ಬೆಂಗಳೂರು: 2023 ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಹೀನಾಯವಾಗಿ ಸೋಲು ಅನುಭವಿಸಿದ್ರೆ, ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸುವ ಮೂಲಕ ಅಧಿಕಾರಕ್ಕೆ ಬಂದಿದೆ. ಅಲ್ಲದೇ 2024 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ರುಚಿ ತೋರಿಸಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿ ಚುನಾವಣೆ ಎದುರಿಸಿತ್ತು. ಅಲ್ಲದೇ ಮುಂಬರುವ ಚುನಾವಣೆಗಳು ದಳಪತಿಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು, ಕಳೆದ ಲೋಕಸಭಾ ಚುನಾವಣೆಯಲ್ಲಿ ಡಿ ಕೆ ಸುರೇಶ್ ಸೋಲಿಸಿದಂತೆ ಡಿ ಕೆ ಶಿವಕುಮಾರ್ ಅವರನ್ನ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸೋಲಿಸಲು ದಳಪತಿಗಳು ಮಾಸ್ಟರ್ ಪ್ಲಾನ್ ನಡೆಸಿದ್ದಾರೆ.
ಸದ್ಯ ಕೇಂದ್ರದತ್ತ ಮುಖ ಮಾಡಿರುವ ಹೆಚ್ ಡಿ ಕುಮಾರಸ್ವಾಮಿ ಅವರು, ಇದೀಗ ಮತ್ತೆ ಯುಗಾದಿ ನಂತರ ರಾಜ್ಯ ರಾಜಕಾರಣ ಬರುವ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕಳೆದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ನಂತರ, ರಾಜ್ಯ ರಾಜಕೀಯದಿಂದ ದೂರ ಉಳಿದಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮತ್ತೆ ಸಕ್ರಿಯವಾಗಿ ರಾಜ್ಯ ರಾಜಕೀಯದಲ್ಲಿ ಬರಲು ಮುನ್ಸೂಚನೆಯನ್ನು ನೀಡಿದ್ದಾರೆ. ಕೇಂದ್ರ ಸಚಿವರಾಗಿ ಇದ್ದುಕೊಂಡೇ, ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಿದ್ದಾರೆ.

ಯುಗಾದಿ ನಂತರ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಡುವ ಮೂಲಕ ಕನಕಪುರದಲ್ಲಿ ಡಿಕೆ ಬ್ರದರ್ಸ್ ಪ್ರಭಾವ ಕಡಿಮೆ ಮಾಡಲು ಗೌಡರು ಹೊಸ ದಾಳ ಉರುಳಿಸುವ ಸಾಧ್ಯತೆಯಿದೆ. ಈ ಹಿಂದೆ ಡಿ ಕೆ ಬ್ರದರ್ಸ್ ಗೆ ಸೋಲಿನ ರುಚಿ ತೋರಿಸಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಹೆಚ್ ಡಿ ದೇವೇಗೌಡ ಅಳಿಯ ಮಂಜುನಾಥ್ ಅವರನ್ನ ಕಣಕ್ಕಿಳಿಸುವ ಮೂಲಕ ಜಯ ಗಳಿಸಿದ್ರು, ಇದೀಗ 2028ರಲ್ಲಿ ಡಿಕೆ ಶಿವಕುಮಾರ್ ಅವರನ್ನು ಎದುರಿಸಲು ತಮ್ಮದೇ ಕುಟುಂಬದವರೊಬ್ಬರನ್ನು ಕಣಕ್ಕಿಳಿಸುವ ಸಂಬಂಧ, ದೇವೇಗೌಡ್ರು, ಕುಟುಂಬದ ಜೊತೆಗೆ ಮಾತುಕತೆಯನ್ನು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಡಿ ಕೆ ಶಿವಕುಮಾರ್ ಅವರ ಭದ್ರಕೋಟೆ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪುತ್ರಿ ಮತ್ತು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿಎನ್ ಮಂಜುನಾಥ್ ಪತ್ನಿ ಅನಸೂಯ ಅವರನ್ನು ಕಣಕ್ಕಿಳಿಸುವ ಸಂಬಂಧ, ದೇವೇಗೌಡರು ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಮಾಸ್ಟರ್ ಪ್ಲಾನ್ ನಡೆಸಿದ್ದಾರೆ ಎನ್ನಲಾಗಿದೆ. ಕನಕಪುರದಲ್ಲಿ ಅನಸೂಯ ಅವರ ಒಡನಾಟ ಚೆನ್ನಾಗಿರುವ ಹಿನ್ನಲೆಯಲ್ಲಿ ಅವರ ಹೆಸರು ಅಂತಿಮವಾದರೂ ಆಗಬಹುದು. ಅಲ್ಲದೇ ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರದಿಂದ, ದೇವೇಗೌಡ್ರ ಅಳಿಯ ಡಾ.ಮಂಜುನಾಥ್, ಭರ್ಜರಿ ಗೆಲುವನ್ನು ಸಾಧಿಸಿದ್ದರು. ಕನಕಪುರ, ರಾಮನಗರ ತಾಲೂಕುಗಳು, ಇದರ ವ್ಯಾಪ್ತಿಗೆ ಬರುವಂತದ್ದು. ಹಾಗಾಗಿ, ಅನುಸೂಯ ಅವರ ಗೆಲುವಿಗಾಗಿ ಹೆಚ್ಚಿನ ಓಡಾಟವನ್ನ ಗೌಡ್ರ ಕುಟುಂಬ ನಡೆಸಲಿದೆ ಎನ್ನಲಾಗಿದೆ.
2028 ರ ಚುನಾವಣೆಗೆ ಅಮಿತ್ ಶಾ ಮಾಸ್ಟರ್ ಪ್ಲಾನ್
ಈಗಾಗಲೇ 2024 ರ ಲೋಕಸಭಾ ಚುನಾವಣೆಯಿಂದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು, 2028ರಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿಯ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎನ್ನುವ ಟಾರ್ಗೆಟ್ ಅನ್ನು ಕೇಂದ ಗೃಹ ಸಚಿವ ಅಮಿತ್ ಶಾ ನೀಡಿದ್ದಾರೆ. ಇತ್ತ ಡಿ ಕೆ ಬ್ರದರ್ಸ್‌ಗೆ ಸೋಲಿನ ರುಚಿ ತೋರಿಸಲು ಅಮಿತ್ ಶಾ ಹಾಗೂ ಹೆಚ್ ಡಿ ದೇವೇಗೌಡ್ರು ಮಾಸ್ಟರ್ ಪ್ಲಾನ್ ನಡೆಸಿದ್ದು, ಅಮಿತ್ ಶಾ ಸೂಚನೆಯಂತೆ ಕನಕಪುರದಲ್ಲಿ ತಮ್ಮದೇ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸಲು ದೇವೇಗೌಡರು - ಕುಮಾರಸ್ವಾಮಿ ಮಾತುಕತೆಯನ್ನು ನಡೆಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.
Credit: Oneindia


Click it and Unblock the Notifications