ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) 2000 ರೂಪಾಯಿ ನೋಟಿನ ಬಗ್ಗೆ ಮೇ 19ರಂದು ದೇಶದಲ್ಲಿ ಚಲಾವಣೆಯಲ್ಲಿದ್ದ 2000 ರೂಪಾಯಿ ಮುಖಬೆಲೆಯ ನೋಟು ಚಲಾವಣೆ ಸ್ಥಗಿತಗೊಳಿಸಿ, ಅದನ್ನು ವಾಪಾಸ್ ಪಡೆಯುವುದಾಗಿ ತಿಳಿಸಿದೆ. ಮೇ 23ರಿಂದ ನೋಟು ಬದಲಾವಣೆ ಪ್ರಕ್ರಿಯೆ ಆರಂಭವಾಗಿದೆ. ಈಗ ಬ್ಯಾಂಕ್‌ಗಳಲ್ಲಿ ಸರತಿ ಸಾಲಿನಲ್ಲಿ ನಿಂತು 2000 ರೂಪಾಯಿ ನೋಟುಗಳನ್ನು ಬದಲಾವಣೆ ಮಾಡಲಾಗುತ್ತಿದೆ.
ಆದರೆ ನೀವು ಇನ್ಮುಂದೆ 2000 ರೂಪಾಯಿ ನೋಟು ಬದಲಾವಣೆ ಮಾಡಲು ಸರತಿ ಸಾಲಿನಲ್ಲಿ ನಿಲ್ಲಬೇಕಾಗಿಲ್ಲ. ಮನೆಯಲ್ಲಿಯೇ ಕುಳಿತು 2000 ರೂಪಾಯಿ ನೋಟುಗಳನ್ನು ಬದಲಾವಣೆ ಮಾಡಬಹುದಾಗಿದೆ. ನ್ಯೂ ಕ್ಯಾಶ್ ಲೋಡ್ ಫೀಚರ್‌ನೊಂದಿಗೆ ಗ್ರಾಹಕರು ಈಗ ತಮ್ಮ 2000 ರೂಪಾಯಿ ನೋಟುಗಳನ್ನು ಬ್ಯಾಂಕ್‌ನಲ್ಲಿ ಸರತಿ ಸಾಲಿನಲ್ಲಿ ನಿಂತು ಡೆಪಾಸಿಟ್ ಮಾಡುವ ಬದಲಾಗಿ ತಮ್ಮ ಮನೆ ಬಾಗಿಲಲ್ಲೇ ಡೆಪಾಸಿಟ್ ಮಾಡಬಹುದಾಗಿದೆ.

ಈ ಡೆಪಾಸಿಟ್ ಮಾಡಿದ ಮೊತ್ತವು ಗ್ರಾಹಕರ ಅಮೆಜಾನ್ ಪೇ ಬ್ಯಾಲೆನ್ಸ್ ಖಾತೆಗೆ ತ್ವರಿತವಾಗಿ ಮತ್ತು ಸುಲಭವಾಗಿ ನಿಮಿಷಗಳಲ್ಲಿ ಡೆಪಾಸಿಟ್ ಆಗಲಿದೆ. ಈ ಆಯ್ಕೆಯು ಅತೀ ಸರಳ ಹಾಗೂ ಯಾವುದೇ ತೊಂದರೆಯನ್ನು ಹೊಂದಿಲ್ಲದ ಪ್ರಕ್ರಿಯೆಯಾಗಿದೆ. ವರದಿಯ ಪ್ರಕಾರ ಬಳಕೆದಾರರು 2000 ರೂಪಾಯಿ ನೋಟುಗಳನ್ನು ಒಳಗೊಂಡಂತೆ ಪ್ರತಿ ತಿಂಗಳು ಒಟ್ಟಾಗಿ 50 ಸಾವಿರ ರೂಪಾಯಿಯನ್ನು ಡೆಪಾಸಿಟ್ ಮಾಡಲು ಸಾಧ್ಯವಾಗುತ್ತದೆ. ಈ ಬಗ್ಗೆ ಇಲ್ಲಿದೆ ಅಧಿಕ ಮಾಹಿತಿ ಮುಂದೆ ಓದಿ...
ಅಮೆಜಾನ್ ಪೇ ಬ್ಯಾಲೆನ್ಸ್ ಖಾತೆಗೆ ಈ ಹಣವು ಡೆಪಾಸಿಟ್ ಆದಾಗ ನೀವು ಅದನ್ನು ಆನ್‌ಲೈನ್ ಶಾಪಿಂಗ್, ಚಿಲ್ಲರೆ ಅಂಗಡಿಗಳಲ್ಲಿ ಬಾರ್‌ಕೋಡ್‌ನೊಂದಿಗೆ ಪಾವತಿ ಮಾಡಲು ಸಾಧ್ಯವಾಗುತ್ತದೆ. ಅಮೆಜಾನ್ ಇ- ಕಾಮರ್ಸ್ ಸೇರಿದಂತೆ ವಿವಿಧ ವಿಷಯಗಳಿಗೆ ಈ ಮೊತ್ತವನ್ನು ಬಳಕೆ ಮಾಡಲು ಸಾಧ್ಯವಾಗುತ್ತದೆ. ಇತರ ಬ್ಯಾಂಕ್ ಖಾತೆಗಳಿಗೆ ಮತ್ತು ಬಳಕೆದಾರರ ಬ್ಯಾಂಕ್ ಖಾತೆಗಳಿಗೂ ಹಣವನ್ನು ವರ್ಗಾವಣೆ ಮಾಡಿಕೊಳ್ಳಬಹುದು.
