ಈ ಹಿಂದೆ ದಸರಾಕ್ಕೂ ಮುನ್ನ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿಎ) ಯಲ್ಲಿ ಶೇಕಡ 4 ರಷ್ಟು ಹೆಚ್ಚಳಕ್ಕೆ ಕೇಂದ್ರ ಸಂಪುಟವು ಅನುಮೋದನೆ ನೀಡಿದೆ. ಅದಾದ ಬಳಿಕ ಒಡಿಶಾ, ಕರ್ನಾಟಕದಿಂದ ತಮಿಳುನಾಡುವರೆಗೆ ವಿವಿಧ ರಾಜ್ಯಗಳು ತಮ್ಮ ಸರ್ಕಾರಿ ನೌಕರರಿಗೆ ದೀಪಾವಳಿಗೆ ಮುಂಚಿತವಾಗಿ ತುಟ್ಟಿಭತ್ಯೆಯನ್ನು ಹೆಚ್ಚಿಸಿವೆ.
ಕೆಲವು ರಾಜ್ಯಗಳು ಶೇಕಡ 3 ರಷ್ಟು ಡಿಎ ಹೆಚ್ಚಳವನ್ನು ಘೋಷಿಸಿದರೆ, ಇತರ ರಾಜ್ಯಗಳು ತಮ್ಮ ಉದ್ಯೋಗಿಗಳಿಗೆ ಶೇಕಡ 4 ರಷ್ಟು ತುಟ್ಟಿಭತ್ಯೆಯನ್ನು ಘೋಷಣೆ ಮಾಡಿದ್ದಾರೆ. ಕಳೆದ ವಾರ ಕೇಂದ್ರವು ಸರ್ಕಾರಿ ನೌಕರರಿಗೆ ಶೇಕಡ 4 ರಷ್ಟು ಡಿಎ ಹೆಚ್ಚಿಸಿದ ನಂತರ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕೇಂದ್ರದ ಈ ನಿರ್ಧಾರದಿಂದ, ಕೇಂದ್ರ ಸರ್ಕಾರಿ ನೌಕರರ ಡಿಎಯು ಈಗಿರುವ ಶೇಕಡ 42 ರಿಂದ ಶೇಕಡ 46 ಕ್ಕೆ ಏರಿದೆ. ಹೆಚ್ಚಳವು ಜುಲೈ 1, 2023 ರಿಂದ ಜಾರಿಗೆ ಬರಲಿದೆ. ಯಾವೆಲ್ಲ ರಾಜ್ಯಗಳಲ್ಲಿ ತಮ್ಮ ಉದ್ಯೋಗಿಗಳಿಗೆ ಡಿಎ ಹೆಚ್ಚಿಸಲಾಗಿದೆ ಎಂಬ ವಿವರ ಇಲ್ಲಿದೆ ಮುಂದೆ ಓದಿ...
ಶೇಕಡ 4ರಷ್ಟು ಡಿಎ ಏರಿಸಿದ ತಮಿಳುನಾಡು
ಬುಧವಾರ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಜುಲೈ 1, 2023 ರಿಂದ ಜಾರಿಗೆ ಬರುವಂತೆ ಸರ್ಕಾರಿ ನೌಕರರಿಗೆ ಶೇಕಡ 4 ರಷ್ಟು ಡಿಎ ಹೆಚ್ಚಳವನ್ನು ಘೋಷಿಸಿದರು. ಈ ಕ್ರಮವು ಸುಮಾರು 16 ಲಕ್ಷ ರಾಜ್ಯ ಸರ್ಕಾರಿ ನೌಕರರು, ಶಿಕ್ಷಕರು, ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ರಾಜ್ಯ ಸರ್ಕಾರ ಹೇಳಿದೆ.
ತಮಿಳುನಾಡು ಸರ್ಕಾರವು ಈ ವರ್ಷದ ಮೇ ತಿಂಗಳಲ್ಲಿ ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇಕಡ 4 ರಷ್ಟು ಡಿಎ ಅನ್ನು ಹೆಚ್ಚಿಸಿದೆ. ಡಿಎಯನ್ನು ಶೇಕಡ 42 ರಿಂದ ಶೇಕಡ 46 ಕ್ಕೆ ಹೆಚ್ಚಿಸಲಾಗಿದೆ.
