ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಆಗಸ್ಟ್ ತಿಂಗಳ ಬ್ಯಾಂಕ್ ರಜೆಗಳ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿ ಪ್ರಕಾರವಾಗಿ ಭಾರತದಲ್ಲಿ ಆಗಸ್ಟ್ ತಿಂಗಳಿನಲ್ಲಿ ಒಟ್ಟಾಗಿ 14 ದಿನಗಳು ಬ್ಯಾಂಕ್ ರಜೆ ಇರಲಿದೆ. ಆಗಸ್ಟ್ ತಿಂಗಳಿನಲ್ಲಿ ರಕ್ಷಾ ಬಂಧನ, ಸ್ವಾತಂತ್ರ್ಯ ದಿನ, ತೆಂಡಾಂಗ್ ಲ್ಹೋ ರಮ್ ಫಾತ್, ಪಾರ್ಸಿ ಹೊಸ ವರ್ಷ (ಶಾಹೆನ್‌ಶಾಹಿ), ಶ್ರೀಮಂತ ಶಂಕರದೇವರ ತಿಥಿ, ಮೊದಲ ಓಣಂ, ತಿರುವೋಣಂ ಸೇರಿದಂತೆ ಹಲವಾರು ಹಬ್ಬಗಳಿಗೆ ಬ್ಯಾಂಕ್ ಬಂದ್ ಆಗಿರುತ್ತದೆ.
ಸಾಮಾನ್ಯವಾಗಿಯೇ ನಮ್ಮ ಜೀವನದಲ್ಲಿ ಹಣಕಾಸು ಅತೀ ಅಗತ್ಯ ಪಾತ್ರವನ್ನು ವಹಿಸುತ್ತದೆ. ನಾವು ಹಣವನ್ನು ವಿತ್‌ಡ್ರಾ ಮಾಡಲು ಎಟಿಎಂಗಳಿಗೆ ಹೋಗಬಹುದಾದರೂ ಕೂಡಾ ನಾವು ಕೆಲವು ಕಾರ್ಯಗಳಿಗೆ ಬ್ಯಾಂಕ್‌ಗೆ ಹೋಗುವುದು ಅನಿವಾರ್ಯವಾಗುತ್ತದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಮೇ ತಿಂಗಳಿನಲ್ಲಿ 2000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿದೆ.

ಈ 2000 ರೂಪಾಯಿ ನೋಟುಗಳ ಬದಲಾವಣೆಗೆ ಸೆಪ್ಟೆಂಬರ್‌ವರೆಗೆ ಮಾತ್ರ ಸಮಯಾವಕಾಶವಿದ್ದು ಅದಕ್ಕಾದರೂ ನೀವು ಬ್ಯಾಂಕ್‌ಗೆ ಹೋಗಬೇಕಾಗಬಹುದು. ಬ್ಯಾಂಕ್‌ಗೆ ಹೋದ ಬಳಿಕ ಬ್ಯಾಂಕ್ ಮುಚ್ಚಿದ್ದರೆ ನಿಮ್ಮ ಸಮಯ ವ್ಯರ್ಥವಲ್ಲವೇ? ಅದಕ್ಕಾಗಿ ಬ್ಯಾಂಕ್‌ಗೆ ಹೋಗುವ ಮುನ್ನವೇ ಆಗಸ್ಟ್ ತಿಂಗಳಿನಲ್ಲಿ ಯಾವೆಲ್ಲ ದಿನ ರಜೆ ಇರಲಿದೆ ಎಂದು ತಿಳಿದುಕೊಳ್ಳಿ.. ಮುಂದೆ ಓದಿ...
ಆಗಸ್ಟ್ ತಿಂಗಳ ಬ್ಯಾಂಕ್ ರಜಾ ಪಟ್ಟಿ
ಆಗಸ್ಟ್ 6: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಆಗಸ್ಟ್ 8: ತೆಂಡಾಂಗ್ ಲ್ಹೋ ರಮ್ ಫಾತ್, ಗಾಂಗ್ಟಾಕ್‌ನಲ್ಲಿ ಬ್ಯಾಂಕ್‌ಗಳು ಬಂದ್ ಆಗಿರುತ್ತದೆ.
ಆಗಸ್ಟ್ 12: ಎರಡನೇ ಶನಿವಾರ, ದೇಶದಾದ್ಯಂತ ಬ್ಯಾಂಕ್ ರಜೆ
ಆಗಸ್ಟ್ 13: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಆಗಸ್ಟ್ 15: ಸ್ವಾತಂತ್ರ್ಯ ದಿನ, ಅಗರ್ತಾಲ, ಅಹಮದಾಬಾದ್, ಐಜ್ವಾಲ್, ಬೇಲಾಪುರ, ಬೆಂಗಳೂರು, ಭೋಪಾಲ್, ಭುವನೇಶ್ವರ್, ಚಂಡೀಗಢ, ಚೆನ್ನೈ, ಡೆಹ್ರಾಡೂನ್, ಗ್ಯಾಂಗ್ಟಾಕ್, ಗುವಾಹಟಿ, ಹೈದರಾಬಾದ್ - ಆಂಧ್ರ ಪ್ರದೇಶ, ಹೈದರಾಬಾದ್ - ತೆಲಂಗಾಣ, ಇಂಫಾಲ್, ಜೈಪುರ, ಜಮ್ಮು, ಕಾನ್ಪುರ, ಕೊಚ್ಚಿ, ಕೊಹಿಮಾ, ಕೋಲ್ಕತ್ತಾ, ಲಕ್ನೋ, ಮುಂಬೈ, ನಾಗ್ಪುರ, ನವದೆಹಲಿ, ಪಣಜಿ, ಪಾಟ್ನಾ, ರಾಯಪುರ, ರಾಂಚಿ, ಶಿಲ್ಲಾಂಗ್, ಶಿಮ್ಲಾ, ಶ್ರೀನಗರ ಮತ್ತು ತಿರುವನಂತಪುರಂದಲ್ಲಿ ಬ್ಯಾಂಕ್ ಬಂದ್ ಆಗಿರುತ್ತದೆ.
ಆಗಸ್ಟ್ 16: ಪಾರ್ಸಿ ಹೊಸ ವರ್ಷ, ಬೇಲಾಪುರ, ಮುಂಬೈ, ನಾಗ್ಪುರದಲ್ಲಿ ಬ್ಯಾಂಕ್ ರಜೆ ಇರಲಿದೆ.
ಆಗಸ್ಟ್ 17: ಶ್ರೀಮಂತ ಶಂಕರದೇವರ ತಿಥಿ, ಗುವಾಹಟಿಯಲ್ಲಿ ಬ್ಯಾಂಕ್‌ಗಳು ಬಂದ್ ಆಗಿರುತ್ತದೆ.
ಆಗಸ್ಟ್ 20: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಆಗಸ್ಟ್ 26: ನಾಲ್ಕನೇ ಶನಿವಾರ, ದೇಶದಾದ್ಯಂತ ಬ್ಯಾಂಕ್ ಬಂದ್
ಆಗಸ್ಟ್ 27: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಆಗಸ್ಟ್ 28: ಮೊದಲ ಓಣಂ, ಕೊಚ್ಚಿ, ತಿರುವನಂತಪುರಂನಲ್ಲಿ ಬ್ಯಾಂಕ್ ಬಂದ್ ಆಗಿರುತ್ತದೆ.
ಆಗಸ್ಟ್ 29: ತಿರುವೋಣಂ, ಕೊಚ್ಚಿ, ತಿರುವನಂತಪುರಂನಲ್ಲಿ ಬ್ಯಾಂಕ್ ರಜೆ
ಆಗಸ್ಟ್ 30: ರಕ್ಷಾ ಬಂಧನ, ಜೈಪುರ, ಶ್ರೀನಗರದಲ್ಲಿ ಬ್ಯಾಂಕ್ ಬಂದ್
ಆಗಸ್ಟ್ 31: ರಕ್ಷಾ ಬಂಧನ/ ಶ್ರೀ ನಾರಾಯಣ ಗುರು ಜಯಂತಿ/ ಪಾಂಗ್-ಲಬ್ಸೋಲ್ , ಗ್ಯಾಂಗ್ಟಾಕ್, ಡೆಹ್ರಾಡೂನ್, ಕಾನ್ಪುರ್, ಕೊಚ್ಚಿ, ಲಕ್ನೋ ಮತ್ತು ತಿರುವನಂತಪುರಂನಲ್ಲಿ ಬ್ಯಾಂಕುಗಳಿಗೆ ರಜೆ ಇರಲಿದೆ.
ಕರ್ನಾಟಕದಲ್ಲಿ ಬ್ಯಾಂಕ್ ರಜೆ
ಆಗಸ್ಟ್ 6: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಆಗಸ್ಟ್ 12: ಎರಡನೇ ಶನಿವಾರ, ದೇಶದಾದ್ಯಂತ ಬ್ಯಾಂಕ್ ರಜೆ
ಆಗಸ್ಟ್ 13: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಆಗಸ್ಟ್ 15: ಸ್ವಾತಂತ್ರ್ಯ ದಿನ
ಆಗಸ್ಟ್ 20: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಆಗಸ್ಟ್ 26: ನಾಲ್ಕನೇ ಶನಿವಾರ, ದೇಶದಾದ್ಯಂತ ಬ್ಯಾಂಕ್ ಬಂದ್
ಆಗಸ್ಟ್ 27: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ


Click it and Unblock the Notifications