ಹಣಕಾಸು ವಂಚಕರಿಂದ ತಪ್ಪಿಸಿಕೊಳ್ಳಬೇಕೆ? ಇಲ್ಲಿವೆ 8 ಮಾರ್ಗ

ದಿನನಿತ್ಯದ ಜೀವನದಲ್ಲಿ ಹಣಕಾಸಿನ ವಂಚನೆಯನ್ನು ಅನೇಕ ಸಂದರ್ಭಗಳಲ್ಲಿ ಎದುರಿಸಿರುತ್ತೇವೆ. ಒಟ್ಟಾರೆ ಲೆಕ್ಕಾಚಾರದ ಪ್ರಕಾರ ಸ್ನೇಹಿತರು, ಕುಟುಂಬದ ಸದಸ್ಯರು, ಸಂಬಂಧಿಕರು ಹಾಗೂ ನೆರೆಹೊರೆಯವರೇ ವಂಚನೆ/ಕಳ್ಳತನ ಮಾಡುತ್ತಾರೆ ಎಂಬುದು ಸಾಬಿತಾಗಿದೆ. ಅಂದರೆ ನಮ್ಮನ್ನು ಚೆನ್ನಾಗಿ ಬಲ್ಲವರು ಹೆಚ್ಚು ವಂಚನೆ ಮಾಡುತ್ತಾರೆ.

ಹೀಗಾಗಿ ಮಾಹಿತಿಯನ್ನು ಹಂಚಿಕೊಳ್ಳುವಾಗ ತುಂಬಾ ಹುಷಾರಾಗಿ ಇರಬೇಕಾಗುತ್ತದೆ. ಅದಕ್ಕೆ ಸಂಬಂಧಿಸಿದಂತೆ ಅನುಸರಿಸಬೇಕಾದ ಅನೇಕ ಮಾರ್ಗಗಳಿದ್ದು, ಅವುಗಳನ್ನು ಪಾಲಿಸಿದರೆ ಹಣಕಾಸು ವಂಚನೆಯಿಂದ ತಪ್ಪಿಸಿಕೊಳ್ಳಬಹುದಾಗಿದೆ. ಅವುಗಳು ಇಲ್ಲಿವೆ ನೋಡಿ...

ಪರಿಚಿತ/ಅಪರಿಚಿತರಿಗೆ ಪಾಸ್ವರ್ಡ್ ಹೇಳಬೇಡಿ

ಪರಿಚಿತ/ಅಪರಿಚಿತರಿಗೆ ಪಾಸ್ವರ್ಡ್ ಹೇಳಬೇಡಿ

ಪ್ರಾಥಮಿಕ ಹಂತದಲ್ಲಿ ಪರಿಚಿತ ಅಥವಾ ಅಪರಿಚಿತ ವ್ಯಕ್ತಿಗಳಿಗೆ ನಿಮ್ಮ ಪಾಸ್ವರ್ಡ್ ಮಾಹಿತಿಯನ್ನು ಕೊಡಬಾರದು.
ನಾವು ವ್ಯಕ್ತಿಗಳ ದುರುದ್ದೇಶಗಳ ಬಗ್ಗೆ ತಿಳಿದುಕೊಳ್ಳಲು ಸಾಧ್ಯ ಇರುವುದಿಲ್ಲ. ಕುಟುಂಬದ ವ್ಯಕ್ತಿಗಳು ಮತ್ತು ಕೆಲ ವಿಶ್ವಾಸಾರ್ಹ ಸ್ನೇಹಿತರನ್ನು ಹೊರತು ಪಡಿಸಿ ಹಣಕಾಸು ಸಂಗತಿಗಳನ್ನು ಇನ್ಯಾರೊಂದಿಗೂ ಹಂಚಿಕೊಳ್ಳಬಾರದು.
ನಮಗೆ ಗೊತ್ತಿರುವಂತೆ ಹೆಚ್ಚಿನ ಹಣಕಾಸು ವಂಚನೆ/ಕಳ್ಳತನ ಪರಿಚಯದವರಿಂದಲೇ ಆಗುತ್ತದೆ.

