ಹೂಡಿಕೆ ವಿಚಾರಕ್ಕೆ ಬಂದಾಗ ನಾವು ಎಂದಿಗೂ ಕೂಡಾ ಯಾವ ಹೂಡಿಕೆಯಿಂದ ಅಧಿಕ ರಿಟರ್ನ್ ಪಡೆಯಲು ಸಾಧ್ಯವೆಂದು ನೋಡುತ್ತೇವೆ. ಹಾಗೆಯೇ ಯಾವುದರಲ್ಲಿ ಹೂಡಿಕೆ ಮಾಡಿದರೆ ಸುರಕ್ಷಿತ ಎಂದು ಕೂಡಾ ನೋಡುತ್ತೇವೆ. ಅಂತಹ ಸುರಕ್ಷಿತ ಹೂಡಿಕೆಗಳ ಆಯ್ಕೆಯ ವಿಚಾರಕ್ಕೆ ಬಂದಾಗ ನಮ್ಮ ಮುಂದಿರುವ ಆಯ್ಕೆ ಫಿಕ್ಸಿಡ್ ಡೆಪಾಸಿಟ್ ಆಗಿದೆ. ಹೌದು, ಭಾರತದಲ್ಲಿರುವ ಅತೀ ಸುರಕ್ಷಿತ ಹೂಡಿಕೆ ಆಯ್ಕೆಗಳಲ್ಲಿ ಫಿಕ್ಸಿಡ್ ಡೆಪಾಸಿಟ್ ಕೂಡಾ ಒಂದಾಗಿದೆ. ಅದರಲ್ಲೂ ಹಿರಿಯ ನಾಗರಿಕರಿಗೆ ಇದರಲ್ಲಿ ಅಧಿಕ ಬಡ್ಡಿದರ ನೀಡಲಾಗುತ್ತದೆ.
ಸಾಮಾನ್ಯವಾಗಿ ನಾವು ಹೇಗೆ ಫಿಕ್ಸಿಡ್ ಡೆಪಾಸಿಟ್ ಅನ್ನು ಸುರಕ್ಷಿತ ಹೂಡಿಕೆ ಎಂದು ನೋಡುತ್ತೇವೋ, ಹಾಗೆಯೇ ಇದರಲ್ಲಿ ಉತ್ತಮ ರಿಟರ್ನ್ ಅನ್ನು ಪಡೆಯಲು ಸಾಧ್ಯವಾಗುತ್ತದೆ. ಫಿಕ್ಸಿಡ್ ಡೆಪಾಸಿಟ್ ನಿಗದಿತವಾದ ರಿಟರ್ನ್ ಅನ್ನು ನೀಡುತ್ತದೆ. ಹಾಗೆಯೇ ಹಿರಿಯ ನಾಗರಿಕರಿಗಾಗಿ ಇರುವ ಅತೀ ಪ್ರಸಿದ್ಧ ಹೂಡಿಕೆ ಆಯ್ಕೆಗಳಲ್ಲಿ ಒಂದಾಗಿದೆ. ಭಾರತದಲ್ಲಿ ಹಲವಾರು ಬ್ಯಾಂಕುಗಳು ಹಿರಿಯ ನಾಗರಿಕರಿಗೆ ಆಕರ್ಷಕ ಬಡ್ಡಿದರದಲ್ಲಿ ಎಫ್‌ಡಿ ನೀಡುತ್ತದೆ. ಹಾಗೆಯೇ ಪ್ರತ್ಯೇಕವಾಗಿ ಹಿರಿಯ ನಾಗರಿಕರಿಗೆ ಎಫ್‌ಡಿ ಯೋಜನೆಗಳನ್ನು ಕೂಡಾ ಜಾರಿ ಮಾಡುತ್ತದೆ.

ಯೂನಿಟಿ ಸ್ಮಾಲ್ ಫೈನಾನ್ಸ್ ಬ್ಯಾಂಕ್, ಉತ್ಕರ್ಷ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಮತ್ತು ಫಿನ್‌ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಸಾರ್ವಜನಿಕ ಸ್ವಾಮ್ಯದ ಮತ್ತು ಖಾಸಗಿ ಬ್ಯಾಂಕುಗಳು ಹಿರಿಯ ನಾಗರಿಕರಿಗೆ ಫಿಕ್ಸಿಡ್ ಡೆಪಾಸಿಟ್ ಮೇಲೆ ನೀಡುವ ಬಡ್ಡಿದರಕ್ಕಿಂತ ಅಧಿಕ ಬಡ್ಡಿದರವನ್ನು ನೀಡುತ್ತದೆ. ಆದರೆ ನಾವು ಫಿಕ್ಸಿಡ್ ಡೆಪಾಸಿಟ್‌ನಲ್ಲಿ ಹೂಡಿಕೆ ಮಾಡುವಾಗ ಯಾವ ಬ್ಯಾಂಕ್‌ನಲ್ಲಿ ಬಡ್ಡಿದರ ಎಷ್ಟಿದೆ ಎಂದು ಹೋಲಿಕೆ ಮಾಡಿಕೊಂಡು ಅಧಿಕ ಬಡ್ಡಿದರ ನೀಡುವ ಬ್ಯಾಂಕ್ ಅನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಹಾಗೆಯೇ ಈ ಸಂದರ್ಭದಲ್ಲಿ ಗ್ರಾಹಕ ಸೇವೆ ಇತರೆ ಅಂಶಗಳ ಬಗ್ಗೆಯೂ ಪರಿಶೀಲನೆ ಮಾಡಬೇಕಾಗುತ್ತದೆ. ಈ ಬಗ್ಗೆ ಇಲ್ಲಿದೆ ಮಾಹಿತಿ ಮುಂದೆ ಓದಿ...
