ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಎಂದೇ ಖ್ಯಾತಿ ಪಡೆದಿರುವ ಎಲೆನ್ ಮಸ್ಕ್ ಅವರನ್ನು ವಿಶ್ವದ ಪ್ರತಿಷ್ಠಿತ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲಾಗಿದೆ. ಟೆಸ್ಲಾ, ಸ್ಪೇಸ್‌ಎಕ್ಸ್‌ನ ಸಿಇಒ ಮತ್ತು ಎಕ್ಸ್‌ನ ಮಾಲೀಕ ಎಲೆನ್ ಮಸ್ಕ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ. ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಮತ್ತು ಕೈಗಾರಿಕೋದ್ಯಮಿ ಎಲೋನ್ ಮಸ್ಕ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು ನಾರ್ವೆಯ ಸಂಸದರೊಬ್ಬರು ಪ್ರಸ್ತಾಪಿಸಿದ್ದಾರೆ.
ಡೈಲಿಮೇಲ್ ವರದಿಯ ಪ್ರಕಾರ, ನಾರ್ವೆಯ ಲಿಬರ್ಟೇರಿಯನ್ ಪ್ರೋಗ್ರೆಸ್ ಪಾರ್ಟಿಯ ಸಂಸದ ಮೋರಿಸ್ ನಿಲ್ಸೆನ್ ಇದಕ್ಕಾಗಿ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ. ಮತ್ತು ಇದರಲ್ಲಿ ಬಿಲಿಯನೇರ್ ಉದ್ಯಮಿ ಎಲೆನ್ ಮಸ್ಕ್ ಅವರನ್ನು ಹೊಗಳಿದ್ದಾರೆ. ಮಸ್ಕ್ ಸ್ಥಾಪಿಸಿದ ಕಂಪನಿಗಳ ಮೂಲಕ ಜಗತ್ತಿಗೆ ಉತ್ತಮ ಸಂಪರ್ಕ ಕಲ್ಪಿಸಿದ್ದಲ್ಲದೆ, ಸುರಕ್ಷಿತವಾಗಿರಲು ಸಹಕಾರಿಯಾಗಿದೆ ಎಂದರು.

ಎಲೆನ್ ಮಸ್ಕ್ ಸ್ಥಾಪಿಸಿದ, ಹಾಗೂ ಅವರು ನಡೆಸುವ ಕಂಪನಿಗಳು ಸಮಾಜವನ್ನು ಸುಧಾರಿಸುತ್ತಿವೆ. ಅವರು ಭೂಮಿಯ ಮೇಲೆ ಮಾತ್ರವಲ್ಲದೆ ಬಾಹ್ಯಾಕಾಶದಲ್ಲಿಯೂ ಸಂವಹನವನ್ನು ಸ್ಥಾಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಜಾಗತಿಕ ಸಂಪರ್ಕವನ್ನು ಸುಧಾರಿಸುವಲ್ಲಿ ಎಲೆನ್ ಮಸ್ಕ್ ಉತ್ತಮ ಕೆಲಸ ಮಾಡುತ್ತಿದ್ದಾರೆ.
ಈ ವರ್ಷ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸಾಂಜ್, ಪೋಪ್ ಫ್ರಾನ್ಸಿಸ್ ಸೇರಿದಂತೆ ಹಲವು ಪ್ರಮುಖ ಹೆಸರುಗಳನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ಸೇರಿಸಲಾಗಿದೆ. ಕಳೆದ ವರ್ಷ, ನೊಬೆಲ್ ಶಾಂತಿ ಪ್ರಶಸ್ತಿಯನ್ನು ಇರಾನ್ ಮಾನವ ಹಕ್ಕುಗಳ ಕಾರ್ಯಕರ್ತೆ ನರ್ಗೆಸ್ ಮೊಹಮ್ಮದಿ ಅವರಿಗೆ ನೀಡಲಾಯಿತು, ಅವರು ಇರಾನ್‌ನಲ್ಲಿ ಮಹಿಳಾ ಹಕ್ಕುಗಳು ಮತ್ತು ಮಾನವ ಸ್ವಾತಂತ್ರ್ಯಕ್ಕಾಗಿ ಪ್ರತಿಪಾದಿಸಲು ದೀರ್ಘಕಾಲ ಕೆಲಸ ಮಾಡಿದ್ದಾರೆ ಮತ್ತು ಇದರಿಂದಾಗಿ ಅವರು ಹಲವು ವರ್ಷಗಳಿಂದ ಜೈಲಿನಲ್ಲಿದ್ದರು.

ಪ್ರತಿ ವರ್ಷ ಅಕ್ಟೋಬರ್ ತಿಂಗಳಲ್ಲಿ ನೊಬೆಲ್ ಪ್ರಶಸ್ತಿಯನ್ನು ಘೋಷಿಸಲಾಗುತ್ತದೆ, ಇದರಲ್ಲಿ ಅನೇಕ ಕ್ಷೇತ್ರಗಳಲ್ಲಿ ಕೆಲಸ ಮಾಡುವವರನ್ನು ಗೌರವಿಸಲಾಗುತ್ತದೆ.


Click it and Unblock the Notifications