For Quick Alerts
ALLOW NOTIFICATIONS  
For Daily Alerts

ಮೀನುಗಾರಿಕೆ ಇಲಾಖೆ: ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಿ

|

ಧಾರವಾಡ, ಜೂನ್ 26: ಮೀನುಗಾರಿಕೆ ಇಲಾಖೆಯಿಂದ ಒಳನಾಡು ಮೀನುಕೃಷಿ ಮತ್ತು ಮೀನುಗಾರಿಕೆ ಅಭಿವೃಧ್ಧಿಗಾಗಿ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ವಲಯ ಯೋಜನೆಗಳು ಮತ್ತು ಪ್ರಧಾನ ಮಂತ್ರಿ ಮತ್ಸ್ಯ ಸಂಪದ (PMMSY) ಯೋಜನೆಗಳಡಿ ಅರ್ಹ ಫಲಾನುಭವಿಗಳಂದ ಅರ್ಜಿ ಅಹ್ವಾನಿಸಲಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ಪ್ರಮುಖವಾಗಿ ಸಮುದಾಯ ಕೆರೆಗಳು, ಕೃಷಿ ಹೊಂಡ, ತಡೆ ಅಣೆಕಟ್ಟು, ಗೋಕಟ್ಟೆ, ನಾಲಾಬದು, ಬೋರ್‍ವೆಲ್ ಆಧಾರಿತ ನೀರು ಸಂಗ್ರಹಣಾ ಕೊಳಗಳು, ನೀರಾವರಿ ಬಾವಿಗಳು ಹಾಗೂ ಪಾಂಡುಗಳು ಮುಂತಾದ ಜಲ ಸಂಪನ್ಮೂಲಗಳಿದ್ದಲ್ಲಿ ಮೀನು ಸಾಕಣೆ ಮಾಡುವುದೇ ಒಳನಾಡು ಮೀನುಕೃಷಿ ಆಗಿದೆ.

ಜೂ.24ರ ಪೇಟೆ ಧಾರಣೆ: ಮೀನು, ತರಕಾರಿ, ರಬ್ಬರ್ ಹಾಗೂ ರಸಗೊಬ್ಬರ ಮಾರುಕಟ್ಟೆ ಬೆಲೆಜೂ.24ರ ಪೇಟೆ ಧಾರಣೆ: ಮೀನು, ತರಕಾರಿ, ರಬ್ಬರ್ ಹಾಗೂ ರಸಗೊಬ್ಬರ ಮಾರುಕಟ್ಟೆ ಬೆಲೆ

ಈ ಸಂಪನ್ಮೂಲಗಳನ್ನು ಬಳಸಿಕೊಂಡು ಮೀನು ಸಾಕಣೆ ಅಥವಾ ಮೀನು ಕೃಷಿ ಮಾಡಿದರೆ ಗ್ರಾಮೀಣ ಮಟ್ಟದಲ್ಲಿ ಕಡಿಮೆ ಖರ್ಚಿನಲ್ಲಿ ಪೌಷ್ಠಿಕ ಆಹಾರ ದೊರೆತಂತೆ ಆಗುತ್ತದೆ. ರೈತರ ಆರ್ಥಿಕ ಅಭಿವೃದ್ಧಿಗೂ ಸಹ ಸಹಕಾರಿಯಾಗುತ್ತದೆ. ಈಗ ಒಳನಾಡು ಮೀನುಕೃಷಿ ಮತ್ತು ಮೀನುಗಾರಿಕೆ ಅಭಿವೃಧ್ಧಿಗಾಗಿ ಮೀನುಗಾರಿಕೆ ಇಲಾಖೆ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಮಾಡಿದೆ. ಈ ಬಗ್ಗೆ ಇಲ್ಲಿದೆ ವಿವರ ಮುಂದೆ ಓದಿ...

