ನಮ್ಮ ಎಲ್ಲ ವಹಿವಾಟುಗಳಿಗೆ ಪ್ರಸ್ತುತ ಆಧಾರ್ ಕಾರ್ಡ್ ಅತೀ ಪ್ರಮುಖವಾಗಿದೆ. ಎಲ್ಲ ಪ್ರಮುಖ ದಾಖಲೆಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ ಮಾಡಲಾಗುತ್ತಿದೆ. ಈ ನಡುವೆ ಹತ್ತು ವರ್ಷಕ್ಕಿಂತ ಹಳೆಯದಾದ ಆಧಾರ್ ಕಾರ್ಡ್ ಅನ್ನು ಅಪ್‌ಡೇಟ್ ಮಾಡುವುದು ಕಡ್ಡಾಯವಾಗಿದೆ.
ಆಧಾರ್ ಕಾರ್ಡ್ ಅಪ್‌ಡೇಟ್ ಮಾಡುವವರಿಗೆ ಆನ್‌ಲೈನ್ ಮೂಲಕ ಉಚಿತವಾಗಿ ಅಪ್‌ಡೇಟ್ ಮಾಡಲು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಇತ್ತೀಚೆಗೆ ಅವಕಾಶ ನೀಡಿದೆ. ಆದರೆ ಅದಕ್ಕೆ ಗಡುವನ್ನು ಕೂಡಾ ನಿರ್ಧಾರ ಮಾಡಲಾಗಿದೆ. ಆ ಗಡುವು ಸಮೀಪಿಸುತ್ತಿದೆ.

ಡಿಜಿಟಲ್ ಇಂಡಿಯಾ ಯೋಜನೆಯ ಭಾಗವಾಗಿ ಯುಐಡಿಎಐ ಮಾರ್ಚ್‌ನಲ್ಲಿ ಈ ಉಚಿತ ವ್ಯವಸ್ಥೆಯ ನಿರ್ಧಾರವನ್ನು ತೆಗೆದುಕೊಂಡಿದೆ. ಮೈಆಧಾರ್ ಪೋರ್ಟಲ್‌ನಲ್ಲಿ ಉಚಿತ ಡಾಕ್ಯುಮೆಂಟ್ ಅಪ್‌ಡೇಟ್ ಲಾಭವನ್ನು ಜನರು ಪಡೆಯಬಹುದಾಗಿದೆ. ಮಾರ್ಚ್ 15, 2023ರಿಂದ ಜೂನ್ 14, 2023ರವರೆಗೆ ಈ ಯುಐಡಿಎಐನ ಉಚಿತ ಸೇವೆಯು ಲಭ್ಯವಿದೆ.
ಈ ಸೇವೆಯು ಮೈಆಧಾರ್ ಪ್ಲಾಟ್‌ಫಾರ್ಮ್‌ನಲ್ಲಿ ಮಾತ್ರ ಉಚಿತವಾಗಿ ಲಭ್ಯವಾಗುತ್ತದೆ ಎಂಬುವುದು ತಿಳಿದಿರಿ. ಈ ಹಿಂದೆ ಇರುವಂತೆಯೇ ನೀವು ಆಧಾರ್ ಕೇಂದ್ರಗಳಲ್ಲಿ ಆಧಾರ್ ಕಾರ್ಡ್ ಅಪ್‌ಡೇಟ್ ಮಾಡುವುದಾದರೆ 50 ರೂಪಾಯಿಯನ್ನು ಪಾವತಿ ಮಾಡುವುದು ಕಡ್ಡಾಯವಾಗಿದೆ.
ಆಧಾರ್ ಕಾರ್ಡ್ ಅಪ್‌ಡೇಟ್ ಮಾಡುವುದು ಹೇಗೆ?
