ಭಾರತೀಯರು ಚಿನ್ನ ಪ್ರಿಯರು. ಬಹುತೇಕರು ಡಿಜಿಟಲ್ ಮೂಲಕ, ಭೌತಿಕವಾಗಿ ಹೂಡಿಕೆ, ಖರೀದಿ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಆದ್ರೆ ಏನ್ ಮಾಡೋದು ಬೆಲೆ ಏರಿಕೆಯಿಂದಾಗಿ ಹೆಚ್ಚಿನವರು ಚಿನ್ನದ ಮೇಲೆ ಹೂಡಿಕೆ ಮಾಡೋದನ್ನೇ ಬಿಟ್ಟುಬಿಟ್ಟಿದ್ದಾರೆ. ಬೆಲೆ ಇಳಿಕೆ ಬಗ್ಗೆ ದೊಡ್ಡ ನಿರೀಕ್ಷೆಯನ್ನೂ ಇಟ್ಟುಕೊಂಡಿದ್ದಾರೆ. ಹಾಗಿದ್ರೆ ಮುಂಬರುವ ತಿಂಗಳಲ್ಲಿ ಚಿನ್ನದ ಬೆಲೆ ಏರಿಕೆಯಾಗುತ್ತಾ? ಇಳಿಕೆಯಾಗುತ್ತಾ? ತಕ್ಞರು ಬಿಚ್ಚಿಟ್ಟ ರಹಸ್ಯವೇನು ಗೊತ್ತಾ?

