ಸಾಮಾನ್ಯ ಜನರಿಗೆ ಉಳಿತಾಯ ಖಾತೆಯು ಕಷ್ಟಪಟ್ಟು ಗಳಿಸಿದ ಹಣವನ್ನು ಸಂಗ್ರಹ ಮಾಡಿ ಇಟ್ಟುಕೊಳ್ಳಲು ಉತ್ತಮವಾದ ಆಯ್ಕೆಯಾಗಿದೆ. ನಾವು ಬೇರೆ ಕಡೆ ಮಾಡುವ ಹೂಡಿಕೆಯಿಂದಾಗಿ ಉತ್ತಮ ರಿಟರ್ನ್ ಅನ್ನು ಪಡೆಯಲು ಸಾಧ್ಯವಾಗದಿದ್ದರೂ ಕೂಡಾ ನಾವು ಕಷ್ಟಪಟ್ಟು ಸಂಪಾದನೆ ಮಾಡಿದ ಮೊತ್ತವನ್ನು ನಾವು ಈ ಉಳಿತಾಯ ಖಾತೆಯಲ್ಲಿ ಇಟ್ಟುಕೊಳ್ಳಬಹುದಾಗಿದೆ. ಅಗತ್ಯವಿದ್ದಾಗ ಈ ಮೊತ್ತವನ್ನು ವಿತ್‌ಡ್ರಾ ಮಾಡಿಕೊಳ್ಳಬಹುದಾಗಿದೆ.
ಕಡಿಮೆ ಆದಾಯದ ಹೊರತಾಗಿಯೂ ಕೂಡಾ ಉಳಿತಾಯ ಖಾತೆಗಳು ಗ್ರಾಹಕರಿಗೆ ನೀಡುವ ಅನುಕೂಲತೆ ಮತ್ತು ವಿವಿಧ ಪ್ರಯೋಜನಗಳ ಮೂಲಕ ಜನಪ್ರಿಯವಾಗಿದೆ. ಆದರೆ ನೀವು ಉಳಿತಾಯ ಖಾತೆಗೆ ಜಮೆ ಮಾಡುವ ಮೊತ್ತಕ್ಕೆ ನಿಗದಿತವಾಗಿ ಕೆಲವು ಬ್ಯಾಂಕುಗಳಲ್ಲಿ ಆಕರ್ಷಕವಾದ ಬಡ್ಡಿದರವನ್ನು ನೀಡಲಾಗುತ್ತದೆ ಎಂಬುವುದು ತಿಳಿದಿದೆಯೇ?. ಉಳಿತಾಯ ಖಾತೆಯ ಮೇಲೆ ಶೇಕಡ 7ರಷ್ಟು ಬಡ್ಡಿದರ ನೀಡುವ ಬ್ಯಾಂಕುಗಳ ಬಗ್ಗೆ ಇಲ್ಲಿದೆ ವಿವರ...

ಶೇಕಡ 7ರಷ್ಟು ಬಡ್ಡಿದರ ನೀಡುವ ಬ್ಯಾಂಕುಗಳು
ಏರ್‌ಟೆಲ್ ಪೇಮೆಂಟ್ಸ್ ಬ್ಯಾಂಕು: ಸಂಪೂರ್ಣ ಡಿಜಿಟಲ್ ಮತ್ತು ಪೇಪರ್‌ಲೆಸ್ ಬ್ಯಾಂಕ್ ಆಗಿರುವ ಏರ್‌ಟೆಲ್ ಪೇಮೆಂಟ್ಸ್ ಬ್ಯಾಂಕ್ 1 ಲಕ್ಷದಿಂದ 2 ಲಕ್ಷ ರೂಪಾಯಿವರೆಗಿನ ಬ್ಯಾಲೆನ್ಸ್ ಹೊಂದಿರುವ ಉಳಿತಾಯ ಖಾತೆಗಳ ಮೇಲೆ ಉತ್ತಮ ಬಡ್ಡಿದರವನ್ನು ನೀಡುತ್ತದೆ. ಉಳಿತಾಯ ಖಾತೆಯ ಮೇಲೆ ಶೇಕಡ 7ರಷ್ಟು ಬಡ್ಡಿದರವನ್ನು ಏರ್‌ಟೆಲ್ ಪೇಮೆಂಟ್ಸ್ ಬ್ಯಾಂಕು ನೀಡುತ್ತದೆ. ಒಂದು ಲಕ್ಷ ರೂಪಾಯಿವರೆಗೆ ಬ್ಯಾಲೆನ್ಸ್ ಮೇಲೆ ಬ್ಯಾಂಕ್ ಶೇಕಡ 2ರಷ್ಟು ಬಡ್ಡಿದರವನ್ನು ನೀಡುತ್ತದೆ.