ಡಿಎ ಶೇಕಡ 4 ರಷ್ಟು ಹೆಚ್ಚಿಸಿದ ಒಡಿಶಾ
ಕಳೆದ ವಾರ, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ರಾಜ್ಯದ ಉದ್ಯೋಗಿಗಳಿಗೆ ತುಟ್ಟಿಭತ್ಯೆಯನ್ನು ಶೇಕಡ 4 ರಷ್ಟು ಹೆಚ್ಚಿಸಿದೆ. ಈ ಹೆಚ್ಚಳದೊಂದಿಗೆ, ಡಿಎ ಮತ್ತು ಡಿಆರ್ ಈಗ ಶೇಕಡ 42 ರಿಂದ ಶೇಕಡ 46 ಕ್ಕೆ ಏರಿದೆ. ಈ ನೂತನ ಡಿಎ ಏರಿಕೆ ಜುಲೈ 1, 2023 ರಿಂದ ಜಾರಿಗೆ ಬರಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಡಿಎ ಹೆಚ್ಚಳವು 4.5 ಲಕ್ಷ ರಾಜ್ಯ ಸರ್ಕಾರಿ ನೌಕರರು ಮತ್ತು ಒಡಿಶಾದ 3.5 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವನ್ನು ನೀಡುತ್ತದೆ.
ಶೇಕಡ 3 ರಷ್ಟು ಡಿಎ ಹೆಚ್ಚಿಸಿದ ಕರ್ನಾಟಕ
ಕಳೆದ ಶನಿವಾರ, ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಶೇಕಡ 3.75 ರಷ್ಟು ಹೆಚ್ಚಿಸಿದೆ. ತುಟ್ಟಿ ಭತ್ಯೆಯನ್ನು ಈಗಿರುವ ಶೇಕಡ 35ರಿಂದ ಶೇಕಡ 38.75ಕ್ಕೆ ಪರಿಷ್ಕರಿಸುತ್ತಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಹೆಚ್ಚಳದಿಂದ ರಾಜ್ಯ ಸರ್ಕಾರವು 1,109 ಕೋಟಿ ರೂಪಾಯಿ ವೆಚ್ಚವನ್ನು ವ್ಯಯಿಸಬೇಕಾಗಿದೆ.
ನೌಕರರ ಸಂಘಗಳ ನಿರಂತರ ಬೇಡಿಕೆ ಬಳಿಕ ರಾಜ್ಯ ಸರ್ಕಾರವು ಈ ವರ್ಷದ ಮಾರ್ಚ್‌ನಲ್ಲಿ ಮೂಲ ವೇತನವನ್ನು ಶೇಕಡ 17 ರಷ್ಟು ಹೆಚ್ಚಿಸಿದೆ. ನಂತರ ರಾಜ್ಯವು ಹಳೆಯ ಪಿಂಚಣಿ ಯೋಜನೆಗೆ (ಒಪಿಎಸ್) ಹಿಂತಿರುಗಿಸುವ ಕಾರ್ಯಸಾಧ್ಯತೆಯನ್ನು ಅಧ್ಯಯನ ಮಾಡಲು ಸಮಿತಿಯನ್ನು ರಚಿಸುವುದಾಗಿ ಘೋಷಿಸಿತು.
ಇನ್ನು ಕೇಂದ್ರ ಸರ್ಕಾರವು ತುಟ್ಟಿಭತ್ಯೆಯನ್ನು ಶೇಕಡ 3 ರಷ್ಟು ಹೆಚ್ಚಿಸುವ ನಿರೀಕ್ಷೆಯಿತ್ತು. ಆದರೆ ತುಟ್ಟಿಭತ್ಯೆಯನ್ನು ಶೇಕಡ 4 ರಷ್ಟು ಏರಿಕೆ ಮಾಡಲಾಗುತ್ತಿದೆ. ಈ ನೂತನ ಡಿಎ ಏರಿಕೆಯು ಜುಲೈ 1, 2023 ರಿಂದ ಜಾರಿಗೆ ಬರಲಿದೆ. ಅಂದರೆ ಉದ್ಯೋಗಿಗಳು ಅಕ್ಟೋಬರ್ ತಿಂಗಳಿನಿಂದ ಅಧಿಕ ವೇತನವನ್ನು ಪಡೆಬಹುದು. ಜೊತೆಗೆ ಜುಲೈನಿಂದ ಸೆಪ್ಟೆಂಬರ್‌ವರೆಗಿನ ಬಾಕಿಯನ್ನು ಪಡೆಯಬಹುದು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications