ಅನ್ನ ಭಾಗ್ಯ ಯೋಜನೆಯಡಿ ಜನರಿಗೆ ವಿತರಿಸಬೇಕಿದ್ದ ಭಾರೀ ಪ್ರಮಾಣದ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗಿದ್ದು ಇದನ್ನು ಸಿಸಿಬಿ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಅಕ್ಕಿಯನ್ನು ಮೈಸೂರಿನಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು.
4.17 ಲಕ್ಷ ರೂಪಾಯಿ ಮೌಲ್ಯದ 12 ಟನ್ ಅರವತ್ತು ಕೆಜಿ ಅಕ್ಕಿಯನ್ನು ಮೈಸೂರಿನಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ಮೈಸೂರು ನಗರದ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೈಸೂರು- ಬೆಂಗಳೂರು ರಸ್ತೆಯ ಸಿದ್ದಲಿಂಗಪುರ ಬಳಿ ಖರೀದಿ ಸರಕುಪಟ್ಟಿ ಸೇರಿದಂತೆ ಸಮರ್ಪಕ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Anna Bhagya DBT Status: ಡಿಸೆಂಬರ್‌ನ ಅನ್ನಭಾಗ್ಯ ಮೊತ್ತ ಜಮೆಯಾಗಿದೆಯೇ?, ಸ್ಟೇಟಸ್ ಚೆಕ್ ಮಾಡಿ
ಖಚಿತ ಮಾಹಿತಿ ಮೇರೆಗೆ ಡಿಸಿಪಿ ಎಸ್.ಜಾಹ್ನವಿ, ಸಿಸಿಬಿ ಎಸಿಪಿ ಎಸ್.ಎನ್.ಸಂದೇಶ್ ಕುಮಾರ್ ಅವರ ನಿರ್ದೇಶನದಂತೆ ಆಹಾರ ನಿರೀಕ್ಷಕ ಬಿ.ವಿ.ಕಿರಣ್ ಕುಮಾರ್, ಸಿಸಿಬಿ ಘಟಕದ ಪೊಲೀಸ್ ಇನ್ಸ್ ಪೆಕ್ಟರ್ ಕೆ.ಸಿ.ಪೂವಯ್ಯ, ಪಿಎಸ್‌ಐಗಳಾದ ಲೇಪಾಕ್ಷ, ರಾಜು ಕೋಣನಕೇರಿ, ಸಿಬ್ಬಂದಿ ಮಧುಕುಮಾರ್, ಕೆ.ಜಿ.ಶ್ರೀನಿವಾಸ್ ಸೇರಿದಂತೆ ಅಧಿಕಾರಿಗಳ ತಂಡ ಮೋಹನ್ ಆರಾಧ್ಯ, ಶಿವಣ್ಣ ಕಾರ್ಯಾಚರಣೆ ನಡೆಸಿದ್ದರು. ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಂಡವನ್ನು ಶ್ಲಾಘಿಸಿದ್ದಾರೆ.
ಅನ್ನ ಭಾಗ್ಯ ಯೋಜನೆಯ ಮಾಹಿತಿ
ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರವನ್ನು ಪಡೆದರೆ ಐದು ಖಾತರಿ ಯೋಜನೆಗಳನ್ನು ಜಾರಿ ಮಾಡಲಾಗುವುದು ಎಂದು ಭರವಸೆ ನೀಡಿದೆ. ಅದರಂತೆಯೇ ಆಡಳಿತ ಆರಂಭಿಸಿದ ಬಳಿಕ ಈಗಾಗಲೇ ನಾಲ್ಕು ಯೋಜನೆಗಳನ್ನು ಆರಂಭಿಸಿದೆ. ಡಿಸೆಂಬರ್ 21 ರಿಂದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಕೂಡಾ ಆರಂಭವಾಗಲಿದೆ.
ಜುಲೈ 10, 2023 ರಿಂದ ಪ್ರಾರಂಭಿಸಲಾದ ಈ ಯೋಜನೆಯಡಿಯಲ್ಲಿ ಹತ್ತು ಕೆಜಿ ಅಕ್ಕಿ ನೀಡುವ ಭರವಸೆಯನ್ನು ನೀಡಲಾಗಿತ್ತು. ಆದರೆ ಅಕ್ಕಿ ಕೊರತೆಯಿಂದ 5 ಕೆಜಿ ಅಕ್ಕಿ ಮತ್ತು ನ್ನುಳಿದ ಐದು ಕೆಜಿಗೆ ಹಣವನ್ನು ನೀಡಲು ಸರ್ಕಾರ ನಿರ್ಧಾರ ಮಾಡಿತು.
ಅನ್ನ ಭಾಗ್ಯ ಯೋಜನೆಯಡಿ, ಕರ್ನಾಟಕ ಸರ್ಕಾರವು ಫಲಾನುಭವಿಗಳಿಗೆ ಪ್ರತಿ ಕೆಜಿಗೆ 34 ರೂಪಾಯಿಗಳ ನಗದು ಪಾವತಿಸುತ್ತದೆ. ಉಚಿತ ಅಕ್ಕಿ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಗೆ, ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ, ಅಂತ್ಯೋದಯ ಕುಟುಂಬದ ಸದಸ್ಯರಿಗೆ 34 ರೂಪಾಯಿಯಂತೆ ನೀಡಲಾಗುತ್ತದೆ.
ಅನ್ನಭಾಗ್ಯ ಯೋಜನೆ ಬಗ್ಗೆ ತಿಳಿದಿರಿ
ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಲ್ಲಿ ಅನ್ನ ಭಾಗ್ಯ ಯೋಜನೆಯನ್ನು ಸೇರ್ಪಡೆ ಮಾಡಿದ್ದರೂ ಕೂಡಾ ಇದು ಹೊಸದಾದ ಯೋಜನೆ ಏನಲ್ಲ. ಪ್ರಸ್ತುತ ಮುಖ್ಯಮಂತ್ರಿಯಾಗಿರುವ ಸಿದ್ಧರಾಮಯ್ಯರವರು ಈ ಹಿಂದೆ ಸಿಎಂ ಆಗಿದ್ದಾಗ ರಾಜ್ಯದಲ್ಲಿ ಆರಂಭ ಮಾಡಿರುವ ಯೋಜನೆ ಇದಾಗಿದೆ. ಈ ಯೋಜನೆಯನ್ನು ನೂತನ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಸೇರಿಸಲಾಗಿದೆ.
ಅನ್ನ ಭಾಗ್ಯ ಯೋಜನೆ ಸುಮಾರು ಹತ್ತು ವರ್ಷಗಳ ಹಿಂದೆ ಆರಂಭ ಮಾಡಲಾಗಿರುವ ಯೋಜನೆಯಾಗಿದೆ. ರಾಜ್ಯದಲ್ಲಿ ಜುಲೈ 2013 ರಿಂದ 'ಅನ್ನಭಾಗ್ಯ' ಯೋಜನೆಯನ್ನು ಅಂದಿನ ಸಿಎಂ ಸಿದ್ಧರಾಮಯ್ಯ ಜಾರಿಗೆ ತಂದಿದ್ದು, ಈ ಯೋಜನೆ ಜಾರಿಯಾದ ಬಳಿಕ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಪ್ರತಿ ಬಿಪಿಎಲ್ ಕುಟುಂಬಗಳಿಗೆ ವಿತರಣೆ ಮಾಡಲಾಗುವ ರೇಷನ್ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ.


Click it and Unblock the Notifications