ಪ್ರತಿ ತಿಂಗಳ ಮೊದಲ ದಿನ ಎಲ್‌ಪಿಜಿ ಬೆಲೆಯಲ್ಲಿ ಪರಿಷ್ಕರಣೆ ಮಾಡಲಾಗುತ್ತದೆ. ಇಂದು (ಸೆಪ್ಟೆಂಬರ್ 1) ಎಲ್‌ಪಿಜಿ ಗ್ರಾಹಕರಿಗೆ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಸಿಹಿಸುದ್ದಿಯನ್ನು ನೀಡಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ತೈಲ ಕಂಪನಿಗಳು 158 ರೂಪಾಯಿಗಳಷ್ಟು ಕಡಿತಗೊಳಿಸಿವೆ.
ಈ ಹಿಂದೆ ರಕ್ಷಾ ಬಂಧನದ ದಿನ ಕೇಂದ್ರ ಸರ್ಕಾರವು ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನು 200 ರೂಪಾಯಿಯಷ್ಟು ಇಳಿಕೆ ಮಾಡಿದೆ. ಹಾಗೆಯೇ ಉಜ್ವಲ ಯೋಜನೆಯಡಿ ಹೆಚ್ಚುವರಿ 200 ರೂಪಾಯಿ ಸಬ್ಸಿಡಿ ಘೋಷಿಸಿದೆ. ಇದರಿಂದಾಗಿ ಉಜ್ವಲ ಯೋಜನೆಯಡಿ ಸಿಲಿಂಡರ್ ಪಡೆದವರಿಗೆ 400 ರೂಪಾಯಿ ಸಬ್ಸಿಡಿ ಲಭ್ಯವಾಗಲಿದೆ.

ವಾಣಿಜ್ಯ ಎಲ್‌ಪಿಜಿ ದರ ಎಷ್ಟಿದೆ?
ಇನ್ನು ನೂತನ ವಾಣಿಜ್ಯ ಎಲ್‌ಪಿಜಿ ದರವು ಇಂದಿನಿಂದ ಜಾರಿಗೆ ಬರಲಿದ್ದು, ದೆಹಲಿಯ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ರಿಟೇಲ್ ಬೆಲೆ 1,522 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ ಸಿಲಿಂಡರ್ ದರವು 1636 ರೂಪಾಯಿಗೆ ಇಳಿಕೆಯಾಗಿದೆ. ಇನ್ನು ಮುಂಬೈನಲ್ಲಿ 1482 ರೂಪಾಯಿಗೆ ಕುಸಿತ ಕಂಡಿದೆ. ಚೆನ್ನೈನಲ್ಲಿ 1695 ರೂಪಾಯಿ ಆಗಿದೆ. ಬೆಂಗಳೂರಿನಲ್ಲಿ ಎಲ್‌ಪಿಜಿ ದರವು 1609.50 ರೂಪಾಯಿ ಆಗಿದೆ.
ವಾಣಿಜ್ಯ ಮತ್ತು ಗೃಹಬಳಕೆಯ ಎಲ್‌ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಸಿಲಿಂಡರ್‌ಗಳ ಮಾಸಿಕ ಪರಿಷ್ಕರಣೆಗಳು ಪ್ರತಿ ತಿಂಗಳ ಮೊದಲ ದಿನದಂದು ಮಾಡಲಾಗುತ್ತದೆ. ಹೊಸ ದರಗಳು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುತ್ತವೆ. ಆಗಸ್ಟ್‌ನಲ್ಲಿ ವಾಣಿಜ್ಯ ಸಿಲಿಂಡರ್‌ಗಳ ದರವನ್ನು ಇಳಿಕೆ ಮಾಡಲಾಗಿದೆ. ಆಗಸ್ಟ್‌ನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 99.75 ರೂಪಾಯಿ ಇಳಿಕೆ ಮಾಡಲಾಗಿದೆ. ಈ ಮೂಲಕ ಹೊಟೇಲ್ ಉದ್ಯಮಿಗಳಿಗೆ ಕೊಂಚ ಹೊರೆ ಕಡಿಮೆಯಾಗಿದೆ.
ಈ ಏರಿಕೆಗೆ ಮೊದಲು, ಈ ವರ್ಷದ ಮೇ ಮತ್ತು ಜೂನ್‌ನಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನು ಸತತ ಎರಡು ಬಾರಿ ಕಡಿತ ಮಾಡಲಾಗಿತ್ತು. ಮೇ ತಿಂಗಳಲ್ಲಿ ಒಎಂಸಿಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 172 ರೂಪಾಯಿಗಳಷ್ಟು ಕಡಿಮೆಗೊಳಿಸಿದರೆ, ಜೂನ್‌ನಲ್ಲಿ ಅದು 83 ರೂಪಾಯಿಗಳಷ್ಟು ಕಡಿಮೆ ಮಾಡಿದೆ. ಏಪ್ರಿಲ್‌ನಲ್ಲಿ ಸಹ ಅವುಗಳ ಬೆಲೆಗಳು ಪ್ರತಿ ಯೂನಿಟ್‌ಗೆ 91.50 ರೂಪಾಯಿಗಳಷ್ಟು ಕಡಿಮೆ ಮಾಡಲಾಗಿದೆ.
ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಈ ವರ್ಷ ಮಾರ್ಚ್ 1 ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‌ಗೆ 350.50 ರೂಪಾಯಿ ಮತ್ತು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ಯೂನಿಟ್‌ಗೆ 50 ರೂಪಾಯಿ ಕಡಿತಗೊಳಿಸಿದೆ.


Click it and Unblock the Notifications