ರೂ.50,000ಕ್ಕಿಂತ ಕಮ್ಮಿ ಸಂಬಳ ಇದ್ಯಾ, ಮೊದಲ ಬಾರಿಗೆ ಹೊಸ ಕಾರು ತೆಗೆದುಕೊಳ್ಳಬೇಕೇ.. ಇವೇ 5 ಬೆಸ್ಟ್ ಚಾಯ್ಸ್!

ಹೊಸ ಕಾರು ಖರೀದಿಸಬೇಕೆಂಬುದು ಹಲವರ ಬಹುದಿನಗಳ ಕನಸಾಗಿರುತ್ತದೆ. ನಿಮ್ಮ ಸಂಬಳ 50,000 ರೂಪಾಯಿಗಿಂತ ಕಡಿಮೆ ಇದ್ದು, ಮೊದಲ ಬಾರಿಗೆ ನೂತನ ಕಾರೊಂದನ್ನು ಮನೆಗೆ ತರಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಮಾರುತಿ ಸುಜುಕಿ ಎಸ್-ಪ್ರೆಸ್ಸೊ, ಮಾರುತಿ ಸುಜುಕಿ ಸ್ವಿಫ್ಟ್, ರೆನಾಲ್ಟ್ ಟ್ರೈಬರ್, ಟಾಟಾ ಪಂಚ್ ಹಾಗೂ ಟೊಯೊಟಾ ಗ್ಲಾನ್ಜಾಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso):

ಇದು ಎಂಟ್ರಿ-ಲೆವೆಲ್ ಕಾರಾಗಿದೆ. ಮೊದಲ ಬಾರಿಗೆ ಕಾರು ಖರೀದಿಸುವವರಿಗೆ ಅತ್ಯುತ್ತಮವಾದ ಆಯ್ಕೆಯಾಗಲಿದೆ. ರೂ.3.50 ಲಕ್ಷದಿಂದ ರೂ.5.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸ್ಟ್ಯಾಂಡರ್ಡ್ ಮಾಡೆಲ್‌ನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, 5 ವರ್ಷದ ಅವಧಿಗೆ ತಿಂಗಳಿಗೆ ರೂ.4,500 ವರೆಗೆ ಇಎಂಐ ಕಟ್ಟಬೇಕು. ಈ ಕಾರು ಸರಳವಾದ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ಸ್ಟಾರಿ ಬ್ಲೂ, ಮೆಟಾಲಿಕ್ ಗ್ರಾನೈಟ್ ಗ್ರೇ, ಮೆಟಾಲಿಕ್ ಸಿಲ್ಕಿ ಸಿಲ್ವರ್ ಹಾಗೂ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.


ರೂ.50,000ಕ್ಕಿಂತ ಕಮ್ಮಿ ಸಂಬಳ ಇದ್ಯಾ, ಮೊದಲ ಬಾರಿಗೆ ಹೊಸ ಕಾರು..

ನೂತನ 'ಎಸ್-ಪ್ರೆಸ್ಸೊ' 1-ಲೀಟರ್ ಪೆಟ್ರೋಲ್ ಮತ್ತು 1-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 24 ರಿಂದ 32.73 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಕನೆಕ್ಟಿವಿಟಿ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift):

ಈ ಕಾರು ಕಮ್ಮಿ ಸಂಬಳ ಬರುವವರಿಗೆ ಉತ್ತಮವಾದ ಆಯ್ಕೆಯಾಗಲಿದೆ. ರೂ.5.79 ಲಕ್ಷದಿಂದ ರೂ.8.80 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಟ್ಯಾಂಡರ್ಡ್ ಮಾಡೆಲ್‌ನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ಮನೆಗೆ ತಂದರೆ, 5 ವರ್ಷಗಳಿಗೆ ಮಾಸಿಕ ರೂ.10,000 ವರೆಗೆ ಇಎಂಐ ಪಾವತಿಸಬೇಕು. ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ ಮತ್ತು ನಾವೆಲ್ ಆರೆಂಜ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.


ರೂ.50,000ಕ್ಕಿಂತ ಕಮ್ಮಿ ಸಂಬಳ ಇದ್ಯಾ, ಮೊದಲ ಬಾರಿಗೆ ಹೊಸ ಕಾರು..

ಹೊಸ 'ಸ್ವಿಫ್ಟ್' 1.2-ಲೀಟರ್ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24 ರಿಂದ 32.85 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಯುಎಸ್‌ಬಿ ಟೈಪ್-ಸಿ ಪೋರ್ಟ್‌ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ರೆನಾಲ್ಟ್ ಟ್ರೈಬರ್ (Renault Triber):

ಇದು ಕುಟುಂಬದ ಕಾರಾಗಿದೆ. ಪ್ರಪ್ರಥಮ ಬಾರಿಗೆ ನೂತನ ಕಾರು ತೆಗೆದುಕೊಳ್ಳುವವರಿಗೆ ಹೆಚ್ಚು ಸೂಕ್ತವಾಗಲಿದೆ. ರೂ.5.76 ಲಕ್ಷದಿಂದ ರೂ.8.60 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸ್ಟ್ಯಾಂಡರ್ಡ್ ಮಾಡೆಲ್‌ನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಖರೀದಿಸಿದರೆ, 5 ವರ್ಷಕ್ಕೆ ತಿಂಗಳಿಗೆ ರೂ.10,000 ವರೆಗೆ ಇಎಂಐ ಕಟ್ಟಬೇಕು. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 18 ರಿಂದ 19 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 7 ಆಸನಗಳನ್ನು ಪಡೆದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.


ರೂ.50,000ಕ್ಕಿಂತ ಕಮ್ಮಿ ಸಂಬಳ ಇದ್ಯಾ, ಮೊದಲ ಬಾರಿಗೆ ಹೊಸ ಕಾರು..

ಟಾಟಾ ಪಂಚ್ (Tata Punch):

ಈ ಮೈಕ್ರೋ ಎಸ್‌ಯುವಿ ರೂ.50,000ಕ್ಕಿಂತ ಕಡಿಮೆ ಸಂಬಳ ಬರುವವರಿಗೆ ಅತ್ಯುತ್ತಮ ಆಯ್ಕೆಯಾಗಲಿದೆ. ರೂ.5.50 ಲಕ್ಷದಿಂದ ರೂ.9.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಟ್ಯಾಂಡರ್ಡ್ ಮಾಡೆಲ್‌ನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಕಟ್ಟಿ ತೆಗೆದುಕೊಂಡರೆ, 5 ವರ್ಷಗಳಿಗೆ ಮಾಸಿಕ ರೂ.9,700 ವರೆಗೆ ಇಎಂಐ ಪಾವತಿ ಮಾಡಬೇಕು. 1.2-ಲೀಟರ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 18 ರಿಂದ 27 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಹೊಂದಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.


ರೂ.50,000ಕ್ಕಿಂತ ಕಮ್ಮಿ ಸಂಬಳ ಇದ್ಯಾ, ಮೊದಲ ಬಾರಿಗೆ ಹೊಸ ಕಾರು..

ಟೊಯೊಟಾ ಗ್ಲಾನ್ಜಾ (Toyota Glanza):

ಇದೊಂದು ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಆಗಿದೆ. ರೂ.6.39 ಲಕ್ಷದಿಂದ ರೂ.9.15 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಸ್ಟ್ಯಾಂಡರ್ಡ್ ಮಾಡೆಲ್‌ನ್ನು ರೂ.2 ಲಕ್ಷ ಡೌನ್-ಪೇಮೆಂಟ್ ಪಾವತಿಸಿ ಕೊಂಡುಕೊಂಡರೆ, 5 ವರ್ಷಕ್ಕೆ ತಿಂಗಳಿಗೆ ರೂ.12,000 ವರೆಗೆ ಇಎಂಐ ಕಟ್ಟಬೇಕು. 1.2-ಲೀಟರ್ ಪೆಟ್ರೋಲ್ ಮತ್ತು 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 22 ರಿಂದ 30 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Credit: Drivespark

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+