ಇ-ಮೇಲ್ ಭದ್ರತೆ

ಇ-ಮೇಲ್ ಭದ್ರತೆ

ಬ್ಯಾಂಕಿನವರು ನೀಡುವ ಇ-ಮೇಲ್ ಐಡಿಗಳನ್ನು ಸಹ ಹೆಚ್ಚು ಬಳಸಬಾರದು. ಅದರಿಂದಾಗಿ ಹೆಚ್ಚೆಚ್ಚು ಮೋಸ ಹೋಗಬೇಕಾಗುತ್ತದೆ. ಇ-ಮೇಲೆ ಮುಖಾಂತರ ಯಾವುದೇ ಸ್ಟೇಟ್ಮೆಂಟ್ ಗಳನ್ನು ತೆರೆಯಬಾರದು ಇದರಿಂದ ಅಪಾಯವೇ ಹೆಚ್ಚು. ಇ-ಮೇಲ್ ಗಳ ಮೇಲೆ ಕ್ಲಿಕ್ ಮಾಡುವುದರಿಂದ ಅವು ಬೇರೆ ವೆಬ್ಸೈಟ್ ಗೆ ಲಿಂಕ್ ಆಗುತ್ತವೆ. ಇದರಿಂದಾಗಿ ನಮ್ಮ ಅಂಕಿಅಂಶ ಹಾಗೂ ಮಾಹಿತಿಯ ಸೋರಿಕೆ ಆಗುತ್ತದೆ. ಇದರ ಜತೆ ಪ್ರಚಾರದ ಇ-ಮೇಲ್ ಗಳು ಸಹ ಬರುತ್ತವೆ. ಆದರಿಂದಾಗಿ ತುಂಬಾ ಜಾಗೂರತೆಯಿಂದ ಇರಬೇಕಾಗುತ್ತದೆ.

ಆಗಾಗ್ಗೆ ಪಾಸ್ವರ್ಡ್ ಗಳನ್ನು ಬದಲಾಯಿಸುತ್ತಿರಬೇಕು

ಆಗಾಗ್ಗೆ ಪಾಸ್ವರ್ಡ್ ಗಳನ್ನು ಬದಲಾಯಿಸುತ್ತಿರಬೇಕು

ನಾವು ಹಣಕಾಸು ವ್ಯವಹಾರದ ಸಂದರ್ಭಗಳಲ್ಲಿ ಬಳಸುವ ಪಾಸ್ವರ್ಡ್ ಗಳನ್ನು ಆಗಾಗ್ಗೆ ಬದಲಾಯಿಸುತ್ತಿರಬೇಕು. ಅದರಲ್ಲೂ ಹಿರಿಯ ನಾಗರಿಕರು ಇದನ್ನು ಖಚಿತಪಡಿಸಿಕೊಳ್ಳುತ್ತಿರಬೇಕು. ಇದರಿಂದಾಗಿ ಇನ್ನೊಬ್ಬರೂ ನಿಮ್ಮ ಪಾಸ್ವರ್ಡ್ ಊಹಿಸಲು ಸಾಧ್ಯ ಇರುವುದಿಲ್ಲ. ಇದು ಬ್ಯಾಂಕ್ ಸಂಬಂಧಿ ವ್ಯವಹಾರಗಳಲ್ಲೂ ಪಾಲಿಸಬೇಕು.

ಬ್ಯಾಂಕ್ ಸ್ಟೇಟ್ಮೆಂಟ್(ಹೇಳಿಕೆ)

ಬ್ಯಾಂಕ್ ಸ್ಟೇಟ್ಮೆಂಟ್(ಹೇಳಿಕೆ)

ಕ್ರೆಡಿಟ್ ಕಾರ್ಡ್ ಮತ್ತು ಬ್ಯಾಂಕ್ ಸ್ಟೇಟ್ಮೆಂಟ್ ಗಳಿಗೆ ಸಂಬಂಧಿಸಿದ ಲಿಖಿತ ಪ್ರತಿಗಳನ್ನು ಸುರಕ್ಷಿತವಾಗಿ ಇಡುವುದು ಅಥವಾ ಅದನ್ನು ನಾಶ ಪಡಿಸುವುದು ಉತ್ತಮ. ಇದರಿಂದಾಗಿ ಗುರುತು ಮತ್ತು ಬ್ಯಾಂಕಿನ ವಂಚನೆ ತಪ್ಪಿಸಿಕೊಳ್ಳಬಹುದು. ಇಲ್ಲದಿದ್ದರೆ ದುರುಪಯೋಗ ಆಗುವ ಸಾಧ್ಯತೆ ಹೆಚ್ಚಿರುತ್ತದೆ.

ಕ್ರೆಡಿಟ್ ಕಾರ್ಡ್ ವೆಚ್ಚಗಳನ್ನು ನಿಯಂತ್ರಿಸಿ

ಕ್ರೆಡಿಟ್ ಕಾರ್ಡ್ ವೆಚ್ಚಗಳನ್ನು ನಿಯಂತ್ರಿಸಿ

ಕೆಲವೊಮ್ಮೆ ಕ್ರೆಡಿಟ್ ಕಾರ್ಡ್ ಗಳನ್ನು ಹ್ಯಾಕ್ ಮಾಡುವವರು ನಿಮ್ಮ ಗಮನಕ್ಕೆ ಬರದಂತೆ ಕ್ರೆಡಿಟ್ ಕಾರ್ಡ್ ಬಳಸಿ ಹಣವನ್ನು ತೆಗೆದುಕೊಳ್ಳಬಹುದು.
ಕ್ರೆಡಿಟ್ ಕಾರ್ಡಿನ ಖರ್ಚುವೆಚ್ಚಗಳ ಬಗ್ಗೆ ನಿಮಗೆ ಸರಿಯಾದ ಜ್ಞಾನ ಮತ್ತು ಮಾಹಿತಿ ಇರಬೇಕಾಗುತ್ತದೆ. ಆಗಾಗ್ಗೆ ಕ್ರೆಡಿಟ್ ಕಾರ್ಡ್ ಪರಿಶೀಲನೆ ಮಾಡುತ್ತಿರುವುದರಿಂದ ದುರುಪಯೋಗ ಆಗಿದ್ದಲ್ಲಿ ತಿಳಿಯಬಹುದು. ದುರುಪಯೋಗದ ಸಂದರ್ಭದಲ್ಲಿ ಕಂಪನಿಯ ಗಮನಕ್ಕೆ ತಂದು ಕ್ರೆಡಿಟ್ ಕಾರ್ಡ್ ವಂಚನೆಯನ್ನು ಬಗೆಹರಿಸಿಕೊಳ್ಳಬೆಕಾಗುತ್ತದೆ.

ಶಾಪಿಂಗ್ ಮಾಡುವ ವೆಬ್ಸೈಟ್ ಗಳನ್ನು ಪರಿಶೀಲಿಸುತ್ತಿರಿ

ಶಾಪಿಂಗ್ ಮಾಡುವ ವೆಬ್ಸೈಟ್ ಗಳನ್ನು ಪರಿಶೀಲಿಸುತ್ತಿರಿ

ಶಾಪಿಂಗ್ ವೆಬ್ಸೈಟ್ ಗಳನ್ನು ಬಳಸುವಾಗ ತುಂಬಾ ಜಾಗರೂಕತೆಯಿಂದ ವ್ಯವಹರಿಸಬೇಕಾಗುತ್ತದೆ. ಏಕೆಂದರೆ ವಂಚಕರು ವೆಬ್ಸೈಟ್ ಗಳನ್ನು ಹ್ಯಾಕ್ ಮಾಡುವುದರಲ್ಲಿ ನಿಸ್ಸೀಮರಾಗಿರುತ್ತಾರೆ.
ಕೆಲ ನಕಲಿ ವೆಬ್ಸೈಟ್ ಗಳಿದ್ದು ಅವುಗಳಲ್ಲಿ ಶಾಪಿಂಗ್ ಮಾಡುವುದರಿಂದ ನಿಮ್ಮ ಕ್ರೆಡಿಟ್ ಕಾರ್ಡ್ ಮಾಹಿತಿ ಎಲ್ಲವು ಅವರಿಗೆ ಲಭ್ಯವಾಗುತ್ತದೆ. ಇವೆಲ್ಲವೂ ವಂಚನೆಯ ಅನೆಕ ಮುಖಗಳಾಗಿದ್ದು ಇವುಗಳಿಂದ ತಪ್ಪಿಸಿಕೊಳ್ಳುವುದು ನಿಮ್ಮ ಕರ್ತವ್ಯ.

ವೈರಸ್(Anti Virus Software ) ಸಾಪ್ಟವೇರ್ ಬಳಸಿ

ವೈರಸ್(Anti Virus Software ) ಸಾಪ್ಟವೇರ್ ಬಳಸಿ

ಉತ್ತಮವಾದ ವೈರಸ್(Anti Virus Software ) ಸಾಪ್ಟವೇರ್ ಖರೀದಿಸಿ. ಇದೊಂದು ಸಮಗ್ರವಾದ ಉತ್ತಮ ತಂತ್ರಾಂಶವಾಗಿದ್ದು ಕೇವಲ ಅಂತರ್ಜಾಲ ವಿರೋಧಿ ತಂತ್ರಾಂಶ ಮಾತ್ರ ಅಲ್ಲ. ಬದಲಾಗಿ ಸಂಪೂರ್ಣವಾದ ಫೈರ್ ವಾಲ್ ರಕ್ಷಣೆಯನ್ನು ಹೊಂದಿರಬೆಕು.
ಇದು ಎಲ್ಲ ಅಂಕಿಅಂಶಗಳನ್ನು ಸುರಕ್ಷಿತವಾಗಿಡಬೇಕು. ಜತೆಗೆ ವಂಚಕರು/ಕಳ್ಳರು ದುರುಪಯೋಗ ಮಾಡದಂತೆ ರಕ್ಷಿಸುವಂತಿರಬೇಕು.

ಫೋನಿನಲ್ಲಿ ವೈಯಕ್ತಿಕ ಮಾಹಿತಿ ನೀಡಬೇಡಿ

ಫೋನಿನಲ್ಲಿ ವೈಯಕ್ತಿಕ ಮಾಹಿತಿ ನೀಡಬೇಡಿ

ಯಾರಿಗೂ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಯಾವುದೇ ಕಾರಣಕ್ಕೂ ಕೊಡಬೆಡಿ. ಸೇವೆ ಒದಗಿಸುವವರಿಗೆ ಅನವಶ್ಯಕ ವಿಷಯಗಳಿಗಾಗಿ ತೊಂದರೆ ಕೊಡಬೇಡಿ("Do not disturb") ಎಂದು ನೋಂದಣಿ ಮಾಡಿಸಿಕೊಳ್ಳಿ. ಇದರಿಂದಾಗಿ ಅನವಶ್ಯಕ ಮತ್ತು ಫೇಕ್ ಕರೆಗಳಿಂದ ತಪ್ಪಿಸಿಕೊಳ್ಳಬಹುದು. ಅಲ್ಲದೇ ವಂಚಕರಿಂದಲೂ ಮುಕ್ತಿ ಪಡೆಯಬಹುದು.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+