ಚೈನೀಸ್ ಸ್ಮಾರ್ಟ್ ಫೋನ್ ತಯಾರಕ ಸಂಸ್ಥೆ ಶಿಯೋಮಿ ಗುರುವಾರದಂದು ಭಾರತದಲ್ಲಿ ಹೊಸ ಬಜೆಟ್ ಸ್ಮಾರ್ಟ್ ಫೋನ್ ಅನ್ನು ಬಿಡುಗಡೆ ಮಾಡಿದೆ. ರೆಡ್ಮಿ 9 ಹೆಸರಿನ 4 GB+ 64 GB ಅವತರಣಿಕೆಯ ಈ ಫೋನ್ ಆರಂಭಿಕ ಬೆಲೆ 8,999 ರುಪಾಯಿ ಇದೆ. ಇನ್ನೊಂದು 4 GB RAM ಹಾಗೂ 128 GB ಸಂಗ್ರಹಣಾ ಸಾಮರ್ಥ್ಯದ ಫೋನ್ ಬೆಲೆ 9,999 ರುಪಾಯಿ ಇದೆ.
ಈ ಸ್ಮಾರ್ಟ್ ಫೋನ್ ಮೂರು ಬಣ್ಣಗಳಲ್ಲಿ ದೊರೆಯಲಿದೆ: ಕಾರ್ಬನ್ ಕಪ್ಪು, ಸ್ಪೋರ್ಟಿ ಕಿತ್ತಳೆ, ಆಕಾಶ ನೀಲಿ ಬಣ್ಣದಲ್ಲಿ ಆಗಸ್ಟ್ 31ನೇ ತಾರೀಕಿನಿಂದ ಖರೀದಿಸಬಹುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. 6.35 ಇಂಚಿನ ಐಪಿಎಸ್ ಎಚ್ ಡಿ+ ಡಿಸ್ ಪ್ಲೇ ಜತೆಗೆ 20:9 ಆಸ್ಪೆಕ್ಟ್ ರೇಷಿಯೋ ಇರುತ್ತದೆ.
ಈ ಮೊಬೈಲ್ ಫೋನ್ ನಲ್ಲಿ ಫಿಂಗರ್ ಪ್ರಿಂಟ್ ಸೆನ್ಸರ್ ಹಾಗೂ ಎಐ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್) ಫೇಸ್ ಅನ್ ಲಾಕ್ ತಂತ್ರಜ್ಞಾನ ಇದೆ. ಇನ್ನು ಫೋನ್ ನಲ್ಲಿ 4G ಎರಡು ಸಿಮ್ ಕಾರ್ಡ್ ಬಳಸಬಹುದು. ಜತೆಗೆ ಮೈಕ್ರೋ ಎಸ್ ಡಿ ಕಾರ್ಡ್ ಹಾಕಲು ಅವಕಾಶ ಇದೆ. 3.5 ಎಂಎಂ ಹೆಡ್ ಫೋನ್ ಜಾಕ್ ಸಹಿತ ಬರುತ್ತದೆ.

13 MP ಮುಖ್ಯ ಕ್ಯಾಮೆರಾ ಇದ್ದು, 2 MP ಡೆಪ್ತ್ ಸೆನ್ಸರ್ ಜತೆಗೆ LED ಫ್ಲ್ಯಾಷ್ ಇರಲಿ. ಇನ್ನು 5 MP ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಸೆಲ್ಫಿ ಕ್ಯಾಮೆರಾ ಇದೆ. 5000 mAh ಬ್ಯಾಟರಿ ಸಾಮರ್ಥ್ಯದ ಈ ಫೋನ್ ಆಂಡ್ರಾಯಿಡ್ 10ರಲ್ಲಿ MIUI 12ರಲ್ಲಿ ಕಾರ್ಯ ನಿರ್ವಹಿಸುತ್ತದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications