆ ಶುಷ್ಕ ವಾತಾವರಣ ಇರಲಿದೆ ಎಂದು ಸೂಚನೆ ನೀಡಲಾಗಿದೆ.
ಇನ್ನು ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಜನವರಿ 21ರವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಇರುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸದ್ಯ ಮುಂದಿನ ಒಂದು ವಾರ ಒಣ ಹವೆ ಮುಂದುವರೆಯಲಿದೆ ಎಂದು ಸೂಚನೆ ನೀಡಲಾಗಿದೆ. ಅದರಲ್ಲೂ ಕರಾವಳಿ ಕರ್ನಾಟಕದಲ್ಲಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಂತಹ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ ಇರಲಿದೆ ಎಂದು ಸೂಚನೆ ನೀಡಲಾಗಿದೆ. ಆದರೆ ಚಳಿ ಮುಂದುವರೆಯಲಿದೆ ಎಂದು ಐಎಂಡಿ ಹೇಳಿದೆ.
ಉತ್ತರ ಕರ್ನಾಟಕದಲ್ಲಿ ಹೇಗಿದೆ ಹವಾಮಾನ?
ಅದೇ ರೀತಿ ಉತ್ತರ ಕರ್ನಾಟಕದಾದ್ಯಂತ ಬೀದರ್, ವಿಜಯಪುರ, ಯಾದಗಿರಿ, ಕೊಪ್ಪಳ, ಧಾರವಾಡ, ಬಾಗಲಕೋಟೆ, ಕಲಬುರಗಿ, ರಾಯಚೂರು, ಬಳ್ಳಾರಿ, ಗದಗ, ಹಾವೇರಿ, ಬೆಳಗಾವಿಯಲ್ಲೂ ಶುಷ್ಕ ವಾತಾವರಣ ಇರಲಿದೆ ಎಂದು ಹೇಳಲಾಗಿದೆ. ಆದ್ದರಿಂದ ಮುಂದಿನ ವಾರವಿಡೀ ಈ ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ಕನಿಷ್ಠ ತಾಪಮಾನ ಇರಲಿದೆ ಎಂದು ವರದಿಯಾಗಿದೆ.
ಕೇರಳದಲ್ಲಿ ಹೇಗಿದೆ ಹವಾಮಾನ?
ಇನ್ನು ರಾಜ್ಯದಲ್ಲಿ ಇಂದು ಯಾವುದೇ ಮಳೆ ಎಚ್ಚರಿಕೆ ನೀಡಲಾಗಿಲ್ಲ. ಆದ್ರೂ ಮುಂದಿನ ಕೆಲವು ಗಂಟೆಗಳಲ್ಲಿ ಸನ್ನಿಧಾನಂ, ಪಂಬಾ, ನಿಲಕ್ಕಲ್‌ನಲ್ಲಿ ಹಗುರವಾದ ಮಳೆಯಾಗುವ ನಿರೀಕ್ಷೆಯಿದೆ. ಅಲ್ಲದೇ ಅಲಪ್ಪುಳ, ಎರ್ನಾಕುಲಂ, ತ್ರಿಶೂರ್, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಪ್ರಸ್ತುತ ಅಲರ್ಟ್ ನೀಡಲಾಗಿದ್ದು, ಈ ಪ್ರದೇಶಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.
ಇನ್ನು ಶಬರಿಮಲೆಗೆ ಇಂದು ಯಾವುದೇ ಮಳೆ ಎಚ್ಚರಿಕೆಗಳನ್ನು ನೀಡಲಾಗಿಲ್ಲ. ಆದರೂ ಈ ಪ್ರದೇಶದಲ್ಲೀ ಮೋಡ ಕವಿದ ವಾತಾವರಣ ಇರಲಿದೆ ಎಂದು ನಿರೀಕ್ಷಿಲಾಗಿದೆ.
ಮೀನುಗಾರರಿಗೆ ಎಚ್ಚರಿಕೆ:
ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಇಂದು ಮೀನುಗಾರಿಕೆಗೆ ಯಾವುದೇ ಅಡ್ಡಿಯಿಲ್ಲ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ಸದ್ಯ ಯಾವುದೇ ಗುಡುಗು, ಮಳೆಯ ಎಚ್ಚರಿಕೆಗಳಿಲ್ಲ. ಆದರೂ ಚಳಿ ಮಾತ್ರ ಕೆಲವು ಜಿಲ್ಲೆಗಳಲ್ಲಿ ವಿಪರೀತವಾಗಿದೆ. ದಿನ ಹೋದಂತೆ ಚಳಿ ಹೆಚ್ಚಾಗುತ್ತಿದೆಯೇ ಹೊರತು ಕಡಿಮೆಯಾಗುವುದಂತು ಕಾಣುತ್ತಿಲ್ಲ. ಆದ್ದರಿಂದ ಜನರೂ ಕೂಡಾ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಅಂದರೆ ಬೆಚ್ಚಗಿನ ಆಹಾರ, ಬಿಸಿನೀರು, ಜ್ಯಾಕೆಟ್‌ಗಳನ್ನು ಧರಿಸಿಕೊಂಡು ಆರೋಗ್ಯವಾಗಿರಬೇಕು ಎಂದು ಸಲಹೆ ನೀಡಲಾಗಿದೆ. ಏಕೆಂದರೆ ಸಾಮಾನ್ಯವಾಗಿ ಚಳಿಗಾಲದಲ್ಲಿ ಆರೋಗ್ಯದಲ್ಲಿ ಏರುಪೇರಾಗೋದು ಸಾಮಾನ್ಯ.


Click it and Unblock the Notifications