ಪ್ರಕ್ರಿಯೆ ಯಾವ ರೀತಿ ನಡೆಯುತ್ತದೆ?
ನಿಮ್ಮ ಮುಂದಿನ ಖರೀದಿಯ ಸಾಗಣೆಯ ಸಂದರ್ಭದಲ್ಲಿ ನೀವು ಡೆಲಿವರಿ ಪಾರ್ಟ್‌ನರ್‌ಗೆ ನೀಡುವ ಮೂಲಕ ಎರಡು 2,000 ರೂಪಾಯಿ ನೋಟು ಮುಖಬೆಲೆ ಸೇರಿದಂತೆ ಅಗತ್ಯವಿರುವ ಮೊತ್ತದ ಹಣವನ್ನು ನೀವು ಸುಲಭವಾಗಿ ಡೆಪಾಸಿಟ್ ಮಾಡಿಕೊಳ್ಳಬಹುದಾಗಿದೆ. ಮಾಹಿತಿ ಪ್ರಕಾರ ನೀವು ನೀಡಿದ ಮೊತ್ತವನ್ನು ಕೂಡಲೇ ನಿಮ್ಮ ಅಮೆಜಾನ್ ಪೇ ಬ್ಯಾಲೆನ್ಸ್ ಅಕೌಂಟ್‌ಗೆ ಜಮೆ ಮಾಡಲಾಗುತ್ತದೆ.
ಒಂದು ವಾರದಲ್ಲೇ ಕೋಟ್ಯಾಂತರ ರೂಪಾಯಿ ವಾಪಾಸ್
ಭಾರತದ ಅತೀ ದೊಡ್ಡ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ (ಎಸ್‌ಬಿಐ) ಒಂದು ವಾರದಲ್ಲೇ 2000 ರೂಪಾಯಿ ಮುಖಬೆಲೆಯ 14,000 ಕೋಟಿ ರೂಪಾಯಿಯನ್ನು ಡೆಪಾಸಿಟ್ ಮಾಡಲಾಗಿದೆ. ಇನ್ನು 3,000 ಕೋಟಿ ರೂಪಾಯಿಯಷ್ಟು 2000 ರೂಪಾಯಿಯ ನೋಟನ್ನು ಬದಲಾವಣೆ ಮಾಡಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಎಸ್‌ಬಿಐ ಅಧ್ಯಕ್ಷ ದಿನೇಶ್ ಖಾರಾ, "ಸುಮಾರು 14,000 ಕೋಟಿ ರೂಪಾಯಿಯ ಮೌಲ್ಯದ 2,000 ಕರೆನ್ಸಿ ನೋಟುಗಳು ಖಾತೆಗಳಿಗೆ ಗ್ರಾಹಕರು ಡೆಪಾಸಿಟ್ ಮಾಡಿದ್ದಾರೆ. 3,000 ಕೋಟಿ ರೂಪಾಯಿ ಮೌಲ್ಯದ 2000 ರೂಪಾಯಿಯ ನೋಟುಗಳನ್ನು ಬದಲಾವಣೆ ಮಾಡಿದೆ. ಮಾರುಕಟ್ಟೆಯಲ್ಲಿರುವ ಶೇಕಡ 20ರಷ್ಟು ನೋಟು ನಮ್ಮಲ್ಲಿದೆ," ಎಂದು ತಿಳಿಸಿದ್ದಾರೆ.
ಈಗಾಗಲೇ ಆರ್‌ಬಿಐ 2000 ರೂಪಾಯಿಯ ನೋಟನ್ನು ಬದಲಾವಣೆ ಮಾಡುವ ವಿಚಾರದಲ್ಲಿ ಆತಂಕ ಬೇಡ ಎಂದು ಜನರಿಗೆ ಮಾಹಿತಿ ನೀಡಿದೆ. ಆರ್‌ಬಿಐ ನೋಟು ಬದಲಾವಣೆಗೆ ಸೆಪ್ಟೆಂಬರ್ 30ರವರೆಗೆ ಸಮಯವಕಾಶವನ್ನು ನೀಡಿದ್ದು ನೀವು ಒಂದು ಬಾರಿ 2000 ರೂಪಾಯಿಯ 10 ನೋಟುಗಳಂತೆ ಒಟ್ಟು 20 ಸಾವಿರ ರೂಪಾಯಿ ಜಮೆ ಅಥವಾ ಬದಲಾವಣೆ ಮಾಡಿಕೊಳ್ಳಬಹುದು.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications