ಈ ವಾರದಲ್ಲಿ ಒಂದೆರಡು ಬಾರಿ ಚಿನ್ನದ ಬೆಲೆ (Gold Rate) ಇಳಿಕೆಯಾಗಿದೆ ಹೊರತು, ಉಳಿದ ದಿನಗಳಲ್ಲಿ ಚಿನ್ನದ ಬೆಲೆ ಭಾರೀ ಏರಿಕೆ ಕಂಡಿದೆ. ಅದರಲ್ಲೂ ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿನೇ ದಿನೇ ಏರಿಕೆ ಕಾಣುತ್ತಲೇ ಇದೆ. ಇದೀಗ ಭಾನುವಾರ, ಜನವರಿ 11 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆಯೇ? ಏರಿಕೆಯಾಗಿದೆಯೇ? ಎಂಬ ಕುತೂಹಲ ಎಲ್ಲರಲ್ಲೂ ಇದೆ. ನಿಮಗೂ ಈ ಕುತೂಹಲ ಇದ್ರೆ ಈ ಸುದ್ದಿ ಓದಿ.

ಬೆಂಗಳೂರಿನಲ್ಲಿ 24K ಚಿನ್ನದ ಬೆಲೆ ಎಷ್ಟಿದೆ?
24 ಕ್ಯಾರಟ್ ಚಿನ್ನದ 1 ಗ್ರಾಂ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆಗಳಾಗಿಲ್ಲ. ನಿನ್ನೆಯ ಬೆಲೆಯನ್ನೇ ಇಂದು ಕಾಯ್ದುಕೊಂಡಿದೆ. ಅಂದರೆ ಒಂದು ಗ್ರಾಂ ಚಿನ್ನದ ಬೆಲೆ ₹14,046 ರೂ. ಆಗಿದ್ದು, ನಿನ್ನೆಗೂ ಇಂದಿಗೂ ಯಾವುದೇ ಬದಲಾವಣೆಯಾಗಿಲ್ಲ. 8 ಗ್ರಾಂ ಚಿನ್ನದ ಬೆಲೆ ಇಂದು ₹1,12,368 ರೂ. ಆಗಿದ್ದು, ಇಂದು ಶೂನ್ಯ ಬದಲಾವಣೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,40,460 ರೂ. ಇದೆ. 100 ಗ್ರಾಂ ಚಿನ್ನದ ಬೆಲೆ ಇಂದು ₹14,04,600 ರೂ. ಆಗಿದ್ದು, ನಿನ್ನೆಗೂ ಇಂದಿಗೂ ಯಾವುದೇ ಬದಲಾವಣೆಯಾಗಿಲ್ಲ.
ಬೆಂಗಳೂರಿನಲ್ಲಿ 22K ಚಿನ್ನದ ಬೆಲೆ ಎಷ್ಟಿದೆ?
22K ಚಿನ್ನದ 1 ಗ್ರಾಂ ಬೆಲೆ 12,875 ರೂ. ಆಗಿದೆ. ಅಂದರೆ ಯಾವುದೇ ಗ್ರಾಂನಲ್ಲಿ ಚಿನ್ನದ ಬೆಲೆಯಲ್ಲಿ ವ್ಯತ್ಯಾಸಗಳಾಗಿಲ್ಲ. ಅದೇ ರೀತಿ 8 ಗ್ರಾಂ ಚಿನ್ನದ ಬೆಲೆ ಇಂದು 1,03,000 ರೂ. ಆಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,28,750 ರೂ. ಆಗಿದೆ. ನಿನ್ನೆಗೂ ಇಂದಿಗೂ ಯಾವುದೇ ವ್ಯತ್ಯಾಸಗಳಾಗಿಲ್ಲ. 100 ಗ್ರಾಂ ಚಿನ್ನದ ಬೆಲೆ ಇಂದು 12,87,500 ರೂ. ಆಗಿದೆ.
ಬೆಂಗಳೂರಿನಲ್ಲಿ 18K ಚಿನ್ನದ ಬೆಲೆ ಎಷ್ಟಿದೆ?
ಬೆಂಗಳೂರಿನಲ್ಲಿ 18K ಚಿನ್ನದ 1 ಗ್ರಾಂ ಬೆಲೆ ಇಂದು 10,534 ರೂ. ಆಗಿದೆ. ಇನ್ನು 8 ಗ್ರಾಂ ಚಿನ್ನದ ಬೆಲೆಯಲ್ಲೂ ಯಾವುದೇ ಬದಲಾವಣೆಯಾಗದೆ, ಇಂದು ₹84,272 ರೂ. ಆಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 1,05,340 ರೂ. ಆಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು ಒಟ್ಟು ಬೆಲೆ 10,53,400 ರೂ. ಆಗಿದೆ. ಅಂದರೆ ಚಿನ್ನದ ಬೆಲೆಯಲ್ಲಿ ನಿನ್ನೆಗೂ ಇಂದಿಗೂ ಹೋಲಿಸಿದ್ರೆ ಶೂನ್ಯ ಬದಲಾವಣೆಯಾಗಿದೆ.
ಬೆಂಗಳೂರಿನಲ್ಲಿ ಬೆಳ್ಳಿ ದರ:
ಬೆಂಗಳೂರಿನಲ್ಲಿ ಚಿನ್ನದ ದರದಂತೆ ಬೆಳ್ಳಿ ಬೆಲೆ ಕೂಡಾ ಶೂನ್ಯ ಬದಲಾವಣೆಯಾಗಿದೆ. ಇಂದು 1 ಗ್ರಾಂ ಬೆಳ್ಳಿ ಬೆಲೆ ₹260 ರೂ. ಆಗಿದ್ದು, ನಿನ್ನೆಯೂ ಅಷ್ಟೇ ಬೆಲೆ ಇತ್ತು. 8 ಗ್ರಾಂ ಬೆಳ್ಳಿ ದರ ಇಂದು ₹2,080 ರೂ., 10 ಗ್ರಾಂ ಬೆಳ್ಳಿ ಬೆಲೆ ₹2,600 ರೂ., 100 ಗ್ರಾಂ ಬೆಳ್ಳಿ ಬೆಲೆ ₹26,000 ರೂ., 1000 ಗ್ರಾಂ ಬೆಳ್ಳಿ ದರ ₹2,60,000 ರೂ. ಇತ್ತು. ನಿನ್ನೆಗೂ ಇಂದಿಗೂ ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸಗಳಾಗಿಲ್ಲ.
ಸ್ಪಾಟ್ ಚಿನ್ನದ ದರ:
ಜನವರಿ 9ರ ರಾಯಿಟರ್ಸ್ ವರದಿ ಪ್ರಕಾರ, 1618 GMT ಪ್ರಕಾರ, ಸ್ಪಾಟ್ ಚಿನ್ನದ ದರವು ಪ್ರತೀ ಔನ್ಸ್‌ಗೆ 0.5% ಏರಿಕೆಯಾಗಿ $4,496.09ಕ್ಕೆ ತಲುಪಿತ್ತು. ಅದೇ ದರ ಇಂದು ಮುಂದುವರೆದಿದೆ.


Click it and Unblock the Notifications