ಇಎಸ್‌ಎಎಫ್ ಸ್ಮಾಲ್ ಫೈನಾನ್ಸ್ ಬ್ಯಾಂಕು: ನೀವು ಉತ್ತಮ ಆದಾಯವನ್ನು ಬಯಸುತ್ತಿದ್ದರೆ ಇಎಸ್‌ಎಎಫ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ನಿಮಗೆ ಉತ್ತಮವಾದ ಆಯ್ಕೆಯಾಗಿದೆ. ಈ ಬ್ಯಾಂಕ್‌ನಲ್ಲಿ ಉಳಿತಾಯ ಖಾತೆಯಲ್ಲಿನ 5 ಲಕ್ಷ ರೂಪಾಯಿವರೆಗಿನ ಮೊತ್ತಕ್ಕೆ ಶೇಕಡ 4ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ. 15 ಲಕ್ಷ ರೂಪಾಯಿವರೆಗಿನ ಮೊತ್ತಕ್ಕೆ ಶೇಕಡ 6.5ರಷ್ಟು ಬಡ್ಡಿದರವನ್ನು ಇಎಸ್‌ಎಎಫ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ನೀಡುತ್ತದೆ.
ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕು: ಉಳಿತಾಯ ಖಾತೆಯಿಂದ ಉತ್ತಮ ರಿಟರ್ನ್ ಪಡೆಯಲು ಬಯಸುವವರಿಗೆ ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಉತ್ತಮ ಆಯ್ಕೆಯಾಗಿದೆ. ಈ ಬ್ಯಾಂಕ್‌ನಲ್ಲಿ 1 ಲಕ್ಷ ರೂಪಾಯಿವರೆಗಿನ ಬ್ಯಾಲೆನ್ಸ್ ಮೇಲೆ ಶೇಕಡ 3.5ರಷ್ಟು ಬಡ್ಡಿದರವನ್ನು ಪಡೆಯಬಹುದಾಗಿದೆ. ಒಂದು ಲಕ್ಷ ರೂಪಾಯಿಯಿಂದ 5 ಲಕ್ಷ ರೂಪಾಯಿವರೆಗಿನ ಉಳಿತಾಯದ ಮೇಲೆ ಬ್ಯಾಂಕ್‌ನಲ್ಲಿ ಶೇಕಡ 5.25ರಷ್ಟು ಬಡ್ಡಿದರ ನೀಡಲಾಗುತ್ತದೆ. 5 ಲಕ್ಷ ರೂಪಾಯಿಗಿಂತ ಅಧಿಕ ಮೊತ್ತದ ಡೆಪಾಸಿಟ್‌ಗೆ ಶೇಕಡ 7ರಷ್ಟು ಬಡ್ಡಿದರ ನೀಡಲಾಗುತ್ತದೆ.
ಫಿನ್‌ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕು: ಆಕರ್ಷಕ ಬಡ್ಡಿದರದಿಂದಾಗಿ ಫಿನ್‌ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕು ಜನಪ್ರಿಯವಾಗಿದೆ. 1 ಲಕ್ಷ ರೂಪಾಯಿಯಿಂದ 5 ಲಕ್ಷ ರೂಪಾಯಿವರೆಗಿನ ಉಳಿತಾಯ ಖಾತೆಯ ಬ್ಯಾಲೆನ್ಸ್ ಮೇಲೆ ಫಿನ್‌ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕು ಶೇಕಡ 6.11ರಷ್ಟು ಬಡ್ಡಿದರ ನೀಡಲಾಗುತ್ತದೆ. 5 ಲಕ್ಷ ರೂಪಾಯಿಗಿಂತ ಅಧಿಕ ಮೊತ್ತದ ಮೇಲೆ ಶೇಕಡ 7.11ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ.
ಸೂರ್ಯೋಧಯ ಸ್ಮಾಲ್ ಫೈನಾನ್ಸ್ ಬ್ಯಾಂಕು: ಉಳಿತಾಯ ಖಾತೆಯ ಮೇಲೆ ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಉತ್ತಮ ಬಡ್ಡಿದರವನ್ನು ನೀಡುತ್ತದೆ. ಒಂದು ಲಕ್ಷ ರೂಪಾಯಿಯಿಂದ 5 ಲಕ್ಷ ರೂಪಾಯಿಯ ಮೊತ್ತದ ಮೇಲೆ ಶೇಕಡ 6.75ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ. ಇನ್ನು ಐದು ಲಕ್ಷ ರೂಪಾಯಿಗಿಂತ ಅಧಿಕ ಬ್ಯಾಲೆನ್ಸ್ ಮೇಲೆ ಬ್ಯಾಂಕ್ ಶೇಕಡ 7ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ.
ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕು: ಉಳಿತಾಯ ಖಾತೆಯ ಮೇಲೆ ಅಧಿಕ ಬಡ್ಡಿದರವನ್ನು ನೀಡುವ ಬ್ಯಾಂಕುಗಳಲ್ಲಿ ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕು ಕೂಡಾ ಒಂದಾಗಿದೆ. ಎಯು ಸ್ಮಾಲ್ ಫೈನಾನ್ಸ್ ಬ್ಯಾಂಕು 25 ಲಕ್ಷ ರೂಪಾಯಿಗಿಂತ ಅಧಿಕ ಮೊತ್ತದ ಆದರೆ ಒಂದು ಕೋಟಿ ರೂಪಾಯಿಗಿಂತ ಕಡಿಮೆ ಮೊತ್ತದ ಬ್ಯಾಲೆನ್ಸ್‌ಗಳ ಮೇಲೆ ಶೇಕಡ 7ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ.


Click it and Unblock the Notifications