ಹಿರಿಯ ನಾಗರಿಕರಿಗೆ ಎಫ್‌ಡಿ ಮೇಲೆ ಉತ್ತಮ ಬಡ್ಡಿದರ ನೀಡುವ ಬ್ಯಾಂಕುಗಳು
ಯೂನಿಟಿ ಸ್ಮಾಲ್ ಫೈನಾನ್ಸ್ ಬ್ಯಾಂಕ್: ಯೂನಿಟಿ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನಲ್ಲಿ ಹಿರಿಯ ನಾಗರಿಕರಿಗೆ ನಿಗದಿತ ಅವಧಿಯ ಡೆಪಾಸಿಟ್ ಮೇಲೆ ಶೇಕಡ 4.50ರಿಂದ ಶೇಕಡ 9.50ರಷ್ಟು ಬಡ್ಡಿದರವನ್ನು ನೀಡುತ್ತದೆ. ಈ ಬ್ಯಾಂಕ್‌ನಲ್ಲಿ 1,001 ದಿನಗಳ ಅವಧಿಯ ಎಫ್‌ಡಿ ಮೇಲೆ ಶೇಕಡ 9.50ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ. ನಾವು ಒಂದು ವೇಳೆ ಅವಧಿಗೂ ಕೂಡಾ ಎಫ್‌ಡಿಯನ್ನು ವಿತ್‌ಡ್ರಾ ಮಾಡಲು ಬಯಸಿದರೆ ದಂಡವನ್ನು ವಿಧಿಸಲಾಗುತ್ತದೆ. ಈ ಬ್ಯಾಂಕ್‌ನಲ್ಲಿ ಶೇಕಡ 1ರಷ್ಟು ದಂಡವಿದೆ.
ಉತ್ಕರ್ಷ್ ಸ್ಮಾಲ್ ಫೈನಾನ್ಸ್ ಬ್ಯಾಂಕ್: ಉತ್ಕರ್ಷ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಫೆಬ್ರವರಿ 27ರಂದು 2 ಕೋಟಿ ರೂಪಾಯಿಗಿಂತ ಕಡಿಮೆ ಮೊತ್ತದ ಫಿಕ್ಸಿಡ್ ಡೆಪಾಸಿಟ್ ಮೇಲಿನ ಬಡ್ಡಿದರವನ್ನು ಏರಿಕೆ ಮಾಡಿದೆ. ಈ ಬ್ಯಾಂಕ್‌ನಲ್ಲಿ ಸಾಮಾನ್ಯ ನಾಗರಿಕರಿಗೆ ಶೇಕಡ 8.25ರಷ್ಟು ಬಡ್ಡಿದರ ನೀಡಿದರೆ ಹಿರಿಯ ನಾಗಕರಿಗೆ ಶೇಕಡ 9ರಷ್ಟು ಎಫ್‌ಡಿ ಬಡ್ಡಿದರವನ್ನು ನೀಡಲಾಗುತ್ತದೆ. ಈ ಬಡ್ಡಿದರವು 700 ದಿನಗಳ ಎಫ್‌ಡಿ ಮೇಲೆ ಅನ್ವಯವಾಗುತ್ತದೆ.
ಫಿನ್‌ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್: ಫಿನ್‌ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಮಾರ್ಚ್ 24ರಂದು 2 ಕೋಟಿ ರೂಪಾಯಿಗಿಂತ ಕಡಿಮೆ ಮೊತ್ತದ ಫಿಕ್ಸಿಡ್ ಡೆಪಾಸಿಟ್ ಮೇಲಿನ ಬಡ್ಡಿದರವನ್ನು ಹೆಚ್ಚಳ ಮಾಡಿದೆ. ಸಾಮಾನ್ಯ ನಾಗರಿಕರಿಗೆ 500 ದಿನಗಳ ಎಫ್‌ಡಿ ಮೇಲೆ ಈ ಬ್ಯಾಂಕ್‌ನಲ್ಲಿ ಗರಿಷ್ಠ ಶೇಕಡ 7.75ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ. ಆದರೆ ಹಿರಿಯ ನಾಗರಿಕರಿಗೆ ಇದೇ ಅವಧಿಯ ಎಫ್‌ಡಿ ಮೇಲೆ ಶೇಕಡ 8.35ರಷ್ಟು ಬಡ್ಡಿದರವನ್ನು ನೀಡಲಾಗುತ್ತದೆ. ಇನ್ನು 1000 ದಿನಗಳ ಎಫ್‌ಡಿ ಮೇಲೆ ಸಾಮಾನ್ಯ ನಾಗರಿಕರಿಗೆ ಶೇಕಡ 8.41ರಷ್ಟು ಬಡ್ಡಿದರ ನೀಡಿದರೆ, ಹಿರಿಯ ನಾಗರಿಕರಿಗೆ ಶೇಕಡ 9.01ರಷ್ಟು ಬಡ್ಡಿದರ ನೀಡಲಾಗುತ್ತದೆ.


Click it and Unblock the Notifications