ಬಜೆಟ್ ವಿಚಾರಕ್ಕೆ ಬಂದಾಗ ಸಂಬಳ ಪಡೆಯುವ ವರ್ಗದ ಗಮನ ಬರೀ ಆದಾಯ ತೆರಿಗೆ ವಿಚಾರದಲ್ಲಿ ಮಾಡಲಾಗುವ ಘೋಷನೆಯ ಮೇಲೆ ಇರುತ್ತದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮಾನ್ ಫೆಬ್ರವರಿ 1ರಂದು ಬಜೆಟ್ ಮಂಡನೆ ಮಾಡುವಾಗ ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆಯನ್ನು ಘೋಷಣೆ ಮಾಡಿಲ್ಲ.
ಹಳೆಯ ತೆರಿಗೆ ಪದ್ಧತಿಯಾಗಲಿ ಅಥವಾ ಹೊಸ ತೆರಿಗೆ ಪದ್ಧತಿಯಾಗಲಿ, ಯಾವುದರಲ್ಲೂ ಬದಲಾವಣೆಯನ್ನು ಮಾಡಲಾಗುವುದಿಲ್ಲ ಎಂದು ಹಣಕಾಸು ಸಚಿವರು ತಿಳಿಸಿದ್ದಾರೆ. ಹಾಗಾದರೆ ಹಳೆ ತೆರಿಗೆ ಪದ್ಧತಿ ಮತ್ತು ಹೊಸ ತೆರಿಗೆ ಪದ್ಧತಿ ಬಗ್ಗೆ ನಾವಿಲ್ಲಿ ತಿಳಿಯೋಣ ಮುಂದೆ ಓದಿ.....

ಹೊಸ ಆದಾಯ ತೆರಿಗೆ ಸ್ಲ್ಯಾಬ್
* 3 ಲಕ್ಷ ರೂಪಾಯಿವರೆಗೆ ಯಾವುದೇ ತೆರಿಗೆ ವಿಧಿಸಲಾಗುವುದಿಲ್ಲ
* 3-6 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ಶೇಕಡ 5 ರಷ್ಟು ತೆರಿಗೆ ವಿಧಿಸಲಾಗುತ್ತದೆ (ಸೆಕ್ಷನ್ 87ಎ ಅಡಿಯಲ್ಲಿ ತೆರಿಗೆ ರಿಯಾಯಿತಿ ಲಭ್ಯವಿದೆ)
* 6-9 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ಶೇಕಡ 10 ರಷ್ಟು ತೆರಿಗೆ. (ಸೆಕ್ಷನ್ 87ಎ ಅಡಿಯಲ್ಲಿ 7 ಲಕ್ಷ ರೂಪಾಯಿವರೆಗೆ ತೆರಿಗೆ ರಿಯಾಯಿತಿ ಲಭ್ಯವಿದೆ)
* 9-12 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ಶೇಕಡ 15 ರಷ್ಟು ತೆರಿಗೆ.
* 12-15 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ಶೇಕಡ 20 ರಷ್ಟು ತೆರಿಗೆ.
* 15 ಲಕ್ಷ ರೂಪಾಯಿವರೆಗಿನ ಆದಾಯಕ್ಕೆ ಶೇಕಡ 30 ರಷ್ಟು ತೆರಿಗೆ.
ಹೊಸ ತೆರಿಗೆ ಪದ್ಧತಿಯಡಿಯಲ್ಲಿ ವೈಯಕ್ತಿಕ, ಹಿರಿಯ ನಾಗರಿಕರು, ಸೂಪರ್ ಸಿನಿಯರ್ ಸಿಟಿಜನ್ ಎಲ್ಲರಿಗೂ ಒಂದೇ ತೆರಿಗೆ ಆಗಿದೆ.
ಹಳೆಯ ಆದಾಯ ತೆರಿಗೆ ಸ್ಲ್ಯಾಬ್
* 2.5 ಲಕ್ಷ ರೂಪಾಯಿವರೆಗಿನ ಆದಾಯದ ಮೇಲೆ ತೆರಿಗೆ ವಿನಾಯಿತಿ ಲಭ್ಯವಿದೆ.
* 2.5 ಲಕ್ಷದಿಂದ 5 ಲಕ್ಷ ರೂಪಾಯಿವರೆಗಿನ ಆದಾಯದ ಮೇಲೆ ಶೇಕಡ 5 ರಷ್ಟು ತೆರಿಗೆ.
* 5ರಿಂದ 20 ಲಕ್ಷ ರೂಪಾಯಿಯ ವೈಯಕ್ತಿಕ ಆದಾಯಕ್ಕೆ ಶೇಕಡ 20 ರಷ್ಟು ತೆರಿಗೆ ವಿಧಿಸಲಾಗುತ್ತದೆ.
* 10 ಲಕ್ಷ ರೂಪಾಯಿವರೆಗಿನ ವೈಯಕ್ತಿಕ ಆದಾಯದ ಮೇಲೆ ಶೇಕಡ 30 ರಷ್ಟು ತೆರಿಗೆಯನ್ನು ವಿಧಿಸಲಾಗುತ್ತದೆ.
ಹಳೆಯ ತೆರಿಗೆ ಪದ್ಧತಿಯಡಿಯಲ್ಲಿ ಹಿರಿಯ ನಾಗರಿಕರಿಗೆ 3 ಲಕ್ಷ ರೂಪಾಯಿವರೆಗೆ ವಿನಾಯಿತಿಯನ್ನು ನೀಡಲಾಗುತ್ತದೆ. 80 ವರ್ಷಕ್ಕಿಂತ ಮೇಲ್ಪಟ್ಟವರು 5 ಲಕ್ಷ ರೂಪಾಯಿಯನ್ನು ತೆರಿಗೆ ವಿನಾಯಿತಿಯನ್ನು ನೀಡಲಾಗುತ್ತದೆ.


Click it and Unblock the Notifications