ಚಿನ್ನ ಖರೀದಿಯ ಪ್ರಮಾಣದಲ್ಲಿ ಇತ್ತೀಚೆಗೆ ಗಮನಾರ್ಹ ಬದಲಾವಣೆಯಾಗಿದೆ. ಕೆಲವೊಮ್ಮೆ ಖರೀದಿ ಪ್ರಮಾಣದಲ್ಲಿ ಏರಿಕೆ ಕಂಡರೆ ಇನ್ನೂ ಕೆಲವೊಮ್ಮೆ ಇಳಿಕೆ ಕಾಣುತ್ತದೆ. ಇದಕ್ಕೆಲ್ಲಾ ಮೂಲಕ ಕಾರಣ ಬೆಲೆ. ಹಿಂದೆಲ್ಲಾ ಯಾವುದೇ ಮದುವೆಯಂತಹ ಸಂಭ್ರಮಗಳಲ್ಲಿ ಹಾಕಲೆಂದು ಖರೀದಿಸುತ್ತಿದ್ದರು. ಆದರೆ ಈಗ, ಅನೇಕರು ಚಿನ್ನವನ್ನು ಹೂಡಿಕೆಯ ಆಸ್ತಿಯಾಗಿ ನೋಡುತ್ತಿದ್ದಾರೆ. ಇದರೊಂದಿಗೆ, ಬೆಳ್ಳಿ ಬೆಲೆಗಳು ನಿರಂತರವಾಗಿ ಏರುತ್ತಿದ್ದು, ವಿಶೇಷವಾಗಿ ಮಧ್ಯಮ ವರ್ಗದ ಜನರ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.
ನೀವು ಚಿನ್ನ ಖರೀದಿಸಲು ಯೋಜಿಸುತ್ತಿದ್ದರೆ, ಈ ಮಾಹಿತಿ ನೀವು ಓದಲೇಬೇಕು. ಮಾರುಕಟ್ಟೆ ತಜ್ಞರ ಪ್ರಕಾರ, ಮುಂಬರುವ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಏರಿಕೆಯ ಹಾದಿ ಹಿಡಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ದೀಪಾವಳಿ ನಂತರ ಚಿನ್ನದ ಬೆಲೆ ಈಗಾಗಲೇ ಶೇ. 10ರಿಂದ 15ರಷ್ಟು ಹೆಚ್ಚಳ ಕಂಡಿದೆ. ಆದರೆ, ಈ ಏರಿಕೆಯ ಪ್ರಮಾಣ ಇನ್ನೂ ಎತ್ತರಕ್ಕೆ ಹೋಗಬಹುದು ಎಂದು ನಿರೀಕ್ಷಿಸಲಾಗಿದೆ.
ಲಕ್ಷ್ಮಿ ಡೈಮಂಡ್ಸ್ ಅಧ್ಯಕ್ಷರಾದ ಚೇತನ್ ಮೆಹ್ತಾ ಅವರ ಪ್ರಕಾರ, ಮುಂದಿನ ಎರಡು-ಮೂರು ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಲಿದೆ. ಅಂದರೆ ಶೇ. 10ರಿಂದ 20ರಷ್ಟು ಹೆಚ್ಚಳವಾಗಬಹುದು ಎಂದು ಹೇಳಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರಮುಖ ಕೇಂದ್ರ ಬ್ಯಾಂಕುಗಳು ಮತ್ತು ಹೂಡಿಕೆದಾರರಿಂದ ಚಿನ್ನದ ಮೇಲಿನ ಬೇಡಿಕೆ ಹೆಚ್ಚಾಗಿರುವುದೇ ಈ ಪರಿಸ್ಥಿತಿಗೆ ಕಾರಣ ಎಂದು ಅವರು ಹೇಳಿದ್ದಾರೆ.
ಪ್ರಸ್ತುತ, ಚಿನ್ನವನ್ನು ಹೂಡಿಕೆಯ ಆಸ್ತಿಯನ್ನಾಗಿ ಪರಿಗಣಿಸಿಕೊಂಡು, ಖರೀದಿಸುವವರ ಸಂಖ್ಯೆ ಹೆಚ್ಚಾಗಿದೆ. ಆಭರಣಗಳಿಗಿಂತಲೂ ಇದರ ಬೇಡಿಕೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಜೊತೆಗೆ, ಮದುವೆ ಸೀಸನ್ ಈಗಾಗಲೇ ಆರಂಭವಾಗಿದೆ. ಈ ಸಂದರ್ಭದಲ್ಲಿ ಆಭರಣಗಳ ಬೇಡಿಕೆ ಮತ್ತಷ್ಟು ಹೆಚ್ಚಾಗುತ್ತದೆ. ಈ ಕಾರಣದಿಂದ ಚಿನ್ನದ ಬೆಲೆ ಮತ್ತೆ ಏರಿಳಿತಗಳನ್ನು ಕಾಣಬಹುದು ಎಂದು ಅಂದಾಜಿಸಲಾಗಿದೆ.
ಈ ನಡುವೆ, ವಜ್ರದ ಆಭರಣಗಳ ಖರೀದಿಯಲ್ಲಿ ಕೆಲವು ಹೊಸ ಬೆಳವಣಿಗೆಗಳು ಕಾಣಿಸಿಕೊಂಡಿದೆ. ಚೇತನ್ ಮೆಹ್ತಾ ಅವರು ಹೇಳಿದಂತೆ, ವಜ್ರದ ಮಾರುಕಟ್ಟೆ ಪ್ರಸ್ತುತ ಸ್ಥಿರವಾಗಿದ್ದು, ಸಣ್ಣ ಮತ್ತು ಮಧ್ಯಮ ಗಾತ್ರದ ವಜ್ರಗಳಿಂದ ಅಲಂಕರಿಸಿದ ಆಭರಣಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ ಹೆಚ್ಚಿನ ಗ್ರಾಹಕರು ಹೆಚ್ಚು ಆಕರ್ಷಕವಾಗಿರುವ ಆಭರಣಗಳತ್ತ ಮುಖ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ..
ಒಟ್ಟಾರೆಯಾಗಿ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಮೇಲಿನ ಬೇಡಿಕೆ ಹೆಚ್ಚಾಗಿದ್ದರಿಂದ, ಹೂಡಿಕೆದಾರರ ಆಸಕ್ತಿ ಮತ್ತು ಮದುವೆ ಸೀಸನ್‌ಗಳ ಕಾರಣದಿಂದ ಮುಂದಿನ ಎರಡು ಮೂರು ತಿಂಗಳಲ್ಲಿ, ಚಿನ್ನದ ಬೆಲೆ ದಿಢೀರ್ ಏರಿಕೆ ಕಾಣಬಹುದು ಎನ್ನಲಾಗಿದೆ. ಆದ್ದರಿಂದ, ಚಿನ್ನ ಖರೀದಿಸಲು ಪ್ಲಾನ್ ಮಾಡಿರುವವರು ಮೊದಲೇ ಖರೀದಿಟ್ಟರೆ ಉತ್ತಮ ಎಂದು ತಜ್ಞರು ಸಲಹೆ ನೀಡಿದ್ದಾರೆ..
(ಈ ವಿಶ್ಲೇಷಣೆ ಮತ್ತು ಮಾಹಿತಿ ಕೇವಲ ವೈಯಕ್ತಿಕ ವಿಶ್ಲೇಷಕರು ಅಥವಾ ಸಂಸ್ಥೆಗಳ ಅಭಿಪ್ರಾಯವಾಗಿದೆ ಮತ್ತು Goodreturns.in ಅಥವಾ Greynium Information Technologies Private Limited (ಒಟ್ಟಾರೆ "ನಾವು" ಎಂದು ಕರೆಯಲಾಗುತ್ತದೆ) ಅವರ ಅಭಿಪ್ರಾಯವನ್ನು ಹೇಳಲಾಗುವುದಿಲ್ಲ. ನಾವು ಯಾವುದೇ ಮಾಹಿತಿಯ ನಿಖರತೆ, ಪೂರ್ಣತೆ ಅಥವಾ ವಿಶ್ವಾಸಾರ್ಹತೆ ಬಗ್ಗೆ ಗ್ಯಾರಂಟಿ ನೀಡುವುದಿಲ್ಲ, ಒಪ್ಪಿಕೊಳ್ಳುವುದಿಲ್ಲ ಅಥವಾ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ. ನಾವು ಯಾವುದೇ ಹೂಡಿಕೆ ಸಲಹೆ ನೀಡುವುದಿಲ್ಲ ಅಥವಾ ಷೇರುಗಳ ಖರೀದಿ ಅಥವಾ ಮಾರಾಟ ಮಾಡುವ ಬಗ್ಗೆ ಒತ್ತಾಯಿಸುವುದಿಲ್ಲ. ಎಲ್ಲಾ ಮಾಹಿತಿಯನ್ನು ಕೇವಲ ಶಿಕ್ಷಣ ಮತ್ತು ಮಾಹಿತಿ ಉದ್ದೇಶಕ್ಕಾಗಿ ಮಾತ್ರ ಒದಗಿಸಲಾಗಿದೆ. ಯಾವುದೇ ಹೂಡಿಕೆ ನಿರ್ಧಾರ ತೆಗೆದುಕೊಳ್ಳುವ ಮೊದಲು, ಒಬ್ಬ ಅರ್ಹ ಹಣಕಾಸು ಸಲಹೆಗಾರರಿಂದ ಸಲಹೆ ಪಡೆದರೆ ಉತ್ತಮ).
More From GoodReturns

