Mahindra: 21 Km ಮೈಲೇಜ್.. 7.28 ಲಕ್ಷ, ಹೊಸ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒಗೆ 5 ಬದಲಿ ಕಾರುಗಳಿವು.. ಬೆಲೆ ಎಷ್ಟು?

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಪ್ರಮುಖ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. ರೂ.7.28 ಲಕ್ಷದಿಂದ ರೂ.14.40 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಸಿಟ್ರಿನ್ ಯೆಲ್ಲೋ, ಡೀಪ್ ಫಾರೆಸ್ಟ್, ಎವರೆಸ್ಟ್ ವೈಟ್, ಗ್ಯಾಲಕ್ಸಿ ಗ್ರೇ, ನೆಬ್ಯುಲಾ ಬ್ಲೂ, ಸ್ಟೆಲ್ತ್ ಬ್ಲ್ಯಾಕ್ ಮತ್ತು ಟ್ಯಾಂಗೋ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 201 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,600 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಈ ಕಾರು 1.2-ಲೀ. ಪೆಟ್ರೋಲ್, 1.2-ಲೀ. ಟಿಜಿಡಿಐ ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 18 ರಿಂದ 21 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಪಡೆದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25 ಇಂಚಿನ ಡುಯಲ್ ಡಿಸ್​ಪ್ಲೇಗಳು, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.


Mahindra: 21 Km ಮೈಲೇಜ್.. 7.28 ಲಕ್ಷ, ಹೊಸ ಮಹೀಂದ್ರಾ..

ನೀವು ಇದೇ 'ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ'ಗೆ ಪರ್ಯಾಯವಾಗಿ ಈ 5 ಜನಪ್ರಿಯ ಎಸ್‌ಯುವಿಗಳಾದ ಮಾರುತಿ ಸುಜುಕಿ ಬ್ರೆಜಾ, ಟಾಟಾ ನೆಕ್ಸಾನ್‌, ಹ್ಯುಂಡೈ ವೆನ್ಯೂ, ಕಿಯಾ ಸೋನೆಟ್ ಹಾಗೂ ರೆನಾಲ್ಟ್ ಕೈಗರ್ ಕಾರುಗಳನ್ನು ಖರೀದಿ ಮಾಡಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಮಾರುತಿ ಸುಜುಕಿ ಬ್ರೆಝಾ (Maruti Suzuki Brezza):

ಇದು ಪ್ರಖ್ಯಾತ ಕಾರಾಗಿದೆ. 'ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ'ಗೆ ಅತ್ಯುತ್ತಮವಾದ ಬದಲಿ ಆಯ್ಕೆಯಾಗಲಿದೆ. ರೂ.8.26 ಲಕ್ಷದಿಂದ ರೂ.13.01 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀ. ಪೆಟ್ರೋಲ್, 1.5-ಲೀ. ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 17 ರಿಂದ 25 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.


Mahindra: 21 Km ಮೈಲೇಜ್.. 7.28 ಲಕ್ಷ, ಹೊಸ ಮಹೀಂದ್ರಾ..

ಟಾಟಾ ನೆಕ್ಸಾನ್ (Tata Nexon):

ಈ ಎಸ್‌ಯುವಿಯನ್ನು 'ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ'ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.7.32 ಲಕ್ಷದಿಂದ ರೂ.14.05 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀ. ಪೆಟ್ರೋಲ್, 1.5 ಲೀ. ಡೀಸೆಲ್ ಹಾಗೂ 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 17 ರಿಂದ 24 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಹ್ಯುಂಡೈ ವೆನ್ಯೂ (Hyundai Venue):

ಇದೊಂದು ಜನಪ್ರಿಯ ಕಾರಾಗಿದೆ. 'ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ'ಗೆ ಬದಲಿ ಎಸ್‌ಯುವಿಯಾಗಿ ತೆಗೆದುಕೊಳ್ಳಬಹುದು. ರೂ.7.89 ಲಕ್ಷದಿಂದ ರೂ.15.48 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಡಿಸೇಲ್ ಹಾಗೂ 1.0-ಲೀ. ಟರ್ಬೊ ಪೆಟೋಲ್ ಎಂಜಿನ್‌ನ್ನು ಪಡೆದಿದೆ. 17.9 ರಿಂದ 20.99 ಕಿ.ಮೀವರೆಗೆ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ - ಡ್ರೈವರ್ ಡಿಸ್‌ಪ್ಲೇಗಾಗಿ 12.3 ಇಂಚಿನ ಡುಯಲ್ ಸ್ಕ್ರೀನ್‌ಗಳು ಮತ್ತು 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.


Mahindra: 21 Km ಮೈಲೇಜ್.. 7.28 ಲಕ್ಷ, ಹೊಸ ಮಹೀಂದ್ರಾ..

ಕಿಯಾ ಸೋನೆಟ್‌ (Kia Sonet):

ಈ ಎಸ್‌ಯುವಿಯನ್ನು 'ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ'ಗೆ ಪರ್ಯಾಯವಾಗಿ ಮನೆಗೆ ತರಬಹುದು. ರೂ.7.30 ಲಕ್ಷದಿಂದ ರೂ.14 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀ. ಟರ್ಬೊ ಪೆಟ್ರೋಲ್, 1.2-ಲೀ. ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 18 ರಿಂದ 24 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.


Mahindra: 21 Km ಮೈಲೇಜ್.. 7.28 ಲಕ್ಷ, ಹೊಸ ಮಹೀಂದ್ರಾ..

ರೆನಾಲ್ಟ್ ಕೈಗರ್ (Renault Kiger):

ಇದು ಪ್ರಮುಖ ಎಸ್‌ಯುವಿಯಾಗಿದೆ. 'ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ'ಗೆ ಬದಲಾಗಿ ಸುಲಭವಾಗಿ ಖರೀದಿಸಬಹುದು. ರೂ.5.76 ಲಕ್ಷದಿಂದ ರೂ.10.34 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.0-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.0-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 19 ರಿಂದ 20.38 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Credit: Drivespark

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+