ಈಗಾಗಲೇ ಹಬ್ಬದ ಸೀಸನ್ ಆರಂಭವಾಗಿದೆ. ತಿಂಗಳಲ್ಲಿ ಎರಡು ಮೂರು ಹಬ್ಬಗಳು ಇರುತ್ತದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಸೆಪ್ಟೆಂಬರ್ ತಿಂಗಳ ಬ್ಯಾಂಕ್ ರಜೆಗಳ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿ ಪ್ರಕಾರವಾಗಿ ಭಾರತದಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 16 ದಿನಗಳು ಬ್ಯಾಂಕ್ ರಜೆ ಇರಲಿದೆ.
ಸೆಪ್ಟೆಂಬರ್ ತಿಂಗಳಿನಲ್ಲಿ ಬ್ಯಾಂಕ್‌ಗಳಿಗೆ ಸರಣಿ ರಜೆ ಇರಲಿದೆ. ಹಬ್ಬಗಳು ಮತ್ತು ವಾರಾಂತ್ಯಗಳು ಸೇರಿ, ಸಾರ್ವಜನಿಕ, ಖಾಸಗಿ ಮತ್ತು ಸಹಕಾರಿ ಬ್ಯಾಂಕ್‌ಗಳಲ್ಲಿ ಒಟ್ಟು 16 ರಜಾದಿನಗಳನ್ನು ಇರಲಿದೆ. ಆದರೆ ಈ ರಜೆಗಳು ಎಲ್ಲ ರಾಜ್ಯಗಳಲ್ಲಿ ಅನ್ವಯವಾಗುವುದಿಲ್ಲ. ರಾಜ್ಯದಿಂದ ರಾಜ್ಯಕ್ಕೆ ಈ ರಜಾದಿನಗಳು ವ್ಯತ್ಯಯವಾಗಬಹುದು. ಕರ್ನಾಟಕದಲ್ಲಿ ಯಾವೆಲ್ಲ ದಿನ ಬ್ಯಾಂಕ್ ಬಂದ್ ಎಂದು ತಿಳಿಯಲು ಮುಂದೆ ಓದಿ...

ಸೆಪ್ಟೆಂಬರ್ ತಿಂಗಳ ಬ್ಯಾಂಕ್ ರಜೆ
ಸೆಪ್ಟೆಂಬರ್ 3: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 6: ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಭುವನೇಶ್ವರ, ಚೆನ್ನೈ, ಹೈದರಾಬಾದ್ ಮತ್ತು ಪಾಟ್ನಾದಲ್ಲಿ ಬ್ಯಾಂಕ್‌ಗಳು ಮುಚ್ಚಲಾಗುತ್ತದೆ.
ಸೆಪ್ಟೆಂಬರ್ 7: ಶ್ರೀ ಕೃಷ್ಣ ಜನ್ಮಾಷ್ಟಮಿಯ ಕಾರಣದಿಂದಾಗಿ ಅಹಮದಾಬಾದ್, ಚಂಡೀಗಢ, ಡೆಹ್ರಾಡೂನ್, ಗ್ಯಾಂಗ್ಟಾಕ್, ತೆಲಂಗಾಣ, ಜೈಪುರ, ಜಮ್ಮು, ಕಾನ್ಪುರ, ಲಕ್ನೋ, ರಾಯ್‌ಪುರ, ರಾಂಚಿ, ಶಿಲ್ಲಾಂಗ್, ಶಿಮ್ಲಾ ಮತ್ತು ಶ್ರೀನಗರದಂತಹ ನಗರಗಳಲ್ಲಿ ಬ್ಯಾಂಕ್ ಬಂದ್ ಆಗಿರುತ್ತದೆ.
ಸೆಪ್ಟೆಂಬರ್ 9: ಎರಡನೇ ಶನಿವಾರ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 10: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 17: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 18: ಗಣೇಶ ಚತುರ್ಥಿ ದಿನ ತೆಲಂಗಾಣದಲ್ಲಿ ಬ್ಯಾಂಕ್‌ಗಳು ಬಂದ್ ಆಗಿರುತ್ತದೆ.
ಸೆಪ್ಟೆಂಬರ್ 19: ಗಣೇಶ ಚತುರ್ಥಿ ಕಾರಣ ಅಹಮದಾಬಾದ್, ಬೇಲಾಪುರ, ಭುವನೇಶ್ವರ, ಮುಂಬೈ, ನಾಗ್ಪುರ ಬೆಂಗಳೂರು ಮತ್ತು ಪಣಜಿಯಲ್ಲಿ ಬ್ಯಾಂಕ್ ಬಂದ್ ಆಗಿರುತ್ತದೆ.
ಸೆಪ್ಟೆಂಬರ್ 20: ಗಣೇಶ ಚತುರ್ಥಿ ಮತ್ತು ನುವಾಖಾಯ್ ಕಾರಣ ಕೊಚ್ಚಿ ಮತ್ತು ಭುವನೇಶ್ವರದಲ್ಲಿ ಬ್ಯಾಂಕ್ ಬಂದ್ ಆಗುತ್ತದೆ.
ಸೆಪ್ಟೆಂಬರ್ 22: ಶ್ರೀ ನಾರಾಯಣ ಗುರು ಸಮಾಧಿ ದಿನವು ಕೊಚ್ಚಿ, ಪಣಜಿ ಮತ್ತು ತಿರುವನಂತಪುರದಲ್ಲಿ ಬ್ಯಾಂಕ್ ರಜೆ ಇರಲಿದೆ.
ಸೆಪ್ಟೆಂಬರ್ 23: ಎರಡನೇ ಶನಿವಾರ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 24: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 25: ಶ್ರೀಮಂತ ಶಂಕರದೇವ ಜನ್ಮ ವಾರ್ಷಿಕೋತ್ಸವಕ್ಕಾಗಿ ಗುವಾಹಟಿ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ.
ಸೆಪ್ಟೆಂಬರ್ 27: ಮಿಲಾದ್-ಎ-ಷರೀಫ್ ದಿನ ಜಮ್ಮು, ಕೊಚ್ಚಿ, ಶ್ರೀನಗರ ಮತ್ತು ತಿರುವನಂತಪುರದಲ್ಲಿ ಬ್ಯಾಂಕ್ ರಜೆ ಇರಲಿದೆ.
ಸೆಪ್ಟೆಂಬರ್ 28: ಈದ್-ಎ-ಮಿಲಾದ್ ಕಾರಣ ಅಹಮದಾಬಾದ್, ಬೆಂಗಳೂರು, ಚೆನ್ನೈ, ಕಾನ್ಪುರ, ಲಕ್ನೋ, ಮುಂಬೈ ಮತ್ತು ನವದೆಹಲಿ ಸೇರಿದಂತೆ ವಿವಿಧ ನಗರಗಳಲ್ಲಿ ಬ್ಯಾಂಕ್ ಬಂದ್ ಆಗಿರುತ್ತದೆ.
ಸೆಪ್ಟೆಂಬರ್ 29: ಗ್ಯಾಂಗ್ಟಾಕ್, ಜಮ್ಮು ಮತ್ತು ಶ್ರೀನಗರದಲ್ಲಿ ಈದ್-ಎ-ಮಿಲಾದ್-ಉನ್-ನಬಿ ದಿನ ಬ್ಯಾಂಕ್ ರಜೆ ಇರುತ್ತದೆ.
ಕರ್ನಾಟಕದಲ್ಲಿ ಬ್ಯಾಂಕ್ ರಜೆ
ಸೆಪ್ಟೆಂಬರ್ 3: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 9: ಎರಡನೇ ಶನಿವಾರ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 10: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 17: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 19: ಗಣೇಶ ಚತುರ್ಥಿ
ಸೆಪ್ಟೆಂಬರ್ 23: ಎರಡನೇ ಶನಿವಾರ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 24: ಭಾನುವಾರ, ವಾರದ ರಜೆ, ದೇಶದಾದ್ಯಂತ ಬ್ಯಾಂಕ್ ರಜೆ
ಸೆಪ್ಟೆಂಬರ್ 28: ಈದ್-ಎ-ಮಿಲಾದ್


Click it and Unblock the Notifications