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Silver Rate Kannada: ಬೆಳ್ಳಿ ಪ್ರಿಯರಿಗೆ ಗುಡ್ ನ್ಯೂಸ್; ಒಂದೇ ದಿನ 5,000 ರೂ. ಇಳಿಕೆ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Silver Rate Today: ಭಾರತದಲ್ಲಿ ನಿಂತಲ್ಲೇ ನಿಂತ ಬೆಳ್ಳಿ ಬೆಲೆ! ಎಷ್ಟಿದೆ ಇಂದಿನ ದರ?

Gold Rate Bengaluru: ಮಹಿಳಾ ದಿನಾಚರಣೆಯಂದೇ ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ಗೊತ್ತಾ ಬೆಲೆ?

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Silver Rate Today: ಒಂದೇ ದಿನ 10,000 ಇಳಿಕೆ ಕಂಡ ಬೆಳ್ಳಿ ದರ! ಎಷ್ಟಿದೆ ಗೊತ್ತಾ ಬೆಲೆ?

Gold Rate Today: ವಾರದ ಆರಂಭದಲ್ಲಿ ಚಿನ್ನದ ಬೆಲೆ ಭಾರೀ ಇಳಿಕೆ; ದಿಢೀರ್ 1,960 ರೂ. ಕುಸಿತ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

Gold Rate Today: ಶುಕ್ರವಾರ ಚಿನ್ನ ಪ್ರಿಯರಿಗೆ ಒಲಿದ ಲಕ್ಷ್ಮಿ! 7,000 ರೂ. ಇಳಿಕೆ



Click it and Unblock the Notifications