 ಜಿಲ್ಲಾ ವಲಯ ಯೋಜನೆಗಳು

ಜಿಲ್ಲಾ ವಲಯ ಯೋಜನೆಗಳು

ಕೆರೆಗಳು ಮತ್ತು ಜಲಾಶಯದ ವ್ಯಾಪ್ತಿಯ ವೃತ್ತಿಪರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೀನುಗಾರರು, ಮೀನು ಕೃಷಿಕರಿಗೆ ಮೀನು ಹಿಡಿಯುವ ಬಲೆ ಅಥವಾ ಫೈಬರ್ ಗ್ಲಾಸ್ ಹರಿಗೋಲು ಖರೀದಿಗೆ ಸಹಾಯಧನ (ಸೇವಾ ಸಿಂಧು ಪೋರ್ಟಲ್ ಮೂಲಕ) ಮತ್ತು ಸ್ವಂತ ಜಮೀನಿನಲ್ಲಿ ಮೀನು ಕೃಷಿ ಕೊಳ ನಿರ್ಮಾಣಕ್ಕೆ ಸಹಾಯಧನ, ಹುಲ್ಲುಗೆಂಡೆ ಮೀನುಮರಿ ಖರೀದಿಗೆ ಸಹಾಯಧನ ಹಾಗೂ ಮೀನು ಮಾರಾಟದಲ್ಲಿ ತೊಡಗಿರುವ ಮೀನುಗಾರರಿಗೆ ದ್ವೀಚಕ್ರ ವಾಹನ ಖರೀದಿಗೆ ಸಹಾಯಧನ ನೀಡಲಾಗುವುದು.

 ರಾಜ್ಯ ವಲಯ ಯೋಜನೆಗಳು

ರಾಜ್ಯ ವಲಯ ಯೋಜನೆಗಳು

ಕೆರೆಗಳು ಮತ್ತು ಜಲಾಶಯದ ವ್ಯಾಪ್ತಿಯ ವೃತ್ತಿಪರ ಮೀನುಗಾರರಿಗೆ ಮೀನು ಹಿಡಿಯುವ ಬಲೆ ಅಥವಾ ಫೈಬರ್ ಗ್ಲಾಸ್ ಹರಿಗೋಲು ಖರೀದಿಗೆ ಸಹಾಯಧನ (ಸೇವಾ ಸಿಂಧು ಪೋರ್ಟಲ್ ಮೂಲಕ) ಹಾಗೂ ಮೀನುಮರಿ ಖರೀದಿಸಲು ನೆರವು ಯೋಜನೆ, ಕೆರೆ, ಜಲಾಶಯಗಳ ಅಂಚಿನ ಕೊಳಗಳಲ್ಲಿ ಮೀನುಮರಿ ಪಾಲನೆಗೆ ನೆರೆವು, ಕೆರೆಯನ್ನು ಗುತ್ತಿಗೆ ಪಡೆದ ಮೀನುಗಾರಿಕೆ ಸಹಕಾರಿ ಸಂಘಗಳಿಗೆ ಮೀನುಮರಿ ಬಿತ್ತನೆಗೆ ನೆರವಿಗೆ ಸಹಾಯಧನ ನೀಡಲಾಗುವುದು.

 ಪ್ರಧಾನ ಮಂತ್ರಿ ಮತ್ಸ್ಯ ಸಂಪದ (PMMSY) ಯೋಜನೆ

ಪ್ರಧಾನ ಮಂತ್ರಿ ಮತ್ಸ್ಯ ಸಂಪದ (PMMSY) ಯೋಜನೆ

ಬಯೋಫ್ಲಾಕ್ ಮೀನು ಕೃಷಿಕೊಳ ನಿರ್ಮಾಣ, ಮಧ್ಯಮ ಗಾತ್ರದ ಆರ್.ಎ.ಎಸ್. ಘಟಕ ನಿರ್ಮಾಣ, ಬ್ಯಾಕ್ ಯಾರ್ಡ ಆರ್.ಎ.ಎಸ್. ಘಟಕ ನಿರ್ಮಾಣ, ಸಣ್ಣ ಬಯೋಫ್ಲಾಕ್ ಮೀನುಕೊಳ ನಿರ್ಮಾಣದ ಯೋಜನೆಗಳಿದ್ದು ಸಾಮಾನ್ಯ ವರ್ಗದವರಿಗೆ ಶೇ.40 ಹಾಗೂ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುವುದು.

 ಜುಲೈ 15ರ ಒಳಗೆ ಅರ್ಜಿ ಸಲ್ಲಿಸಿ

ಜುಲೈ 15ರ ಒಳಗೆ ಅರ್ಜಿ ಸಲ್ಲಿಸಿ

ಆಸಕ್ತರು ಜುಲೈ 15 ರೊಳಗಾಗಿ ತಾಲೂಕಾ ಅಧಿಕಾರಿಗಳ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆ ದೂರವಾಣಿ 0836-2447416, 9845453065 8880483957, 7411278429 ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary

Application Invited from PMMSY Beneficiaries for Various Schemes Grant in Dharwad

Application invited from PMMSY beneficiaries for various schemes grant in Dharwad. Here's Details. Read on.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X