ಹಂತ 1: ಯುಐಡಿಎಐನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
ಹಂತ 2: 'My Aadhaar' ಮೇಲೆ ಕ್ಲಿಕ್ ಮಾಡಿ
ಹಂತ 3: 'Update Your Aadhaar' ಅನ್ನು ಆಯ್ಕೆ ಮಾಡಿಕೊಳ್ಳಿ
ಹಂತ 4: 'Update demographics data online' ಮೇಲೆ ಕ್ಲಿಕ್ ಮಾಡಿ
ಹಂತ 5: 'Proceed to update Aadhaar' ಅನ್ನು ಬಳಿಕ ಆಯ್ಕೆ ಮಾಡಿ
ಹಂತ 6: ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ
ಹಂತ 7: ಕ್ಯಾಪ್ಚಾ ವೆರಿಫಿಕೇಷನ್ ಅನ್ನು ಮಾಡಿ
ಹಂತ 8: Send OTP ಮೇಲೆ ಕ್ಲಿಕ್ ಮಾಡಿ
ಹಂತ 9: 'Update Demographics Data' ಮೇಲೆ ಕ್ಲಿಕ್ ಮಾಡಿ
ಹಂತ 10: ನವೀಕರಿಸಲು ವಿವರಗಳ ಆಯ್ಕೆಯನ್ನು ಆಯ್ಕೆಮಾಡಿ
ಹಂತ 11: ಹೊಸ ವಿವರಗಳನ್ನು ನಮೂದಿಸಿ
ಹಂತ 12: ದಾಖಲೆಗಳ ಪುರಾವೆಯ ಸ್ಕ್ಯಾನ್ ಮಾಡಿದ ಪ್ರತಿಯನ್ನು ಅಪ್‌ಲೋಡ್ ಮಾಡಿ
ಹಂತ 13: ನಮೂದಿಸಿದ ಮಾಹಿತಿಯು ನಿಖರವಾಗಿದೆಯೇ ಎಂದು ಪರಿಶೀಲಿಸಿ, ಒಟಿಪಿ ಉಲ್ಲೇಖಿಸಿದರೆ ಪ್ರಕ್ರಿಯೆ ಪೂರ್ಣವಾಗಲಿದೆ.
ವ್ಯಕ್ತಿಯ ಬಯೋಮೆಟ್ರಿಕ್ ಡೇಟಾ, ವಿಳಾಸ, ಇಮೇಲ್, ಫೋನ್ ನಂಬರ್ ಮತ್ತು ಇತರೆ ಮಾಹಿತಿಯಲ್ಲಿ ಬದಲಾವಣೆಗಳಿದ್ದರೆ ಅದನ್ನು ಅಪ್‌ಡೇಟ್ ಮಾಡುವುದು ಅಥವಾ ಆ ಮಾಹಿತಿಯನ್ನು ಮತ್ತೆ ಅಪ್‌ಡೇಟ್ ಮಾಡುವುದೇ ಆಧಾರ್ ಅಪ್‌ಡೇಟ್ ಆಗಿದೆ.
ಸಾಮಾನ್ಯವಾಗಿ ಒಂದು ಮಗುವಿಗೆ 5 ವರ್ಷವಾದಾಗ ಮತ್ತು 15 ವರ್ಷವಾದಾಗ ಆಧಾರ್ ಕಾರ್ಡ್ ಅನ್ನು ಅಪ್‌ಡೇಟ್ ಮಾಡಬೇಕಾಗುತ್ತದೆ. ಅದನ್ನು ಹೊರತುಪಡಿಸಿ ಪ್ರಸ್ತುತ ಯುಐಡಿಎಐ ಸೂಚನೆಯಂತೆ 10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ಅನ್ನು ಮಾಡಿ, ಬಳಿಕ ಯಾವುದೇ ಅಪ್‌ಡೇಟ್ ಮಾಡಿಲ್ಲವೆಂದಾದರೆ ಆಧಾರ್ ಕಾರ್ಡ್ ಅನ್ನು ಅಪ್‌ಡೇಟ್ ಮಾಡುವುದು ಮುಖ್ಯವಾಗಿದೆ. ಇದಕ್ಕಾಗಿ ಮಾರ್ಚ್ 15ರಿಂದ ಜೂನ್ 14ರವರೆಗೆ ಗಡುವು ನೀಡಲಾಗಿದೆ. ಆದರೆ ಈ ಸೇವೆಯು ಶುಲ್ಕ ರಹಿತವಾಗಿದೆ.
12 ಡಿಜಿಟ್ ಸಂಖ್ಯೆಯ ಆಧಾರ್ ಕಾರ್ಡ್‌ನಲ್ಲಿ ಯಾವುದೇ ಬದಲಾವಣೆಯನ್ನು ನೀವು ಮಾಡಲು ಬಯಸಿದರೆ, ಯುಐಡಿಎಐ 50 ರೂಪಾಯಿ ಶುಲ್ಕವನ್ನು ವಿಧಿಸುತ್ತದೆ. ಪ್ರಮುಖವಾಗಿ 10 ವರ್ಷ ಅಥವಾ ಅದಕ್ಕೂ ಹಿಂದೆ ಬಳಕೆದಾರರು ಗುರುತಿನ ಪುರಾವೆ (ಪಿಒಐ) ಮತ್ತು ವಿಳಾಸದ ಪುರಾವೆಯಂತಹ (ಪಿಒಎ) ವಿವರಗಳನ್ನು ಪರಿಷ್ಕರಿಸುವುದಾದರೆ ಈ ದಂಡವನ್ನು ಪಾವತಿ ಮಾಡಬೇಕಾಗುತ್ತದೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್‌ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ



Click it and Unblock the Notifications