ರಾಜ್ಯದ 6 ಜಿಲ್ಲೆಗಳಲ್ಲಿ ಅಂಗನವಾಡಿ ಹುದ್ದೆಗಳನ್ನು ಭರ್ತಿ ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಈಗ ವಿವಿಧ 6 ಜಿಲ್ಲೆಗಳಲ್ಲಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಬೆಳಗಾವಿ, ಬೀದರ್, ಹಾವೇರಿ, ತುಮಕೂರು, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮೀಣ ಜಿಲ್ಲೆಯಲ್ಲಿ ಈ ಅಂಗನವಾಡಿ ನೇಮಕಾತಿಯನ್ನು ಮಾಡಲಾಗುತ್ತದೆ. ಈ ಆರು ಜಿಲ್ಲೆಗಳಲ್ಲಿ ಸುಮಾರು ಸಾವಿರಕ್ಕೂ ಅಧಿಕ ಹುದ್ದೆಗಳು ಇದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 15 ಆಗಿದೆ.

ಅರ್ಹತೆ ಇತೆ ವಿವರ
ಈ ವೆಬ್‌ಸೈಟ್ https://anganwadirecruit.kar.nic.in/ ನಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. ವೇತನವು ಸುಮಾರು ಆರು ಸಾವಿರ ರೂಪಾಯಿಯಿಂದ ಹತ್ತು ಸಾವಿರ ರೂಪಾಯಿ ಆಗಿರುತ್ತದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಪಡೆದವರು ಅರ್ಜಿ ಸಲ್ಲಿಸಬಹುದು. ಅಂಗನವಾಡಿ ಸಹಾಯಕಿ ಹುದ್ದೆಗೆ 10ನೇ ತರಗತಿ ತೇರ್ಗಡೆ ಹೊಂದಿರಬೇಕು. ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದರೂ ಕನಿಷ್ಠ 18 ವರ್ಷ ಆಗಿರಬೇಕು ಮತ್ತು ಗರಿಷ್ಠ 35 ವರ್ಷವಾಗಿರಬಾರದು.
ಅಗತ್ಯ ದಾಖಲೆಗಳು
ನೀವು ಅರ್ಜಿ ಸಲ್ಲಿಸಲು ಬಯಸಿದರೆ ನೀವು ಅಗತ್ಯ ದಾಖಲೆಗಳಾದ ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ, ಪಿಯುಸಿ ಅಂಕಪಟ್ಟಿ, ವಾಸಸ್ಥಳ ದೃಢೀಕರಣ ಪತ್ರ, ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ ಹೊಂದಿರಬೇಕು. ಇನ್ನು ಅಂಗನವಾಡಿ ಕಾರ್ಯಕರ್ತೆ ನೇಮಕಾತಿಗಳಲ್ಲಿ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ವಿಕಲಚೇತನರಾದರೆ ಪ್ರಮಾಣ ಪತ್ರ ಸಲ್ಲಿಸಬೇಕಾಗುತ್ತದೆ. ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದರೆ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ, ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ, ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ, ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ ಹೊಂದಿರಬೇಕಾಗುತ್ತದೆ.
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಬೇಕಾದರೆ, ಅಪ್ಲಿಕೇಶನ್ ಸಲ್ಲಿಸಲು ವೆಬ್ ವಿಳಾಸ https://karnemakaone.kar.nic.in ಕ್ಕೆ ನೀವು ಭೇಟಿ ನೀಡಬೇಕಾಗುತ್ತದೆ. ಉದ್ಯೋಗ ಬಯಸುವ ಜಿಲ್ಲೆ>> ಶಿಶು ಅಭಿವೃದ್ಧಿ ಯೋಜನೆ >> ನೇಮಕಾತಿ ಬಯಸುವ ಹುದ್ದೆಯನ್ನು ಕ್ರಮವಾಗಿ ಆಯ್ಕೆ ಮಾಡಿಕೊಳ್ಳಿ. ನಂತರ ಅರ್ಜಿ ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಿ, ಆನ್‌ಲೈನ್ ಅರ್ಜಿ ಫಾರ್ಮ್ ಓಪನ್ ಆಗಲಿದ್ದು, ಅಗತ್ಯ ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿಕೊಳ್ಳಿ.


Click it and Unblock the Notifications