ಯೆಸ್ ಬ್ಯಾಂಕ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೆಸ್ ಬ್ಯಾಂಕ್ ಸ್ಥಾಪಕ ರಾಣಾ ಕಪೂರ್, ಡಿಎಚ್ ಎಫ್ ಎಲ್ ನ ದಿವಾಳಿಯಾಗಿರುವ ಪ್ರವರ್ತಕರಾದ ಕಪಿಲ್- ದೀರಜ್ ವಾಧ್ವಾನ್ ಗೆ ಸೇರಿದ 2200 ಕೋಟಿ ಆಸ್ತಿಯನ್ನು ಜಾರಿ ನಿರ್ದೇಶನಾಲಯವು (ಇ.ಡಿ.) ಜಪ್ತಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಣಾ ಕಪೂರ್ ಗೆ ಸೇರಿದ ಮುಂಬೈ ಪೆದ್ದರ್ ರಸ್ತೆಯ ಬಂಗಲೆ, ಮಲಬಾರ್ ಹಿಲ್ ಪ್ರದೇಶದಲ್ಲಿನ ಆರು ಫ್ಲ್ಯಾಟ್ ಗಳು, ಅಮೃತಾ ಶೆರ್ಗಿಲ್ ಮಾರ್ಗ್ ನಲ್ಲಿನ 48 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಇದರ ಜತೆಗೆ ನ್ಯೂಯಾರ್ಕ್ ನಲ್ಲಿನ ಒಂದು, ಲಂಡನ್ ನಲ್ಲಿನ ಎರಡು, ಆಸ್ಟ್ರೇಲಿಯಾದಲ್ಲಿನ ವಾಣಿಜ್ಯ ಆಸ್ತಿ ಹಾಗೂ ಐದು ವಿಲಾಸಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.
ರಿಯಲ್ ಎಸ್ಟೇಟ್ ಕಂಪೆನಿಗೆ ಅನುಕೂಲ ಮಾಡಿಕೊಡಲು ಕಾನೂನುಬಾಹಿರವಾಗಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಣಾ ಕಪೂರ್ ನನ್ನು ಬಂಧಿಸುವುದಕ್ಕೆ ಸಿಬಿಐ ಮುಂದಾಗಿತ್ತು. ಆದರೆ ಜುಲೈ 11ನೇ ತಾರೀಕಿನ ತನಕ ಮುಂಬೈ ವಿಶೇಷ ಕೋರ್ಟ್ ನಿಂದ ಮಧ್ಯಂತರ ರಕ್ಷಣೆ ಕಪೂರ್ ಗೆ ಸಿಕ್ಕಿದೆ.

ಅವಂತ ಗ್ರೂಪ್ ನಿಂದ ನವದೆಹಲಿಯ ಲ್ಯೂಟೆನ್ ವಲಯದ ಬಂಗಲೆ ಖರೀದಿ ವ್ಯವಹಾರದಲ್ಲಿ 307 ಕೋಟಿ ರುಪಾಯಿ ಲಂಚ ಪಡೆದ ಆರೋಪದ ಮೇಲೆ ಸಿಬಿಐನಿಂದ ಈ ವರ್ಷದ ಮಾರ್ಚ್ ನಲ್ಲಿ ರಾಣಾ ಕಪೂರ್ ವಿರುದ್ಧ ಪ್ರಕರಣ ದಾಖಲಾಗಿತ್ತು.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications