ಬೈಕ್‌ನಂತೆ 27 Km ಮೈಲೇಜ್.. 10.77 ಲಕ್ಷ ರೂಪಾಯಿ, 5-ಸೀಟರ್.. ಈ ಪ್ರಖ್ಯಾತ ಮಾರುತಿ ಕಾರಿಗೆ ಮನಸೋತ ಗ್ರಾಹಕರು!

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಪ್ರಖ್ಯಾತ ಎಸ್‌ಯುವಿ ಎಂದೇ ಮನೆ ಮಾತಾಗಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿಸುತ್ತಿದ್ದಾರೆ. ಕಳೆದು ತಿಂಗಳು (ಡಿಸೆಂಬರ್ - 2025) ಸಹ ಗ್ರ್ಯಾಂಡ್ ವಿಟಾರಾ ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 8,597 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 7,093 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 21.20% ಪ್ರಗತಿಯಾಗಿದೆ.

ಡಿಸೆಂಬರ್​ನಲ್ಲಿ 'ಮಾರುತಿ ಗ್ರ್ಯಾಂಡ್ ವಿಟಾರಾ' ಮಾರಾಟ ಸಂಖ್ಯೆಯು ಅಧಿಕಗೊಳ್ಳಲು ನಾನಾ ಕಾರಣಗಳಿವೆ. ಬಹುಮುಖ್ಯವಾಗಿ ಸೆಪ್ಟೆಂಬರ್ 22 ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಈ ಕಾರಿನ ಬೆಲೆಯೂ ಇಳಿಕೆಯಾಗಿದೆ. ಇದು ಸಾಕಷ್ಟು ಆಕರ್ಷಕವಾಗಿದೆ. ಹೀಗಾಗಿ, ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ ಎಂದು ವಿಶ್ಲೇಷಣೆ ಮಾಡಲಾಗಿದೆ.


ಬೈಕ್‌ನಂತೆ 27 Km ಮೈಲೇಜ್.. 10.77 ಲಕ್ಷ ರೂಪಾಯಿ, 5-ಸೀಟರ್..

ಇದು ಸ್ಪರ್ಧಾತ್ಮಕ ದರದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.10.77 ಲಕ್ಷದಿಂದ ರೂ.19.72 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಸಿಗ್ಮಾ (Sigma), ಡೆಲ್ಟಾ (Delta), ಡೆಲ್ಟಾ ಪ್ಲಸ್ (Delta Plus), ಜಿಟಾ (Zeta), ಆಲ್ಫಾ (Alpha) ಹಾಗೂ ಆಲ್ಫಾ ಪ್ಲಸ್ (Alpha Plus) ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ.

ನೂತನ 'ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ' ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 17-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ನೆಕ್ಸಾ ಬ್ಲೂ, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡಿಯರ್ ಗ್ರೇ ಮತ್ತು ಮಿಡ್‌ನೈಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 210 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,600 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.


ಬೈಕ್‌ನಂತೆ 27 Km ಮೈಲೇಜ್.. 10.77 ಲಕ್ಷ ರೂಪಾಯಿ, 5-ಸೀಟರ್..

ಈ ಕಾರು ಶಕ್ತಿಶಾಲಿಯಾದ 3 ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್, 103 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 139 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಮತ್ತೊಂದು 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್, 115 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 141 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುತ್ತದೆ.

ಇನ್ನೊಂದು 1.5-ಲೀಟರ್ ಸಿಎನ್‌ಜಿ ಎಂಜಿನ್, 88 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 121 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಗೇರ್‌ಬಾಕ್ಸ್‌ನ್ನು ಹೊಂದಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದೆ ರೀತಿಯಲ್ಲಿ 27.97 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 135 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಬರೀ 11.55 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.


ಬೈಕ್‌ನಂತೆ 27 Km ಮೈಲೇಜ್.. 10.77 ಲಕ್ಷ ರೂಪಾಯಿ, 5-ಸೀಟರ್..

ಹೊಸ 'ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ' 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ದೂರದ ಊರುಗಲಿಗೆ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 373 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಹಾಗೂ ವೈರ್‌ಲೆಸ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ವೈರ್‌ಲೆಸ್ ಚಾರ್ಜಿಂಗ್, ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Credit: Drivespark

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+