ಈ ಮಾರ್ಚ್ ತಿಂಗಳು ವಾಹನ ತಯಾರಕ ಕಂಪನಿಗಳಿಗೆ ತುಂಬಾ ಮುಖ್ಯವಾಗಿದೆ. ವಿವಿಧ ಹೊಚ್ಚ ಹೊಸ ಕಾರುಗಳು ಬಿಡುಗಡೆಗೊಳಿಸಲು ತಯಾರಿ ಮಾಡಿಕೊಳ್ಳುತ್ತಿವೆ. ಬಹುಮುಖ್ಯವಾಗಿ ರೆನಾಲ್ಟ್ ಡಸ್ಟರ್, ಸ್ಕೋಡಾ ಕುಶಾಕ್ ಫೇಸ್‌ಲಿಫ್ಟ್, ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ ಹಾಗೂ ನಿಸ್ಸಾನ್ ಟೆಕ್ಟಾನ್ ಎಸ್‌ಯುವಿಗಳು ಅದ್ದೂರಿಯಾಗಿ ಬಿಡುಗಡೆಗೊಳ್ಳಲಿವೆ. ಇವುಗಳು ಒಂದಕ್ಕಿಂದ ಒಂದು ಅದ್ಭುತವಾಗಿದೆ. ಬನ್ನಿ, ಈ ಕಾರುಗಳ ನಿರೀಕ್ಷಿತ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ರೆನಾಲ್ಟ್ ಡಸ್ಟರ್ (Renault Duster):
ಇದೊಂದು ಹೊಸ ತಲೆಮಾರಿನ ಎಸ್‌ಯುವಿಯಾಗಿದೆ. ಮಾರ್ಚ್ 17ರಂದು ಬಿಡುಗಡೆಯಾಗಲಿದೆ. ರೂ.9.50 ಲಕ್ಷದಿಂದ ರೂ.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಈಗಾಗಲೇ, ನೂತನ 'ಡಸ್ಟರ್' ಅನಾವರಣಗೊಂಡಿದೆ. ತುಂಬಾ ಚೆನ್ನಾರುವ ವಿನ್ಯಾಸ ಹೊಂದಿದ್ದು, ನಾನಾ ಬಗೆಯ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 1.8-ಲೀಟರ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್), 1.3-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.0-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ.

ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಸ್ಕೋಡಾ ಕುಶಾಕ್ ಫೇಸ್‌ಲಿಫ್ಟ್ (Skoda Kushaq Facelift):
ಇದು ಮಾರ್ಚ್ ತಿಂಗಳಲ್ಲಿ ಮಾರಾಟಕ್ಕೆ ಬರಲಿದೆ. ಹಲವು ನವೀಕರಣಗಳನ್ನು ಪಡೆದಿರಲಿದ್ದು, ರೂ.10.59 ಲಕ್ಷದಿಂದ ರೂ.18.69 ಲಕ್ಷ ಬೆಲೆಯನ್ನು ಹೊಂದಿರಬಹುದು ಎಂದು ಹೇಳಲಾಗಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿರಲಿದೆ. 1-ಲೀಟರ್ ಪೆಟ್ರೋಲ್ & 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿರಲಿದೆ ಎಂದು ಹೇಳಲಾಗಿದೆ.

ನೂತನ 'ಕುಶಾಕ್ ಫೇಸ್‌ಲಿಫ್ಟ್' 5 ಆಸನಗಳನ್ನು ಹೊಂದಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದುಕೊಂಡಿರಲಿದೆ ಎಂದು ಹೇಳಲಾಗಿದೆ.
ಟೊಯೊಟಾ ಅರ್ಬನ್ ಕ್ರೂಸರ್ ಎಬೆಲ್ಲಾ ಇವಿ (Toyota Urban Cruiser Ebella EV):
ಈ ಎಲೆಕ್ಟ್ರಿಕ್ ಎಸ್‌ಯುವಿ ಸಹ ಮಾರ್ಚ್ ತಿಂಗಳಲ್ಲಿ ಬಿಡುಗಡೆಯಾಗಲಿದೆ. ರೂ.16.00 ಲಕ್ಷದಿಂದ ರೂ.19.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಕಳೆದ ತಿಂಗಳು ಹೊಸ 'ಎಬೆಲ್ಲಾ'ವನ್ನು ಪರಿಚಯಿಸಲಾಗಿತ್ತು. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) & 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 543 ಕಿ.ಮೀ ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ.

ಹೊಸ 'ಅರ್ಬನ್ ಕ್ರೂಸರ್ ಎಬೆಲ್ಲಾ' 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.1-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, 12-ಕಲರ್ ಆಂಬಿಯೆಂಟ್ ಲೈಟಿಂಗ್ ಮತ್ತು ಜೆಬಿಎಲ್ ಸೌಂಡ್ ಸಿಸ್ಟಮ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.
ನಿಸ್ಸಾನ್ ಟೆಕ್ಟಾನ್ (Nissan Tekton):
ಇದು 'ರೆನಾಲ್ಟ್ ಡಸ್ಟರ್'ನ್ನು ಆಧರಿಸಿರಲಿದೆ. ಇದೇ ಮಾರ್ಚ್‌ನಲ್ಲಿ ಮಾರಾಟಕ್ಕೆ ಬರುವ ಸಾಧ್ಯತೆಯಿದೆ. ರೂ.11.00 ಲಕ್ಷದಿಂದ ರೂ.18.00 ಲಕ್ಷ ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರಬಹುದು ಎಂದು ಊಹಿಸಲಾಗಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿರಲಿದೆ. 1.8-ಲೀಟರ್ ಹೈಬ್ರಿಡ್ ಪೆಟ್ರೋಲ್, 1.3-ಲೀಟರ್ ಟರ್ಬೊ ಪೆಟ್ರೋಲ್ & 1.0-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿಯಲಿದೆ ಎಂದು ಹೇಳಲಾಗಿದೆ.
ನೂತನ 'ಟೆಕ್ಟಾನ್' 5 ಆಸನಗಳನ್ನು ಒಳಗೊಂಡಿರಲಿದೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿರಬಹುದು ಎನ್ನಲಾಗಿದೆ.
Credit: Drivespark


Click it and Unblock the Notifications